ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ. ನಯನಾ ಎಂ.ಜಿ (27 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮಂಗಳೂರು (ಫೆ.15): ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.
ನಯನಾ ಎಂ.ಜಿ (27 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತುಮಕೂರಿನ ಮಧುಗಿರಿ ನಿವಾಸಿ ನಯನಾ ಎಂ.ಜಿ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು.
ಬಂಟ್ವಾಳ ಸಮೀಪ ಹಾದು ಹೋಗುವ ನೇತ್ರಾವತಿ ಸೇತುವೆ ಬಂದಂತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಳುಗುತಜ್ಞ ಮಹಮ್ಮದ್ ತಂಡ ನದಿಯಿಂದ ನಯನಾ ಎಂ.ಜಿಯವರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ: ತರಕಾರಿ ತರಲು ಹೋದ ಮಗಳು ಕೊಳೆತ ಶವವಾಗಿ ಸಿಕ್ಕಳು