ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ: ಪತಿಯನ್ನು ದೊಣ್ಣೆಯಲ್ಲಿ ಹೊಡೆದು ಕೊಂದ ಪತ್ನಿ

By Govindaraj S  |  First Published May 15, 2024, 8:29 PM IST

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಮೇ.15): ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಕಳೆದ ರಾತ್ರಿ ಗಂಡ ಹೆಂಡತಿಯ ನಡುವೆ ಜಗಳವಾಗಿದ್ದು ಮಾತಿಗೆ ಮಾತು ಬೆಳೆದು ಪತ್ನಿ ಭಾರತಿ ಸುರೇಶ್ ಎಂಬ ಗಂಡನನ್ನು ಹೊಡೆದು ಹತ್ಯೆ ಮಾಡಿದ್ದಾಳೆ. ಬಸವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

Tap to resize

Latest Videos

undefined

ಘಟನೆ ವಿವರ: ಗಂಡ ಹೆಂಡತಿ ನಡುವಿನ ವಿರಸ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಬಡಾವಣೆಯಲ್ಲಿ ನಡೆದಿದೆ.  ಸುರೇಶ್(53) ಮೃತಪಟ್ಟ ಪತಿಯಾಗಿದ್ದು, ಆತನ ಪತ್ನಿ ಭಾರತಿ ಎಂಬಾಕೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಂದಿದ್ದಾಳೆ.

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೋಷಕರಿಗೆ ಮಕ್ಕಳ ಚಿಂತೆ ಬೇಡ: ಯಾಕೆ ಗೊತ್ತಾ?

ಕಳೆದ ರಾತ್ರಿ ಮನೆಯಲ್ಲಿ ಗಂಡ ಹೆಂಡತಿ ನಡುವೆ ವಿಪರೀತ ಜಗಳವಾಗಿದ್ದು, ಮರಗೆಲಸ ಮಾಡಿಕೊಂಡು ಮನೆಗೆ ಬಂದ ಪತಿ ಸುರೇಶ್ ಜೊತೆ ಭಾರತಿ ಹೊಡೆದಾಟಕ್ಕೆ ಇಳಿದಿದ್ದಾಳೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿ ಇದ್ದ ಮರದ ದೊಣ್ಣೆ ತೆಗೆದುಕೊಂಡು ಬಲವಾಗಿ ತಲೆಗೆ ಬಾರಿಸಿದ್ದಾಳೆ. ಈ ವೇಳೆ ಕುಸಿದು ಬಿದ್ದ ಸುರೇಶ ಹೆಡ್ ಇಂಜ್ಯುರಿ ಉಂಟಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ.

click me!