
ಮೈಸೂರು (ಫೆಬ್ರವರಿ 15, 2023): ಅನೈತಿಕ ಸಂಬಂಧಕ್ಕೆ ಪತಿ ಕಿರಿಕ್ ಮಾಡಿದ ಹಿನ್ನೆಲೆ ಪ್ರಿಯಕರನ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ವರದಿಯಾಗಿದೆ. ಪ್ರೇಮಿಗಳ ದಿನಾಚರಣೆ ವೇಳೆ ರಾತ್ರೋರಾತ್ರಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದಾಳೆ ಪಾಪಿ ಪತ್ನಿ. ಮೈಸೂರಿನ ಹೂಟಗಳ್ಳಿ ನಿವಾಸಿ ಮಂಜು ಎಂಬುವರು ಕೊಲೆಯಾದ ದುರ್ದೈವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಪತಿಯನ್ನು ಕೊಲೆಗೈದ ಪತ್ನಿಯನ್ನು ಲಿಖಿತಾ ಎಂದು ಗುರುತಿಸಲಾಗಿದೆ.
ಮೈಸೂರು ಜಿಲ್ಲೆಯ.ಬೋಗಾದಿ ನಿವಾಸಿ ಲಿಖಿತಾ ಅವರ ಜೊತೆ 12 ವರ್ಷಗಳ ಹಿಂದೆ ಮಂಜು ಮದುವೆಯಾಗಿದ್ದರು. ಪತಿ - ಪತ್ನಿಗೆ ಇಬ್ಬರು ಮಕ್ಕಳು ಸಹ ಇದ್ದು, ಇವರಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದೆ. ಇನ್ನು, ಆರೋಪಿ ಲಿಖಿತಾ ಈ ಹಿಂದೆಯೇ ಪ್ರಿಯಕರನ ಜೊತೆ ಓಡಿ ಹೋಗಿದ್ದಳು ಎಂದು ತಿಳಿದುಬಂದಿದ್ದು, ಆದರೆ ಆ ವೇಳೆ ರಾಜಿ ಪಂಚಾಯ್ತಿ ಮೂಲಕ ಪತಿ ಮಂಜು ತನ್ನ ಪತ್ನಿಯನ್ನು ಮತ್ತೆ ಮನೆಗೆ ಸೇರಿಸಿಕೊಂಡಿದ್ದರು.
ಆದರೂ, ಪತ್ನಿ ನಡವಳಿಕೆ ಬಗ್ಗೆ ಪತಿ ಮಂಜು ಆಗಾಗ್ಗೆ ಪ್ರಶ್ನೆ ಮಾಡ್ತಿದ್ರು, ಸಂಶಯ ಪಡ್ತಿದ್ರು ಎಂದು ಹೇಳಲಾಗಿದೆ. ಇದರಿಂದ ಸಿಟ್ಟಿಗೆದ್ದ ಪತ್ನಿ ಲಿಖಿತಾ ಪ್ರಿಯಕರನ ಜತೆ ಸೇರಿಕೊಂಡು ತಡರಾತ್ರಿ ಪತಿಯನ್ನ ಉಸಿಗಟ್ಟಿಸಿ ಕೊಲೆಗೈದಿರೋ ಶಂಕೆ ವ್ಯಕ್ತವಾಗಿದೆ.
ಇನ್ನು, ಈ ಕೊಲೆ ಪ್ರಕರಣ ಸಂಬಂಧ ಆರೋಪಿ ಪತ್ನಿ ಲಿಖಿತಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಕೊಲೆ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಕುಡುಕ ಗಂಡನಿಂದ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರ ಸಾವು
ಈ ಮದ್ಯೆ, ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಮಾರಕಾಸ್ತ್ರದಿಂದ ತೀವ್ರವಾಗಿ ದಾಳಿ ಮಾಡಿ ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹುಬ್ಬಳ್ಳಿ ತಾಲೂಕಿನಲ್ಲಿ ಕೆಲ ದಿನಹಗಳ ಹಿಂದೆ ವರದಿಯಾಗಿತ್ತು. ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಫಕೀರಪ್ಪ ತನ್ನ ಪತ್ನಿ ಮತ್ತು ಮಕ್ಕಳ ಮೇಲೆ ದಾಳಿ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ.
ಪತ್ನಿ ಮತ್ತು ಮಕ್ಕಳ ಮೇಲೆ ಕುಡುಕ ಪತಿ ಮಾರಕಾಸ್ತ್ರದಿಂದ ದಾಳಿ ಮಾಡಿದ್ದ. ಇನ್ನು ಈ ದುರ್ಘಟನೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ.. ನೇಣು ಬಿಗಿದುಕೊಂಡ ಫಕೀರಪ್ಪ ಮನೆಯಲ್ಲಿ ಮೃತಪಟ್ಟಿದ್ದು,. ನಂತರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಶ್ರೇಯಸ್ (6) ಮೃತ ಮಗು ಎಂದು ತಿಳಿದುಬಂದಿದೆ.
ಪಕ್ಕೀರಪ್ಪ ಹಲ್ಲೆ ಮಾಡಿದ ಘಟನೆ ನಂತರ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕಿಮ್ಸ್‌ನಲ್ಲಿ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಈ ಪೈಕಿ ಒಂದು ಮಗು ಮೃತಪಟ್ಟಿದ್ದು, ಉಳಿದಂತೆ ಪತ್ನಿ ಮತ್ತು ಇಬ್ಬರು ಮಕ್ಕಳ ಸ್ಥಿತಿಯೂ ಚಿಂತಾಜನಕವಾಗಿತ್ತು. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದ್ದ ಘಟನೆಯಾಗಿದ್ದು, ಕುಡಿದ ಮತ್ತಿನಲ್ಲಿಯೇ ಕೊಡಲಿಯಿಂದ ದಾಳಿ ಮಾಡಿ ಕೃತ್ಯ ಎಸಗಿದ್ದನು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ