
ಬಂಟ್ವಾಳ (ನ.20): ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ಬುಧವಾರ ಸಂಜೆ ನಡೆದಿದೆ.
ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದ ಮಹಿಳೆಯಾಗಿದ್ದಾರೆ.
ಬಿಸಿ ರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ನುಗ್ಗಿದ ಮಹಿಳೆ, ಕ್ಯಾಶ್ ಕೌಂಟರ್ ನಲ್ಲಿ ಕುಳಿತ್ತಿದ್ದ ಗಂಡನಿಗೆ ಬುರ್ಖಾ ಧರಿಸಿಕೊಂಡು ಬಂದಿದ್ದ ಪತ್ನಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದರು.
ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿತೆ ಜ್ಯೋತಿ ಸೋಮಯಾಜಿ ಅವರನ್ನು ಬಂಟ್ವಾಳ ಪೋಲೀಸರು ಕ್ಷಣಾರ್ಧದಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ನಗರ ಪೋಲೀಸರು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ಯತ್ನಕ್ಕೆ ಕಾರಣಗಳೇನು? ಹಣಕಾಸಿನ ವ್ಯವಹಾರವೇ, ಆಸ್ತಿ ಸಂಬಂಧಿತ ದ್ವೇಷವೇ ಇನ್ನೇನಾದರೂ ಕರಣಗಳಿವೆ? ಪೊಲೀಸರು ಎಲ್ಲ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಕೌಟುಂಬಿಕ ಕಲಹದ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಕೌಟುಂಬಿಕ ವಿಚಾರಕ್ಕೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲು ಕೂಡ ಏರಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ