ತನಗಿಂತ 20 ವರ್ಷ ಚಿಕ್ಕ ಹುಡುಗನ ಪ್ರೀತಿಗಾಗಿ, ಗಂಡನಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ 53 ವರ್ಷದ ಆಂಟಿ!

Published : Aug 17, 2025, 07:01 PM IST
Chikkamagaluru Crime News

ಸಾರಾಂಶ

ಚಿಕ್ಕಮಗಳೂರಿನಲ್ಲಿ 53 ವರ್ಷದ ಮೀನಾಕ್ಷಿ, 33 ವರ್ಷದ ಪ್ರಿಯಕರ ಪ್ರದೀಪ್ ಜೊತೆ ಸೇರಿ ಗಂಡ ಸುಬ್ರಹ್ಮಣ್ಯನನ್ನು ಕೊಲೆಗೈದಿದ್ದಾಳೆ. ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ. ಮೇ 31 ರಂದು ಕೊಲೆಗೈದು ಶವ ಸುಟ್ಟು, ನಂತರ ಕಾಣೆಯಾದ ಬಗ್ಗೆ ದೂರು ನೀಡಿದ್ದಳು. ನಾಲ್ವರ ಬಂಧನ.

ಚಿಕ್ಕಮಗಳೂರು (ಆ.17): ತನಗಿಂತ 20 ವರ್ಷ ಚಿಕ್ಕವನಾದ ಪ್ರಿಯಕರನೊಂದಿಗೆ ಅನೈತಿಕ ಸಂಬಂಧ ಹೊಂದುವುದಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಆತನ ಪತ್ನಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಎರಡು ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಕಡೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಮೃತ ದುರ್ದೈವಿಯನ್ನು ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಈತನ ಪತ್ನಿ ಮೀನಾಕ್ಷಿ (53) ಮತ್ತು ಆಕೆಯ ಪ್ರಿಯಕರ ಪ್ರದೀಪ್ (33) ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ:

ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ಈ ಕ್ರೌರ್ಯ ನಡೆದಿತ್ತು. ಸುಬ್ರಹ್ಮಣ್ಯ ಅವರಿಗೆ ತನ್ನ ಪತ್ನಿ ಮೀನಾಕ್ಷಿಯ ನಡವಳಿಕೆ ಬಗ್ಗೆ ಅನುಮಾನವಿತ್ತು. ಆಕೆಯ ಅಕ್ರಮ ಸಂಬಂಧದ ಬಗ್ಗೆ ಪತ್ತೆಯಾದಾಗ, ಅವರಿಬ್ಬರ ನಡುವೆ ಜಗಳ ಆಗುತ್ತಿತ್ತು. ಪ್ರದೀಪ್ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಳ್ಳುವುದಕ್ಕೆ ಗಂಡನೇ ಅಡ್ಡಿ ಆಗುತ್ತಿದ್ದಾನೆ. ಪ್ರತಿನಿತ್ಯ ತನ್ನ ಚಲನವಲನ ಗಮನಿಸುತ್ತಾ, ತನಗೆ ಕಡಿವಾಣ ಹಾಕುತ್ತಿದ್ದಾನೆ. ಆದರೆ, ಯುವಕನೊಂದಿಗೆ ಅನೈತಿಕ ಸಂಬಂಧ ಬಿಟ್ಟಿರಲಾಗದ ಹೆಂಡತಿ ಗಂಡನನ್ನು ಕೊಲೆ ಮಾಡಿದರೆ, ಪ್ರಿಯಕರನೊಂದಿಗೆ ಸುಖವಾಗಿ ಜೀವನ ಮಾಡಬಹುದು ಎಂದು ಭಾವಿಸಿದ್ದಳು. ಈ ಹಿನ್ನೆಲೆಯಲ್ಲಿ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳಿ.

ಈ ವಿಚಾರವನ್ನು ಮೀನಾಕ್ಷಿ ಆಕೆಯ ಪ್ರೇಮಿ ಪ್ರದೀಪ್ ಮತ್ತು ಆತನ ಇಬ್ಬರು ಸ್ನೇಹಿತರಿಗೆ ತಿಳಿಸಿದ್ದಾಳೆ. ಎಲ್ಲರೂ ಸೇರಿ ಮೀನಾಕ್ಷಿಯ ಗಂಡ ಸುಬ್ರಹ್ಮಣ್ಯನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ತಮ್ಮ ಯೋಜನೆಯಂತೆ ಸುಬ್ರಹ್ಮಣ್ಯನನ್ನು ಒಂದು ಕಾರ್ಯಕ್ರಮದ ನೆಪದಲ್ಲಿ ಚಿಕ್ಕಮಗಳೂರಿಗೆ ಕರೆತಂದ ಮೀನಾಕ್ಷಿ, ಮೇ 31ರಂದು ಕಂಸಾಗರ ಗೇಟ್ ಬಳಿ ಕ್ರೂರವಾಗಿ ಕೊಲೆ ಮಾಡಿ, ಶವವನ್ನು ಸುಟ್ಟು ಹಾಕಿದ್ದರು. ಆಶ್ಚರ್ಯವೆಂದರೆ, ಪತಿಯನ್ನು ಕೊಂದ ಬಳಿಕ ಆಕೆ ಜೂನ್ 2ರಂದು ಪತಿ ಕಾಣೆಯಾಗಿದ್ದಾನೆ ಎಂದು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಕೊಲೆ ಬಯಲಾಗಿದ್ದು ಹೇಗೆ?

ಘಟನೆಯ ನಂತರ ಕೊಲೆಯಾದ ಸುಬ್ರಹ್ಮಣ್ಯ ಅವರ ಅಂಗಡಿಯ ಕೀಗಳನ್ನು ಪೊಲೀಸರು ಪತ್ತೆಹಚ್ಚಿದರು. ಕೀಯಿಂದಲೇ ಕೊಲೆಗಾರರನ್ನು ಪತ್ತೆ ಹಚ್ಚುವ ಪ್ರಯತ್ನವನ್ನು ಪೊಲೀಸರು ಪ್ರಾರಂಭಿಸಿದರು. ನಂತರ, ತನಿಖೆ ತೀವ್ರಗೊಂಡಾಗ ಮೀನಾಕ್ಷಿ ಮತ್ತು ಆಕೆಯ ಪ್ರಿಯಕರ ಪ್ರದೀಪ್ ಮೇಲೆ ಅನುಮಾನ ಬಂದಿತು. ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಇಬ್ಬರೂ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಕೊಲೆಗೆ ಪ್ರದೀಪ್‌ಗೆ ಆತನ ಇಬ್ಬರು ಸ್ನೇಹಿತರು ಸಹ ಸಹಾಯ ಮಾಡಿದ್ದು, ಅವರೆಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಯು ಸಮಾಜದಲ್ಲಿ ಆಘಾತವನ್ನು ಮೂಡಿಸಿದ್ದು, ಪೊಲೀಸರ ತನಿಖೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಕಡೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!
ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!