
ಹುಬ್ಬಳ್ಳಿ(ಏ. 08) ಕುಸಿದು ಬಿದ್ದ ಮನೆಗೆ ಪರಿಹಾರದ ಹಣ ಸಿಗಲಿಲ್ಲ ಅಂತಾ ಮಹಿಳೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆ ಎದುರು ಮಹಿಳೆ ಆತ್ಮಹತ್ಯೆ ಯತ್ನ ಮಾಡಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.
ಮಳೆಗೆ ಬಿದ್ದ ಮನೆ ಪರಿಹಾರ ಸಿಗದೆ ಕಂಗೆಟ್ಟಿದ್ದ ಮಹಿಳೆ ಪರಿಹಾರಕ್ಕಾಗಿ ಅಲೆದು ಅಲೆದು ಸುಸ್ತಾಗಿದ್ದರು. ಇದರಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಯತ್ನ ಮಾಡಿದ್ದಳು. ಏಪ್ರೀಲ್ 6 ರಂದು ಆತ್ಮಹತ್ಯೆಗೆ ಯತ್ನಿಸಿದ್ದಳು ಚಿಕಿತ್ಸೆ ಫಲಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಪ್ರಾಣ ಕಳೆದುಕೊಂಡವಳು ಕಳೆದ ಮಳೆಗಾಲದಲ್ಲಿ ಅತೀವೃಷ್ಡಿಯಿಂದ ಇವರ ಮನೆ ಬಿದ್ದಿತ್ತು.
ಪರಿಹಾರಕ್ಕಾಗಿ ಕಳೆದ ಐದು ತಿಂಗಳಿಂದ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಹತ್ತಿರ ಹೋಗಿ ಮನವಿ ಮಾಡಿಕೊಂಡಿದ್ದರು ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದ ಶ್ರೀದೇವಿ ಕೇಂದ್ರ ಸಚಿವರ ಮನೆ ಎದುರು ಡೇತನೋಟು ಬರೆದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ತೀವ್ರವಾಗಿ ಅಸ್ವಸ್ಥಗೊಂಡ ಮಹಿಳೆಗೆ ಕಿಮ್ಸ್‌ಗೆ ದಾಖಲಿಸಲಾಗಿತ್ತು.
'ದೂರು ಸಿಎಂ ಮೇಲೆ ಎಂದು ತಿಳಿಯುವ ಅಗತ್ಯ ಇಲ್ಲ'
ದುಡುಕಿನ ನಿರ್ಧಾರ: ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು ದುರಾದೃಷ್ಟಕರ. ಈ ಬಗ್ಗೆ ಅಧಿಕಾರಿಗಳಿಗೆ ಪರಿಶೀಲನೆ ಮಾಡಲು ಹೇಳಲಾಗಿತ್ತು. ಆದರೆ ಆ ಮಹಿಳೆ ಈ ರೀತಿ ದುಡುಕಿ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ಈ ಬಗ್ಗೆ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಸಾರಿಗೆ ಮುಷ್ಕರದ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಸಾರಿಗೆ ನೌಕರರಿಗೆ ಕಾಂಗ್ರೆಸ್ ಹಾಗೂ ಮುಷ್ಕರದ ನೇತೃತ್ವದ ವಹಿಸಿಕೊಂಡವರು ಕುಮ್ಮಕ್ಕು ನೀಡಿ ರಾಜಕಾರಣ ಮಾಡುತ್ತಿದ್ದಾರೆ. ಸಾರಿಗೆ ನೌಕರರ ಜೊತೆ ಮಾತುಕತೆ ಮಾಡಲು ಸರ್ಕಾರ ಸಿದ್ಧವಿದೆ ಸರ್ಕಾರ ಕಷ್ಟದ ಪರಿಸ್ಥಿತಿಯಲ್ಲೂ ಸಾರಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಿದೆ
ಸಾರಿಗೆ ನೌಕರರು ಕೂಡಲೇ ಮುಷ್ಕರ ಕೈಬಿಟ್ಟು ಕರ್ತವ್ಯ ಹಾಜರಾಗಬೇಕು ಎಂದು ಮನವಿ ಮಾಡಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ