ಹಾಡುಗಲೇ ಗುಂಡು ಹಾರಿಸಿ ವಿಜಯಪುರ ರೌಡಿಶೀಟರ್ ಹತ್ಯೆ. ಪಾಲಿಕೆ ಚುನಾವಣೆ ದ್ವೇಷದ ಹಿನ್ನೆಲೆ ಶೂಟೌಟ್. ಲೈಸೆನ್ಸ್ ಪಿಸ್ತೂಲಲ್ಲ, ಕಂಟ್ರಿ ಪಿಸ್ತೂಲು ಬಳಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವಿಜಯಪುರ (ಮೇ.6): ಕಳೆದ ಬಾರಿ ನಡೆದ ಮಹಾನಗರ ಪಾಲಿಕೆಯ ಚುನಾವಣೆ ದ್ವೇಷದ ಹಿನ್ನೆಲೆ ವಿಜಯಪುರ ಮಹಾನಗರ ಪಾಲಿಕೆ ಸದಸ್ಯೆ ನಿಶಾತ್ ಅವರ ಪತಿ ರೌಡಿಶೀಟರ್ ಹೈದರ್ ಅಲಿ ನದಾಫ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಎಚ್‌ಡಿ ಆನಂದಕುಮಾರ ಮಾಹಿತಿ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 4ಕ್ಕಿಂತ ಹೆಚ್ಚು ಬಾರಿ ಹೈದರ್ ಅಲಿ ನದಾಫ್‌ನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಅಲ್ಲದೇ, ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ. ಲೈಸೆನ್ಸ್ ಗನ್ ಮೂಲಕ ಹತ್ಯೆ ಮಾಡಿಲ್ಲ. ಹತ್ಯೆಯಲ್ಲಿ ಕಂಟ್ರಿಮೇಡ್ ಪಿಸ್ತೂಲು ಉಪಯೋಗವಾಗಿರಬೇಕು ಎಂದಿದ್ದಾರೆ. ಈ ಹತ್ಯೆ ಮಹಾನಗರ ಪಾಲಿಕೆಯ ಚುನಾವಣೆ ದ್ವೇಷಕ್ಕಾಗಿ ಹತ್ಯೆ ಮಾಡಲಾಗಿದೆ. ಆದಷ್ಟು ಬೇಗನೆ ದುಷ್ಕರ್ಮಿಗಳನ್ನು ಬಂಧನ ಮಾಡಲಾಗುತ್ತದೆ ಎಂದಿದ್ದಾರೆ.
ಘಟನೆ ಹಿನ್ನೆಲೆ: ಶನಿವಾರ ಬೆಳಗ್ಗೆ ಗುಮ್ಮಟನಗರಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿತ್ತು. ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ಹಾಡುಹಗಲೇ ಗುಂಡು ಹಾರಿಸಿ ರೌಡಿಶೀಟರ್ ಓರ್ವನನ್ನು ಹತ್ಯೆ ಮಾಡಲಾಗಿತ್ತು. ಅಪರಿಚಿತ ದುಷ್ಕರ್ಮಿಗಳು ರೌಡಿಶೀಟರ್ ಹೈದರ್ ಅಲಿ ನದಾಫ್ ಮೇಲೆ ಸಾರ್ವಜನಿಕವಾಗಿ ಗುಂಡು ಹಾರಿಸಿದ್ದು, ಸ್ಥಳದಲ್ಲಿಯೇ ಹೈದರ್ ಅಲಿ ನದಾಫ್ ಸಾವನ್ನಪ್ಪಿದ್ದಾನೆ. ಫೈರಿಂಗ್ ಮಾಡಿದ ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಂತಕರು ಎರಡು ಕಾರು ಮತ್ತು ಬೈಕ್ ನಲ್ಲಿ ಪರಾರಿಯಾಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಹೈದರ್ ಪತ್ನಿ ವಿಜಯಪುರ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದಾಳೆ.
ಹೈದರ್ ವಾರ್ಡ್ ನಂ 17ರ ಕಾರ್ಪೋರೆಟರ್ ಆಗಿರುವ ಹೈದರ್ ಪತ್ನಿ ನಿಶಾತ್ ಪಕ್ಷೇತರವಾಗಿ ಸ್ಪರ್ಧಿಸಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆದ್ದು ಬಂದಿದ್ದಳು. ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆ ಈ ಪೈರಿಂಗ್ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದರು. ಅದೀಗ ಸ್ಪಷ್ಟವಾಗಿದೆ. ಹಂತಕರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಎಸ್ಪಿ ಆನಂದಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು; ಹಾಡಹಗಲೇ ರೌಡಿಶೀಟರ್ ಗುಂಡಿಕ್ಕಿ ಹತ್ಯೆ!
ರೌಡಿ ಶೀಟರ್ ಹೈದರ್ ಮೇಲೆ 5 ರಿಂದ 6 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ಬಳಕೆಯಾಗಿದ್ದ ಕಂಟ್ರಿಮೆಡ್ ಪಿಸ್ತೂಲು, ಮಧ್ಯಪ್ರದೇಶದಿಂದ ಬಂದಿದ್ದ ಗನ್ ಗಳಿಂದ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಯಾಗಿದೆ. ಪ್ರೋಪೆಶನಲ್ ಶಾರ್ಪ್‌ಶೂಟರ್‌ಗಳಿಂದ ಹತ್ಯೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಹಂತಕರಿಗಾಗಿ ಹುಡುಕಾಟ ತೀವ್ರಗೊಂಡಿದೆ.
ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ, ಸಿಸಿಬಿಯಿಂದ ಆಪ್ತನ ಬಂಧನ!