
ಪಾಣಿಪತ್: ತನಗಿಂತ ಸುಂದರವಾಗಿದ್ದಾಳೆಂದು 6 ವರ್ಷದ ಸೊಸೆಯ ಮೇಲೆ ಮತ್ಸರ ಮೂಡಿಸಿಕೊಂಡ ಮಹಿಳೆಯೊಬ್ಬಳು, ಆಕೆಯನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಹರ್ಯಾಣದ ಪಾಣಿಪತ್‌ನಲ್ಲಿ ನಡೆದಿದೆ.
ಜತೆಗೆ, ಆರೋಪಿ ಪೂನಂ ಈ ಮೊದಲು ತನ್ನ ಮಗ ಸೇರಿ 3 ಮಕ್ಕಳನ್ನು ಕೊಲೆ ಮಾಡಿದ್ದಳು ಎಂದೂ ತಿಳಿದುಬಂದಿದೆ. ಕಾರ್ಯಕ್ರಮಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಪುಟ್ಟ ವಿಧಿ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಳು. ಹುಡುಕಿ ಹೊರಟ ಅಜ್ಜಿಗೆ ಮೊದಲ ಮಹಡಿಯಲ್ಲಿದ್ದ ಉಗ್ರಾಣದಲ್ಲಿ ನೀರಿನ ಟಬ್‌ನಲ್ಲಿ ಮುಳುಗಿದ್ದ ಸ್ಥಿತಿಯಲ್ಲಿ ಸಿಕ್ಕಿದ್ದಾಳೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಅದಾಗಲೇ ಮೃತಪಟ್ಟಿದ್ದಳು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಗಿಳಿದಿದ್ದಾರೆ.
ವಿಚಾರಣೆ ವೇಳೆ ಪೂನಂ, 2 ವರ್ಷದ ಹಿಂದೆಯೇ ತನಗಿಂತ ಸುಂದರವಾಗಿದ್ದ ಇಬ್ಬರು ಹುಡುಗಿಯರನ್ನು ಕೊಂದಿದ್ದಾಗಿ ಹಾಗೂ ಈ ಬಗ್ಗೆ ಯಾರಿಗೂ ಸಂಶಯ ಬಾರದಿರಲಿ ಎಂದು ಮಗನನ್ನೂ ನೀರಲ್ಲಿ ಮುಳುಗಿಸಿ ಕೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ