ಗದಗ: ಬಡ್ಡಿ ವ್ಯವಹಾರಗಾರರ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ

Suvarna News   | Asianet News
Published : Nov 19, 2020, 03:42 PM IST
ಗದಗ: ಬಡ್ಡಿ ವ್ಯವಹಾರಗಾರರ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ

ಸಾರಾಂಶ

ಶ್ರೀಶೈಲಪ್ಪ ಚಕ್ರಣ್ಣವರ್ ಎಂಬಾತನಿಂದ ಮೋಸ ಹೋಗಿದ್ದ ಮೃತ ಮಹಿಳೆ| ಬಡ್ಡಿ ವ್ಯವಹಾರಕ್ಕೆ ಮೋಸ ಮಾಡಿ ಜಮೀನು ಬೇರೆಯವರಿಗೆ ಮಾರಾಟ| ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ| ಈ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು| 

ಗದಗ(ನ.19): ಬಡ್ಡಿ ವ್ಯವಹಾರಗಾರರ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಅಡವಿಸೋಮಾಪುರ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಸಂಗವ್ವ ಮೆಣಸಿನಕಾಯಿ (45) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಮಹಿಳೆಯಾಗಿದ್ದಾಳೆ. 

ಸಂಗವ್ವ ಮೆಣಸಿನಕಾಯಿ ಶ್ರೀಶೈಲಪ್ಪ ಚಕ್ರಣ್ಣವರ್ ಎಂಬಾತನಿಂದ ಮೋಸ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಸಂಗವ್ವನ ಪತಿ ಈರಪ್ಪನಿಗೆ ಶ್ರೀಶೈಲಪ್ಪ ಚಕ್ರಣ್ಣವರ್ ಎಂಬಾತ ಸುಮಾರು 5 ಲಕ್ಷ ಬಡ್ಡಿ ಸಾಲ ಕೊಟ್ಟಿದ್ದ, ಬಡ್ಡಿ ಸಾಲಕ್ಕೆ ಹೊಲವನ್ನು ಕಬ್ಜಾ ಪಡೆದಿದ್ದರು. ಕಬ್ಜಾ ಪಡೆದಾಗ ಸಹಿ ಮಾಡಿಸಿಕೊಳ್ಳಲಾಗಿತ್ತು. ಸಹಿ ಮಾಡಿಸಿಕೊಂಡು 3 ಎಕರೆ ಜಮೀನನ್ನು ಬೇರೆಯವರಿಗೆ ಮಾರಿದ್ದರು ಎಂದು ಆರೋಪಿಸಲಾಗಿದೆ. 

‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎನ್ನುತ್ತಲೇ ಬೆಂಕಿ ಹಚ್ಚಿಕೊಂಡ ಭಕ್ತ ಸಾವು!

ಪಹಣಿ ಪತ್ರದಲ್ಲಿ ಬೇರೆಯವರ ಹೆಸರು ದಾಖಲಾಗಿತ್ತು. ಬಡ್ಡಿ ವ್ಯವಹಾರಕ್ಕೆ ಮೋಸ ಮಾಡಿ ಜಮೀನನ್ನು ಬೇರೆಯವರಿಗೆ ಮಾರಿದ್ದರಿಂದ ಬೇಸತ್ತಿದ್ದ ಈರಪ್ಪನ ಪತ್ನಿ ಸಂಗವ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಸಂಗವ್ವಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!