ಅಕ್ಕನ ಮನೇಲಿ ಚಿನ್ನಾಭರಣ ಕದ್ದು ತಂಗಿ ಟೂರ್‌..!

Kannadaprabha News   | Asianet News
Published : Mar 13, 2021, 08:49 AM IST
ಅಕ್ಕನ ಮನೇಲಿ ಚಿನ್ನಾಭರಣ ಕದ್ದು ತಂಗಿ ಟೂರ್‌..!

ಸಾರಾಂಶ

9 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ| ಬೆಂಗಳೂರಿನ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ನಡೆದ ಘಟನೆ| ಆರೋಪಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಳಕಿಗೆ ಬಂದ ಕೃತ್ಯ| ಅಡವಿಟ್ಟು ಬಂದ ಹಣದಲ್ಲಿ ಸ್ನೇಹಿತರೊಂದಿಗೆ ಹೊರ ರಾಜ್ಯಕ್ಕೆ ಪ್ರವಾಸ ಹೋಗಿದ್ದ ಆರೋಪಿತೆ| 

ಬೆಂಗಳೂರು(ಮಾ.13): ಅಕ್ಕನ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ತಂಗಿಯನ್ನು ನಂದಿನಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆಯ ಚೌಡೇಶ್ವರಿ ನಗರ ನಿವಾಸಿ ಶಶಿಕಲಾ(35) ಬಂಧಿತೆ. ಆರೋಪಿಯಿಂದ 9 ಲಕ್ಷ ಮೌಲ್ಯದ 220 ಗ್ರಾಂನ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಶಶಿಕಲಾ ಸಹೋದರಿ ಮೀನಾ ವಾಸಿಸುತ್ತಿದ್ದ ಕಟ್ಟಡದ ಮೊದಲ ಮಹಡಿಯಲ್ಲಿ ನೆಲೆಸಿದ್ದರು. ಮೀನಾಗೆ ಕಿವಿ ಕೇಳಿಸುವುದಿಲ್ಲ ಹಾಗೂ ಮಾತನಾಡಲು ಬರುವುದಿಲ್ಲ. ಪ್ರತಿದಿನ ಚಿನ್ನಾಭರಣವಿದ್ದ ಬೀರುವಿನ ಕೀಯನ್ನು ತಲೆದಿಂಬಿನಡಿ ಇಟ್ಟು ಮಲಗುತ್ತಿದ್ದರು. ಇದನ್ನು ಗಮನಿಸಿದ್ದ ಶಶಿಕಲಾ ಇತ್ತೀಚೆಗೆ ಅಕ್ಕ ಮೀನಾ ಅವರಿಗೆ ತಿಳಿಯದಂತೆ ಕೀ ತೆಗೆದುಕೊಂಡು ಬೀರುವಿನಲ್ಲಿದ್ದ 220 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಳು. ಮೀನಾ ಪುತ್ರ ವಿಜಯ್‌ಕುಮಾರ್‌ ಮಾ.3ರಂದು ತಮ್ಮ ಅಜ್ಜಿಯ ಮನೆಗೆ ಹೋಗಲು ವಡವೆಗಳನ್ನು ಹಾಕಿಕೊಳ್ಳಲು ಬೀರು ತೆಗೆದು ನೋಡಿದಾಗ ಅದರಲ್ಲಿ ಚಿನ್ನಾಭರಣ ಇರಲಿಲ್ಲ. ಹೀಗಾಗಿ ಮಾ.9ರಂದು ನಂದಿನಿ ಲೇಔಟ್‌ ಪೊಲೀಸ್‌ ಠಾಣೆಗೆ ಹಾಜರಾಗಿ ಈ ಕುರಿತು ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಅನುಮಾನದ ಮೇರೆಗೆ ಶಶಿಕಲಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಅಪಘಾತ ನಾಟಕವಾಡಿ ಚಾಲಕರ ಪರ್ಸ್‌ ಎಗರಿಸುತ್ತಿದ್ದ ಖದೀಮ

ಆರೋಪಿಗೆ ವಿವಾಹವಾಗಿದ್ದು, ಕೌಟುಂಬಿಕ ಕಲಹದಿಂದ ಪತಿಯಿಂದ ದೂರು ಇದ್ದರು. ಹಲವರ ಬಳಿ ಶಶಿಕಲಾ ಸಾಲ ಮಾಡಿಕೊಂಡಿದ್ದರು. ಕದ್ದ ಚಿನ್ನಾಭರಣವನ್ನು ಅಡವಿಟ್ಟು ಬಂದ ಹಣದಲ್ಲಿ ಸ್ನೇಹಿತರೊಂದಿಗೆ ಹೊರ ರಾಜ್ಯಕ್ಕೆ ಪ್ರವಾಸ ಹೋಗಿದ್ದಳು ಎಂದು ಪೊಲೀಸರು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!