ವಿಜಯಪುರದಲ್ಲಿ ರೌಡಿಶೀಟರ್‌ ಹ*ತ್ಯೆ: ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿದ ಪೊಲೀಸ್‌

Published : Jul 15, 2025, 10:26 AM IST
vijayapura Sushil Kale

ಸಾರಾಂಶ

ವಿಜಯಪುರದಲ್ಲಿ ರೌಡಿಶೀಟರ್ ಸುಶೀಲ ಕಾಳೆ ಹ*ತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪರಾರಿಯಾಗಲು ಯತ್ನಿಸಿದ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದಾಗ ಆತ್ಮರಕ್ಷಣಾರ್ಥವಾಗಿ ಪೊಲೀಸರು ಗುಂಡು ಹಾರಿಸಿದರು.

ವಿಜಯಪುರ: ಜಿಲ್ಲೆಯಲ್ಲಿ ರೌಡಿಶೀಟರ್ ಸುಶೀಲ ಕಾಳೆ ಹ*ತ್ಯೆ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಆಕಾಶ್ ಕಲ್ಲವ್ವಗೋಳ ಮತ್ತು ಸುದೀಪ್ ಅಲಿಯಾಸ್ ಸುಭಾಷ ಬಗಲಿ ಎಂಬ ಇಬ್ಬರ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ತಡರಾತ್ರಿ ನಡೆದಿದೆ.

ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ, ಗಾಂಧಿ ಚೌಕ್ ಪೊಲೀಸ್ ಠಾಣೆಯ ಸಿಪಿಐ ಪ್ರದೀಪ್ ತಳಕೇರಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಸ್ಥಳ ಪರಿಶೀಲನೆಗಾಗಿ ವಿಜಯಪುರ ಜಿಲ್ಲಾ ಎಸ್‌ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ವಿಜಯಪುರದ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಈ ಫೈರಿಂಗ್ ನಡೆದಿದೆ.

ಮಾಹಿತಿ ಪ್ರಕಾರ, ಬೈಕ್ ಮೇಲೆ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ಯತ್ನಿಸಿದರು. ಈ ವೇಳೆ, ಆರೋಪಿಗಳು ತಮ್ಮ ಬಳಿ ಇದ್ದ ಕಂಟ್ರಿಮೆಡ್ ಪಿಸ್ತೂಲ್‌ನಿಂದ ಪೊಲೀಸರ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದರು. ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ನಡೆಸಿದರು. ಇದರಲ್ಲಿ ಇಬ್ಬರು ಆರೋಪಿಗಳು ಕಾಲಿಗೆ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ಮೂರು ಬುಲೆಟ್ ಕೇಸ್‌ಗಳು ಪತ್ತೆಯಾಗಿವೆ. ಅಲ್ಲದೆ, ಆರೋಪಿಗಳ ಬಳಿಯಿಂದ ಕಂಟ್ರಿಮೆಡ್ ಪಿಸ್ತೂಲ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಸ್ಪ್ಲೆಂಡರ್ ಬೈಕ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗತಕಾಲದಲ್ಲಿ ಆಕಾಶ್ ವಿರುದ್ಧ ಏಳಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿದ್ದವು. ನಿನ್ನೆ ಮಧ್ಯಾಹ್ನವೇ ವಿಜಯಪುರದಲ್ಲಿ ಸುಶೀಲ ಕಾಳೆ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಹಂತಕ ಬಾಗಪ್ಪನ ಹಳೆಯ ಆಪ್ತನಾಗಿದ್ದ ಸುಶೀಲ ಕಾಳೆಯ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

ವಿಷಯವೆಂದರೆ ಮುಖ್ಯಮಂತ್ರಿ ಅವರು ಇಂಡಿ ಪಟ್ಟಣಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ, ವಿಜಯಪುರದಲ್ಲಿ ಈ ಭೀಕರ ಕೊಲೆ ನಡೆಯಿತು. ಆಗ ಪೊಲೀಸರು ಮುಖ್ಯಮಂತ್ರಿ ಬಂದೋಬಸ್ತಿನಲ್ಲಿ ತೊಡಗಿಕೊಂಡಿದ್ದರು. ಬಳಿಕ ಆರೋಪಿಗಳನ್ನು ಶೋಧಿಸಲು ಪೊಲೀಸ್ ತಂಡ ವಿಶೇಷ ಕಾರ್ಯಾಚರಣೆ ನಡೆಸಿತು. ಬಂಧನ ಸಮಯದಲ್ಲೇ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಪರಿಣಾಮ ಪೊಲೀಸ್ ಫೈರಿಂಗ್ ಅನಿವಾರ್ಯವಾಯಿತು. ಈ ಘಟನೆಯು ಜಿಲ್ಲೆಯಲ್ಲಿ ಭಾರೀ ತಲ್ಲಣಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ