* ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ
* ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಸುದ್ದಿಗೋಷ್ಠಿ
* ಮಹತ್ವ ಅಂಶಗಳನ್ನ ಬಿಚ್ಚಿಟ್ಟ ಉಗ್ರಪ್ಪ
ಮೈಸೂರು, (ಆ.26): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಕೆಲ ಅಂಶಗಳನ್ನ ಬಿಚ್ಚಿಟ್ಟಿದ್ದಾರೆ.
ಮೈಸೂರಿನಲ್ಲಿ ಇಂದು (ಆ.26) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ.ಎಸ್.ಉಗ್ರಪ್ಪ, ಇದೊಂದು ಅಮಾನವೀಯವಾದ ಕೃತ್ಯ. ದೆಹಲಿಯ ನಿರ್ಭಯಾ ಕೇಸ್ ಗಿಂತ ಇದು ವಿಭಿನ್ನ. ತೆಲಂಗಾಣದ ರೆಡ್ಡಿ ಕೇಸ್ ಗಿಂತ ಹೀನ ಕೃತ್ಯವಿದು. ಪ್ರಕರಣವನ್ನ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
undefined
ರೇಪ್ ಸಂತ್ರಸ್ತೆ ಅಷ್ಟೊತ್ತಿಗೆ ಆ ನಿರ್ಜನ ಪ್ರದೇಶಕ್ಕೆ ಹೋಗ್ಬಾರದಿತ್ತು: ಗೃಹ ಸಚಿವ ವಿವಾದಾತ್ಮಕ ಹೇಳಿಕೆ
376ರ ಅಡಿ ಯಾಕೆ ಕೇಸ್ ಯಾಕೆ ಹಾಕಲಿಲ್ಲ?
ಹೆಣ್ಣುಮಗಳ ದೇಹದ ಮೇಲೆ ಗಂಭೀರ ಗುರುತುಗಳಿವೆ. ಪೈಶಾಚಿಕವಾಗಿ ಕೃತ್ಯವೆಸಗಿದ್ದಾರೆ. ಆದರೂ 24 ಗಂಟೆಯಾದರೂ ಕೇಸ್ ದಾಖಲಾಗಿರಲಿಲ್ಲ. ನಂತರ ಹಾಲನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗುತ್ತದೆ. 354(ಎ ) ಅಡಿ ದೂರು ದಾಖಲಿಸಿಕೊಂಡಿದ್ದಾರೆ. ಅತ್ಯಾಚಾರ ನಡೆದ್ರೂ 376ರ ಅಡಿ ಯಾಕೆ ಕೇಸ್ ಯಾಕೆ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಹರಾಸ್ಮೆಂಟ್ ಕೇಸ್ ದಾಖಲಿಸಿದ್ದಾರೆ. ರಾಜ್ಯದ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮಿಸ್ಟರ್ ಮೋದಿ ನಿರ್ಭಯ ಕೇಸ್ ವೇಳೆ ಏನು ಮಾಡಿದ್ರಿ? ನಂದಿತಾ ಸಾವು ಗೃಹ ಸಚಿವರ ಕ್ಷೇತ್ರದಲ್ಲಿ ನಡೆದಿತ್ತು. ಆಗ ನೀವು ಏನು ಮಾಡಿದ್ದಿರಿ. ಇದರ ಬಗ್ಗೆ ನೀವು ಉತ್ತರಿಸಿ ಎಂದು ಆಗ್ರಹಿಸಿದರು.
ರಿಂಗ್ ರಸ್ತೆಯಲ್ಲಿ ಲಲಿತಾದ್ರಿ ಪಾರ್ಕ್ ಇದೆ. ಆ ಪಾರ್ಕ್ ನಲ್ಲಿ ಯುವತಿ, ಸ್ನೇಹಿತ ಮಾತನಾಡ್ತಿರ್ತಾರೆ. ಅಲ್ಲಿಂದ ಯುವತಿಯನ್ನು ಎಳೆದೋಯ್ದು ಕೃತ್ಯವೆಸಗಿದ್ದಾರೆ. ಸಂಜೆ 7.30 ರಿಂದ 10.30 ರವರೆಗೆ ನಡೆದಿದೆ. ನಂತರ ಆ ವಿದ್ಯಾರ್ಥಿಯನ್ನ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದರು.
ಮೈಸೂರು ಪೊಲೀಸ್ ಆಯುಕ್ತರೇ ಹೇಳ್ತಾರೆ. ಇದು ಮೈಸೂರಿನಲ್ಲಿ ಮೊದಲಸಲವಲ್ಲವೆಂದು. ಹಾಗಾದ್ರೆ ಯಾವ ಕ್ರಮ ತೆಗೆದುಕೊಂಡಿದ್ದೀರಾ ಎಂದು ಉಗ್ರಪ್ಪ ಪ್ರಶ್ನಿಸಿದರು.
ಎರಡು ವರ್ಷ ಗೃಹ ಸಚಿವರಾಗಿದ್ದ ಬೊಮ್ಮಾಯಿ ಸಿಎಂ ಆಗಿದ್ದೀರಾ. ಇದರ ಬಗ್ಗೆ ಏನ್ ಹೇಳುತ್ತೀರಿ. ಬಿಜೆಪಿ ಶಾಸಕರ ಮೇಲೆ ಅತ್ಯಾಚಾರ ಪ್ರಕರಣ ಇದೆ. ಯಾಕೆ ಇಲ್ಲಿಯವರೆಗೆ ಚಾರ್ಜ್ ಶೀಟ್ ಹಾಕಿಲ್ಲ. ಆಗಿದೆ ಇಲ್ಲ ಆಗಿಲ್ಲ ಎಂದು ಎರಡಲ್ಲಿ ಒಂದು ಹಾಕಿ. ಇಷ್ಟೊಂದು ವಿಳಂಬ ಮಾಡ್ತಿರೋದೇಕೆ? ಮೈಸೂರು ಘಟನೆಯ ಬಗ್ಗೆ ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.