ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ ಅನುಮಾನಾಸ್ಪದ ಸಾವು!

By Govindaraj SFirst Published Sep 1, 2022, 11:53 PM IST
Highlights

ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಜೊತೆಯಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾರೆ. ಯುವತಿಯನ್ನು ಕೊಲೆ ಮಾಡಿ ವ್ಯಕ್ತಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೈಸೂರು (ಸೆ.01): ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಜೊತೆಯಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾರೆ. ಯುವತಿಯನ್ನು ಕೊಲೆ ಮಾಡಿ ವ್ಯಕ್ತಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪೂರ್ವ ಶೆಟ್ಟಿ (25) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಯುವತಿ‌ಯಾಗಿದ್ದು, ಪಿರಿಯಾಪಟ್ಟಣ ತಾಲ್ಲೂಕು ಹರಳಹಳ್ಳಿ ಗ್ರಾಮದ ನಿವಾಸಿ ರವಿ ಅವರ ಪುತ್ರಿ. 

ಅಪೂರ್ವ ಶೆಟ್ಟಿ ಮೈಸೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದರು. ಇನ್ನು ಆಗಸ್ಟ್ 30ರಂದು ಯುವಕನ ಜೊತೆ ಹೋಟೆಲ್‌ಗೆ ಬಂದು ಕೊಠಡಿ ಬಾಡಿಗೆಗೆ ಪಡೆದು ವಾಸ್ತವ್ಯ ಹೂಡಿದ್ದು, ಇವತ್ತು ಬೆಳಗ್ಗೆ ರೂಂನಿಂದ ಯುವಕ ಹೊರ ಹೋಗಿದ್ದಾನೆ. ಈ ಯುವಕ ನಕಲ್‌ನಲ್ಲಿ ವಾಸಿಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು, ಪೊಲೀಸರು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Crime News: ಗರ್ಭಿಣಿ ಹಸುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಗೋವು ಸಾವು

ದ್ವಿಚಕ್ರ ವಾಹನ ಡಿಕ್ಕಿ- ಒಬ್ಬನ ಸಾವು: ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿಯಾಗಿ ಓರ್ವ ಸವಾರ ಮೃತಪಟ್ಟು ನಾಲ್ವರು ಸವಾರರು ಗಾಯಗೊಂಡಿರುವ ಘಟನೆ ತಾಲೂಕಿನ ಚಪ್ಪರದಹಳ್ಳಿ ಹೊರವಲಯದ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಸ್ಕೂಟಿಯಲ್ಲಿ ಕೊಟ್ಟೂರಿನಿಂದ ಹರಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಹೀರೋ ಫ್ಯಾಷನ್‌ ದಿಚಕ್ರ ವಾಹನ ಡಿಕ್ಕಿ ಹೊಡೆದಿದ್ದರಿಂದ ಪಟ್ಟಣದ ಕೆಳಗೇರಿ ನಿವಾಸಿ ಮಹಮ್ಮದ್‌ ರಫೀ (21) ಮೃತಪಟ್ಟಿದ್ದಾನೆ. ಎರಡು ವಾಹನಗಳ ಹಿಂಬದಿಯ ಸವಾರರಾದ ಮುಬಾರಕ್‌ (20), ಶಬ್ಬೀರ್‌(25), ಮಹಾಂತೇಶ (20) ಕರಿಬಸವರಾಜ (20) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಶಬ್ಬೀರ್‌ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಟ್ಟೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಎಎಸ್‌ಐ ಶಿವಕುಮಾರಯ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾಹನ ಪಲ್ಟಿ: ಚಾಲಕನ ನಿಯಂತ್ರಣ ತಪ್ಪಿದ ಕೋಳಿ ಸಾಗಾಟ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ- ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ ಕೊಡಗರಹಳ್ಳಿ ಮಾರುತಿ ನಗರ ತಿರುವಿನಲ್ಲಿ ಮಂಗಳವಾರ ಮುಂಜಾನೆ 5 ಗಂಟೆಗೆ ನಡೆದಿದೆ. ಮಂಗಳೂರು ಮೂಲದ ಚಾಲಕ ನಾಗಭೂಷಣ್‌ ಮೃತರು. ವಾಹನ ಸಹಾಯಕ ಬಿಜಯ್‌ ಓರಾನ್‌ ಸಣ್ಣ ಪುಟ್ಟಗಾಯಗಳೊಂದಿಗೆ ಪಾರಾಗಿದ್ದಾರೆ.

ವರಮಹಾಲಕ್ಷ್ಮಿ ದಿನವೇ ಬಾಗಿಲು ಮುರಿದು ಚಿನ್ನ ಕದ್ದಿದ್ದವರ ಸೆರೆ

ಮಂಗಳವಾರ ಮುಂಜಾನೆ ಮೈಸೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಈ ವಾಹನ ಅಪಘಾತಕ್ಕೀಡಾಗಿದ್ದು ಈ ಸ್ಥಳಕ್ಕೆ ಡಿವೈಎಸ್‌ಪಿ ಆರ್‌.ವಿ. ಗಂಗಾಧರಪ್ಪ, ವೃತ್ತನಿರೀಕ್ಷಕರಾದ ಬಿ.ಜೆ. ಮಹೇಶ್‌, ಸುಂಟಿಕೊಪ್ಪ ಠಾಣಾಧಿಕಾರಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು. ಮೃತದೇಹವನ್ನು ಕುಶಾಲನಗರಕ್ಕೆ ತೆಗೆದುಕೊಂಡು ಹೋಗಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ನೀಡಲಾಯಿತು.

click me!