
ಗದಗ(ಮೇ.23): ಮಹಾಮಾರಿ ಕೊರೋನಾ ವೈರಸ್‌ಗೆ ಹೆದರಿದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಭಾನುವಾರ) ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಸುಮಾರು 45 ವರ್ಷದ ಮಹಿಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ.
ಕಳೆದ ಹದಿನೈದು ದಿನಗಳಿಂದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಕೊರೋನಾ ಟೆಸ್ಟ್ ಮಾಡಿಸುವಂತ ಸಲಹೆ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ.
"
ಮೈಸೂರು : ಆತ್ಮಹತ್ಯೆಗೆ ಶರಣಾದ ಕೋವಿಡ್ ಸೆಂಟರ್ ಸ್ಟಾಫ್ ನರ್ಸ್
ಹೀಗಾಗಿ ಕೊರೋನಾ ಬಂದಿರಬಹುದೆಂದು ಹೆದರಿದ ಮಹಿಳೆ ಗ್ರಾಮ ಹೊರವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ