ಡೇಟಿಂಗ್ ಆ್ಯಪ್‌ನಲ್ಲಿ ಸ್ನೇಹ: ಮಹಿಳೆಗೆ ಮತ್ತು ಬರಿಸಿ ಗ್ಯಾಂಗ್‌ರೇಪ್‌; ಕೃತ್ಯ ಸೆರೆ ಹಿಡಿದ ಪಾಪಿಗಳು

By BK Ashwin  |  First Published Jul 27, 2023, 3:08 PM IST

ಡೇಟಿಂಗ್ ಅಪ್ಲಿಕೇಶನ್ ಮೂಲಕ ಆರೋಪಿಯನ್ನು ಭೇಟಿಯಾಗಿದ್ದೆ. ಅವನು ನಂತರ ಜೂನ್ 29 ರಂದು ಹೋಟೆಲ್‌ಗೆ ಆಹ್ವಾನಿಸಿದ್ದನು ಎಂದು ಮಹಿಳೆ ದೂರು ನೀಡಿದ ಬಗ್ಗೆ ಪೊಲೀಸರು ತಿಳಿಸಿದ್ದಾರೆ.


ಗುರುಗ್ರಾಮ (ಜುಲೈ 27, 2023): ಉತ್ತರ ಪ್ರದೇಶದ ಗುರುಗ್ರಾಮ್‌ನಲ್ಲಿ ಡೇಟಿಂಗ್ ಆ್ಯಪ್‌ನಲ್ಲಿ ಭೇಟಿಯಾದ ವ್ಯಕ್ತಿ ಮತ್ತು ಆತನ ಸ್ನೇಹಿತ ಮಹಿಳೆಯೊಬ್ಬರಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಗುರುಗ್ರಾಮ್‌ನ ಸೆಕ್ಟರ್ 50 ಪ್ರದೇಶದ ಹೋಟೆಲ್‌ನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಭೇಟಿಯಾಗಲು ಹೋದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಡೇಟಿಂಗ್ ಅಪ್ಲಿಕೇಶನ್ ಮೂಲಕ ಆರೋಪಿಯನ್ನು ಭೇಟಿಯಾಗಿದ್ದೆ. ಅವನು ನಂತರ ಜೂನ್ 29 ರಂದು ಹೋಟೆಲ್‌ಗೆ ಆಹ್ವಾನಿಸಿದ್ದನು ಎಂದು ಮಹಿಳೆ ದೂರು ನೀಡಿದ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಹೋಟೆಲ್ ತಲುಪಿದಾಗ, ಆ ವ್ಯಕ್ತಿ ಮತ್ತು ಅವನ ಸ್ನೇಹಿತ ಅವಳಿಗೆ ಆಹಾರವನ್ನು ನೀಡಿದರು ಮತ್ತು ಅದನ್ನು ಸೇವಿಸಿದ ನಂತರ ಮಹಿಳೆ ಪ್ರಜ್ಞೆ ಕಳೆದುಕೊಂಡಳು. ಆರೋಪಿಗಳು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಹೇಳಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ. 

Tap to resize

Latest Videos

ಇದನ್ನು ಓದಿ: Manipur: ಬಿಎಸ್‌ಎಫ್‌ ಯೋಧನಿಂದ ಮಹಿಳೆಗೆ ಲೈಂಗಿಕ ಕಿರುಕುಳ ; ಸಿಸಿ ಕ್ಯಾಮರಾದಲ್ಲಿ ಸೆರೆ

ಮಹಿಳೆ ಪ್ರಜ್ಞೆ ಕಳೆದುಕೊಂಡ ಲಾಭ ಪಡೆದು ನನ್ನ ಮೇಲೆ ಅತ್ಯಾಚಾರ ಎಸಗಿ ಕೃತ್ಯದ ವಿಡಿಯೋ ಕೂಡ ಮಾಡಿದ್ದಾರೆ. ಪ್ರಜ್ಞೆ ಬಂದ ನಂತರ ನಾನು ಪ್ರತಿಭಟಿಸಿದಾಗ ಆರೋಪಿಗಳು ತನ್ನ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ,  ನಾನು ಮನೆಗೆ ಮರಳಿದೆ ಆದರೀಗ ಪೊಲೀಸರಿಗೆ ದೂರು ನೀಡುತ್ತಿದ್ದೇನೆ’’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಸಂಬಂಧ ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಇಬ್ಬರು ಅಪರಿಚಿತ ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಪ್ರವೀಣ್ ಮಲಿಕ್ ಹೇಳಿದ್ದು, ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Love Jihad: ಹಿಂದೂ ಮಹಿಳೆಯೊಂದಿಗೆ ಫೇಸ್‌ಬುಕ್‌ ಲವ್‌: ರೇಪ್‌ ಮಾಡಿ ಗರ್ಭಪಾತ ಮಾಡಿಸಿ ಇಸ್ಲಾಂಗೆ ಮತಾಂತರ!

ಪ್ರತ್ಯೇಕ ಘಟನೆಯಲ್ಲಿ, ದೆಹಲಿ ಮೂಲದ ಭೋಜ್‌ಪುರಿ ಕಲಾವಿದೆಯೊಬ್ಬರನ್ನು ಆಕೆಯ ಇನ್‌ಸ್ಟಾಗ್ರಾಮ್ ಸ್ನೇಹಿತ ಗುರುಗ್ರಾಮ್‌ನ ಹೋಟೆಲ್‌ನಲ್ಲಿ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಲಾಗಿದೆ.  ಅಲ್ಲಿ ಆರೋಪಿ ಸಂದರ್ಶನದ ನೆಪದಲ್ಲಿ ಆಕೆಗೆ ಕರೆ ಮಾಡಿದ್ದ. ತಾನು ಭೋಜ್‌ಪುರಿ ಎಂಟರ್‌ಟೈನರ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವೆ ಮತ್ತು ಪ್ರಸ್ತುತ ದೆಹಲಿಯಲ್ಲಿ ವಾಸಿಸುತ್ತಿದ್ದೇನೆ ಎಂದು 24 ವರ್ಷದ ಸಂತ್ರಸ್ತೆ ಪೊಲೀಸರಿಗೆ ಹೇಳಿದ್ದಾರೆ.

“ಕೆಲವು ದಿನಗಳ ಹಿಂದೆ ನಾನು ಇನ್‌ಸ್ಟಾಗ್ರಾಮ್ ಮೂಲಕ ಮಹೇಶ್ ಪಾಂಡೆ ಎಂಬ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದೆ. ಅವರು ನನಗೆ ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಲು ಆಫರ್ ನೀಡಿದರು. ಜೂನ್ 29 ರಂದು ಅವರು ಸಂದರ್ಶನದ ನೆಪದಲ್ಲಿ ನನ್ನನ್ನು ಗುರುಗ್ರಾಮ್‌ನ ಉದ್ಯೋಗ್ ವಿಹಾರ್ ಪ್ರದೇಶದ ಹೋಟೆಲ್‌ಗೆ ಕರೆದರು ಎಂದು ಭೋಜ್‌ಪುರಿ ಗಾಯಕಿ ತಮ್ಮ ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Manipur: ಒಂದಲ್ಲ.. ಎರಡಲ್ಲ.. 7 ಅತ್ಯಾಚಾರ ನಡೆದಿದೆ: ಬಗೆದಷ್ಟೂ ಬಯಲಿಗೆ ಬರ್ತಿದೆ ರೇಪ್‌ ಕೇಸ್‌!

"ನಾನು ಹೋಟೆಲ್ ತಲುಪಿದಾಗ, ಮಹೇಶ್ ನನ್ನನ್ನು ಮೊದಲೇ ಬುಕ್‌ ಮಾಡಿದ್ದ ಕೊಠಡಿಗೆ ಕರೆದೊಯ್ದರು ಮತ್ತು ಕೆಲವು ಪ್ರಶ್ನೆಗಳನ್ನು ಕೇಳಿದ ನಂತರ ಅವರು ಮದ್ಯಪಾನ ಮಾಡಲು ಪ್ರಾರಂಭಿಸಿದರು. ಇದಾದ ನಂತರ ನಾನು ಹೊರಡಲು ಆರಂಭಿಸಿದಾಗ ಆತ ಬಲವಂತವಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ’’ ಎಂದು ಸಂತ್ರಸ್ತೆ ಹೇಳಿದ್ದಾರೆ. 

ಪಾಂಡೆ ತನ್ನನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾನೆ ಮತ್ತು ನಂತರ ಅವನ ಕೆಲವು ಸ್ನೇಹಿತರು ತನ್ನ ಫೋನ್‌ಗೆ ಕರೆ ಮಾಡಿ ಪೊಲೀಸರಿಗೆ ಹೋದರೆ ತನ್ನ ಖಾಸಗಿ ವೀಡಿಯೊಗಳನ್ನು ಇಂಟರ್ನೆಟ್‌ನಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: Manipur: ಪೊಲೀಸರಿಂದ ಬಿಡಿಸಿ ಎಳೆದೊಯ್ದು ನಗ್ನ ಪರೇಡ್‌ ಮಾಡಿ ರೇಪ್‌; ಈ ವಿಕೃತ ಘಟನೆಗೆ ಇಲ್ಲಿದೆ ಅಸಲಿ ಕಾರಣ..

ಮಹಿಳೆಯ ದೂರಿನ ನಂತರ, ಬುಧವಾರ ಉದ್ಯೋಗ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), 506 (ಅಪರಾಧ ಬೆದರಿಕೆ), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಗುರುಗ್ರಾಮ್‌ನ ಚಕರ್‌ಪುರ ಪ್ರದೇಶದ ನಿವಾಸಿ ಮಹೇಶ್ ಪಾಂಡೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.  

ಇದನ್ನೂ ಓದಿ; ಮಣಿಪುರ ಸ್ತ್ರೀಯರ ನಗ್ನ ಪರೇಡ್‌: ದೇಶಾದ್ಯಂತ ದಿಗ್ಭ್ರಮೆ, ಆಕ್ರೋಶ;ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ

click me!