ಕರ್ನಾಟಕವೇ ಬೆಚ್ಚಿ ಬೀಳಿಸುವ ಸುದ್ದಿ ಕೊಟ್ಟ ದಿವ್ಯಾ ವಸಂತ ಗ್ಯಾಂಗ್‌ಗೂ ನಮಗೂ ಸಂಬಂಧವಿಲ್ಲ: ರಾಜ್‌ ನ್ಯೂಸ್ ಸ್ಪಷ್ಟನೆ

By Kannadaprabha News  |  First Published Jul 7, 2024, 7:19 AM IST

ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳಿಗೂ ರಾಜ್‌ ನ್ಯೂಸ್‌ಗೂ ಯಾವುದೇ ಸಂಬಂಧವಿಲ್ಲವೆಂದು ಆ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. 
 


ಬೆಂಗಳೂರು (ಜು.07): ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳಿಗೂ ರಾಜ್‌ ನ್ಯೂಸ್‌ಗೂ ಯಾವುದೇ ಸಂಬಂಧವಿಲ್ಲವೆಂದು ಆ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ರಾಜ್‌ ನ್ಯೂಸ್‌ನಲ್ಲಿ ನಾವು ಯಾವುದೇ ಸಿಇಓ ಹುದ್ದೆಯನ್ನು ಸೃಷ್ಟಿಸಿಲ್ಲ. ರಾಜಾನುಕುಂಟೆ ವೆಂಕಟೇಶ್ ಎಂಬುವವರು 3 ತಿಂಗಳಿಂದ ನಮ್ಮ ಸಂಸ್ಥೆಯಲ್ಲಿ ಮಾರ್ಕೆಟಿಂಗ್‌ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. 

ನಮ್ಮ ಸಂಸ್ಥೆಯ ಸಿಇಓ ಹಾಗೂ ಉದ್ಯೋಗಿಯಲ್ಲ. ಸಿಇಓ ಎಂದು ವೆಂಕಟೇಶ್ ಹೇಳಿಕೊಂಡಿರುವುದಕ್ಕೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ ನ್ಯೂಸ್ ಎಂಡಿ ಹೇಳಿದ್ದಾರೆ. ಇನ್ನುಳಿದ ಆರೋಪಿಗಳು ನಮ್ಮ ಸಂಸ್ಥೆಯ ಉದ್ಯೋಗಿಗಳಲ್ಲ. ಆರೋಪಿಗಳು ರಾಜ್‌ ನ್ಯೂಸ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವುದರಿಂದ ಕಾನೂನು ಕ್ರಮಕ್ಕೆ ಮುಂದಾಗಿದ್ದೇವೆ. ರಾಜ್ ನ್ಯೂಸ್‌ ಹೆಸರನ್ನು ಈ ಆರೋಪಿಗಳ ಜತೆ ಸೇರಿಸಬಾರದು ಎಂದು ಎಂಡಿ ಮನವಿ ಮಾಡಿದ್ದಾರೆ.

Tap to resize

Latest Videos

100 ಜನರಿಗೆ ದಿವ್ಯಾ ವಸಂತ ಗ್ಯಾಂಗ್ ಸುಲಿಗೆ: ರಾಜ್ಯವೇ ಖುಷಿಪಡುವ ನ್ಯೂಸ್ ಕೊಟ್ಟವಳು ನಾಪತ್ತೆ!

ರಾಜ್ಯಕ್ಕೆ ಖುಷಿ ಸುದ್ದಿಕೊಟ್ಟವಳ ಕಹಿ ಸುದ್ದಿ: ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೆ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ರೀಲ್ಸ್‌ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ 15 ಸಾವಿರ ರು ಸಂಬಳ ಇದ್ದರೆ, ಮನರಂಜನಾ ವಾಹಿನಿಯಲ್ಲಿ ಹಾಸ್ಯ ಕಾರ್ಯಕ್ರಮದ ನಟಿಸಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರು ಸಂಭಾವನೆ ಸಿಗುತ್ತಿತ್ತು. ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ, ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವೈದ್ಯರು ಸೇರಿದಂತೆ 100ಕ್ಕೂ ಹೆಚ್ಚಿನ ಜನರಿಗೆ ಸುಲಿಗೆ: ರಾಜ್ ನ್ಯೂಸ್‌ ವಾಹಿನಿ ಸೇರುವ ಮುನ್ನ ಯೂಟ್ಯೂಬ್‌ನಲ್ಲಿ ತನ್ನದೇ ಚಾನಲ್ ಅನ್ನು ವೆಂಕಟೇಶ್‌ ಮಾಡಿಕೊಂಡಿದ್ದ. ಆ ಚಾನೆಲ್‌ಗೆ ಸಂದರ್ಶನಕ್ಕಾಗಿ ದಿವ್ಯಾಳನ್ನು ಆತ ಪರಿಚಯ ಮಾಡಿಕೊಂಡಿದ್ದ. ನಂತರ ಇಬ್ಬರ ನಡುವೆ ಆತ್ಮೀಯ ಒಡನಾಟವಿತ್ತು. ಈ ಗೆಳೆತನದಲ್ಲೇ ಇಬ್ಬರು ಸುಲಿಗೆಗೆ ಕೃತ್ಯಕ್ಕಿಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಳು ಸುದ್ದಿ ಹರಡಿದರೆ ಯಾವುದೇ ಪಕ್ಷದವರಾದರೂ ಬಿಡಬೇಡಿ: ಸಿಎಂ ಸಿದ್ದರಾಮಯ್ಯ

ಮಸಾಜ್ ಪಾರ್ಲರ್‌ಗಳು ಹಾಗೂ ವೈದ್ಯರು ಸೇರಿ ಹಣವಂತರಿಗೆ ಹನಿಟ್ರ್ಯಾಪ್‌ ಮಾದರಿಯಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದ್ದರು. ಇದುವರೆಗೆ ಸುಮಾರು 100ಕ್ಕೂ ಹೆಚ್ಚಿನ ಜನರಿಂದ ಈ ತಂಡ ಸುಲಿಗೆ ಮಾಡಿದೆ. ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರುವರೆಗೆ ಆನ್‌ಲೈನ್‌ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

click me!