ಶಾಲೆ ಆವರಣದಲ್ಲಿ 21ರ ಹರೆಯದ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆಂಧ್ರ ಪ್ರದೇಶ(ಜೂ.22) ಬಾಲಕಿಯರ ಶಾಲೆಯ ಆವರಣದಲ್ಲಿ 21ರ ಹರೆಯದ ಯುವತಿಯ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯುವತಿ ಹತ್ಯೆಗೂ ಮೊದಲು ಸಾಮಾಹಿಕ ಅತ್ಯಾಚಾರ ನಡೆಸಿರುವ ಸಾಧ್ಯತೆಯನ್ನು ಪೊಲೀಸರು ಹೇಳಿದ್ದಾರೆ. ಈ ಘಟನೆ ಆಂಧ್ರ ಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.
ಯುವತಿ ಬೆಳಗ್ಗೆ ಮನೆಯಿಂದ ಕೆಲಸಕ್ಕಾಗಿ ತೆರಳಿದ್ದಾಳೆ. ಶಾಲೆ ಪಕ್ಕದಲ್ಲೇ ರೈಲು ನಿಲ್ದಾಣವಿದೆ. ರೈಲು ನಿಲ್ದಾಣದ ಬಳಿ ಬಹಿರ್ದೆಸೆಗೆ ತೆರಳಿದ್ದಾಳೆ. ಬೆಳಗ್ಗೆ 5.30ಕ್ಕೆ ಮನೆಯಿಂದ ತೆರಳಿದ್ದಾಳೆ. ಮನೆಯಿಂದ 10 ನಿಮಿಷ ದೂರದಲ್ಲಿ ಬರ್ಹಿದೆಸೆಗೆ ತೆರಳಿದ ಯುವತಿ ಮರಳಿ ಬಂದಿಲ್ಲ. ಎಷ್ಟು ಹೊತ್ತಾದರೂ ಯುವತಿ ಮರಳಿ ಬಾರದ ಕಾರಣ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ.
undefined
ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ವಿರೋಧಿಸಿದ್ದಕ್ಕೆ ಕೊಲೆ ಮಾಡಿದ ಎಸ್‌ಎಸ್‌ಎಲ್‌ಸಿ ಬಾಲಕ
ರೈಲು ನಿಲ್ದಾಣ ಪಕ್ಕದಲ್ಲಿ, ರೈಲು ನಿಲ್ದಾಣದ ಬಳಿಕ ಹುಡುಕಿದ್ದಾರೆ. ಆದರೆ ಪತ್ತೆಯಾಗಿಲ್ಲ. ಈ ಮಾಹಿತಿ ತಿಳಿದ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಮಹಿಳಾ ಶಾಲಾ ಆವರಣದಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯವತಿ ಮೈಮೇಲೆ ಬಟ್ಟೆಗಳೇ ಇರಲಿಲ್ಲ. ಸುತ್ತ ಮುತ್ತವೂ ಆಕೆಯ ಬಟ್ಟೆ ಸಿಕ್ಕಿಲ್ಲ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹ ವಶಕ್ಕೆ ಪಡೆದು ಸುತ್ತ ಮುತ್ತ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಈ ಮಾಹಿತಿ ಆಂಧ್ರ ಪ್ರದಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ದುಗೆ ತಿಳಿಯುತ್ತಿದ್ದಂತೆ ಖಡಕ್ ಸೂಚನೆ ನೀಡಿದ್ದಾರೆ. ಗೃಹ ಸಚಿವರನ್ನು ಕುಟುಂಬಸ್ಥರ ಭೇಟಿಯಾಗಲು ಸೂಚಿಸಿದ್ದಾರೆ. ಇತ್ತ ಪೊಲೀಸರಿಗೆ 48 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವಂತೆ ಸೂಚಿಸಿದ್ದಾರೆ.
ಮೃತ ಯುವತಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ ಈ ಗ್ರಾಮದ ಕುಟಂಬಗಳಿಗೆ ಇದುವರೆಗೂ ಶೌಚಾಲಯ ಯಾಕೆ ತಲುಪಿಲ್ಲ ಅನ್ನೋ ಪ್ರಶ್ನೆಗಳೂ ಮೂಡಿದೆ. ಈ ಕುರಿತು ಅಧಿಕಾರಿಗಳಿಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ಹೊರಬಿದ್ದಿದೆ. ಬಡ ಕುಟುಂಬದ ಯುವತಿ ದಾರುಣವಾಗಿ ಹತ್ಯೆಯಾಗಿದ್ದಾಳೆ. ಯುವತಿ ತಂದೆ ಕೂಲಿ ಕೆಲಸ ಮಾಡುತ್ತಿದ್ದ, ಕಡು ಬಡತನದಲ್ಲಿದೆ. ಮಗಳನ್ನು ಕಳೆದುಕೊಂಡು ಪೋಷಕರು ಕಂಗಾಲಾಗಿದ್ದಾರೆ. ಸಿಎಂ ಸೂಚನೆ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.ಪರಿಹಾರದ ಭರವಸೆ ನೀಡಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಧಾರವಾಡ ಮೂಲದ ಯೋಧ!