
ರಾಯಚೂರು(ಮಾ.22): ಅಕ್ರಮ ಸಂಬಂಧ ವಿಚಾರವಾಗಿ ದಂಪತಿ ನಡುವೆ ಉಂಟಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪತ್ನಿಯೇ ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಲೆ ಮಾಡಿದ ಘಟನೆ ತಾಲೂಕಿನ ಸಿಂಗನೋಡಿ ತಾಂಡಾದಲ್ಲಿ ಬುಧವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ, ಗ್ರಾಪಂ ಸದಸ್ಯ ರಾಜು ನಾಯ್ಕ್ (35) ಕೊಲೆಯಾದ ಪತಿಯಾಗಿದ್ದಾನೆ. ಪತ್ನಿ ಸ್ನೇಹ ಕೃತ್ಯವೆಸಗಿದ ಆರೋಪಿಯಾಗಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದಿನಿಂದ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಸ್ನೇಹ ಜೊತೆಗೆ ಪತಿ ರಾಜು ನಾಯ್ಕ್ ಜಗಳವಾಡುತ್ತಿದ್ದನು.
ಮಂಡ್ಯ: ಕೊಟ್ಟ ಹಣ ಕೇಳಲು ಬಂದ ಮಹಿಳೆ, ಮಗು ಬರ್ಬರ ಹತ್ಯೆ..!
ಇದೇ ಸಿಟ್ಟಿನಿಂದ ಪತಿಗೆ ಕುಡಿಯುವ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ನಂತರ ಕತ್ತು ಹಸುಕಿ ಕೊಲೆ ಮಾಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದು ಯಾಪಲದಿನ್ನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ನೇಹಾಳನ್ನು ಬಂಧಿಸಿರುವ ಪೊಲೀಸರು ಆಕೆಯ ಪ್ರಿಯಕರನ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ