
ಸಿಂಧನೂರು(ಫೆ.01): ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಬಳಿ ಇರುವ ಕೆಎಚ್‌ಬಿ ಕ್ವಾರ್ಟರ್ಸ್‌ನಲ್ಲಿ ಮಹಿಳೆಯೊಬ್ಬಳು(Woman) ವರದಕ್ಷಿಣೆ ಕಿರುಕುಳ(Dowry Harassment) ತಾಳಲಾರದೆ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಜರುಗಿದೆ.
ಸಂಜೋತಾ ಮಲ್ಲಿಕಾರ್ಜುನ ರೆಡ್ಡಿ (30) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ. ಈಕೆಯ ಗಂಡ, ಅತ್ತೆ, ಮಾವ, ಮೈದುನ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು. ಮಕ್ಕಳಾಗಿಲ್ಲ ಎಂಬ ಕಾರಣಕ್ಕಾಗಿ ಆಕೆಗೆ ಮಾನಸಿಕ ಹಿಂಸೆ ನೀಡುತ್ತಿದ್ದರು. ಇದನ್ನು ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಸಂಜೋತಾಳ ತಂದೆ ಲಕ್ಷ್ಮಪ್ಪ ನಗರ ಪೊಲೀಸ್(Police) ಠಾಣೆಯಲ್ಲಿ ದೂರು(Complaint) ನೀಡಿದ್ದಾರೆ.
ನಂತರ ಆಕೆಯ ಮರಣೋತ್ತರ ಪರೀಕ್ಷೆ(Post Mortem) ಸಾರ್ವಜನಿಕ ಆಸ್ಪತ್ರೆಯಲ್ಲಿ ಜರುಗಿತು ಎಂದು ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಸೌಮ್ಯ ಹಿರೇಮಠ ತಿಳಿಸಿದ್ದಾರೆ.
Woman Suicide : ವಸತಿ ಗೃಹದಲ್ಲೇ ಕಾನ್ಸ್ಟೇಬಲ್ ಪತ್ನಿ ಸುಸೈಡ್, ಕಾರಣ ನಿಗೂಢ!
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ರಾಯಚೂರು(Raichur): ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸ್ಟೇಷನ್ ರಸ್ತೆಯಲ್ಲಿನ ಎಸ್‌ಬಿಐ ವಿಮಾ ಕಚೇರಿಯಲ್ಲಿ ಜರುಗಿದೆ. ಸ್ಥಳೀಯ ಬೋಳಮಾನದೊಡ್ಡಿ ರಸ್ತೆಲ್ಲಿರುವ ಬಡಾವಣೆ ನಿವಾಸಿ ಸುಜೀತ್ (30) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಕೆಲಸವಿದೆ ಎಂದು ಮನೆಯಿಂದ ಕಚೇರಿಗೆ ಬಂದಿರುವ ಯುವಕ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಈ ಕುರಿತು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಆಂಧ್ರ ಬಸ್ ಡಿಕ್ಕಿ: ಬಾಲಕಿ ಸಾವು
ರಾಯಚೂರು: ಪಕ್ಕದ ಆಂಧ್ರಪ್ರದೇಶಕ್ಕೆ(Andhra Pradesh) ಸೇರಿದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನಪ್ಪಿರುವ ಘಟನೆ ತಾಲೂಕಿನ ಯರಗೇರಾ ಗ್ರಾಮದಲ್ಲಿ ಸರ್ಕಾರಿ ಶಾಲೆ ಮುಂದೆ ಸೋಮವಾರ ನಡೆದಿದೆ.
ಗ್ರಾಮದ ಮಲ್ಲೇಶ ಎನ್ನುವ ನಿವಾಸಿಯ ಮಗಳು ಅಂಕಿತ (5) ಮೃತಪಟ್ಟಬಾಲಕಿಯಾಗಿದ್ದಾಳೆ. ಎಲ್‌ಕೆಜಿ ಓದುತ್ತಿದ್ದ ಅಂಕಿತ ಎಂದಿನಂತೆ ಶಾಲೆಗೆ ಹೋಗಿ ಮನೆಗೆ ವಾಪಸ್ಸು ಬರುತ್ತಿದ್ದಾಗ ಆಂಧ್ರಕ್ಕೆ ಸೇರಿದ ಸಾರಿಗೆ ಬಸ್ ಬಾಲಕಿ ಮೇಲೆ ಆಯ್ದು ಹೋಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅಂಕಿತ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಬಾಲಕಿ ನೇಣಿಗೆ ಶರಣು
ಬೆಂಗಳೂರು: ಹದಿನೈದು ವರ್ಷದ ಬಾಲಕಿಯೊಬ್ಬಳು ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ತಾಯಿ ಜತೆ ಕಾಮಾಕ್ಷಿಪಾಳ್ಯದಲ್ಲಿ ನೆಲೆಸಿದ್ದಳು. ಬೆಳಗ್ಗೆ 9ರ ಸುಮಾರಿಗೆ ಆನ್‌ಲೈನ್ ಕ್ಲಾಸ್ ಎಂದು ತಾಯಿಗೆ ಹೇಳಿ ರೂಮ್‌ಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾಳೆ. ಕೆಲವು ಹೊತ್ತಿನ ಬಳಿಕ ತಾಯಿ ತಿಂಡಿಗೆ ಕರೆದರೂ ಬಾಲಕಿ ಹೊರಗೆ ಬಂದಿಲ್ಲ. ಹೀಗಾಗಿ ಅನುಮಾನಗೊಂಡು ಕಿಟಕಿಯಲ್ಲಿ ಇಣುಕಿ ನೋಡಿದಾಗ ಬಾಲಕಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ತಂದೆ ಇಲ್ಲ. ತಾಯಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣ ಪತ್ರವೂ ಸಿಕ್ಕಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದೆ ಎಂದು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.
Shivamogga: ಮಾನಸಿಕ ಖಿನ್ನತೆಯಿಂದ FDA ಆತ್ಮಹತ್ಯೆಗೆ ಶರಣು
ವಿಷ ಬೆರೆಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು
ಮೂಲ್ಕಿ(Mulki): ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಲ್ಕಿ ಸಮೀಪದ ಬಳ್ಕುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲೂರು ಪದವು ಎಂಬಲ್ಲಿ ಮದ್ಯದ ಜೊತೆ ವಿಷ ಬೆರೆಸಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೊಲ್ಲೂರು ಪದವು ನಿವಾಸಿ ಸುಧಾಕರ ಬಂಗೇರ (58) ವಿಪರೀತ ಕುಡಿತದ ಚಟ ಹೊಂದಿದ್ದು ಮದ್ಯದ ಜೊತೆ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ