
ಬೆಂಗಳೂರು(ಆ.14): ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳ ಮೇಲೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಂದಿರುವ ಘಟನೆ ಜೆ.ಪಿ.ನಗರದ 6ನೇ ಹಂತದಲ್ಲಿ ನಡೆದಿದೆ.
ತಲಘಟ್ಟಪುರ ನಿವಾಸಿ ಚಂದ್ರಕಲಾ ಕೊಲೆಯಾದ ದುರ್ದೈವಿ. ಈ ಹತ್ಯೆಯಲ್ಲಿ ಮೃತಳ ಪತಿ ಮತ್ತು ಆತನ ಸ್ನೇಹಿತನ ಪಾತ್ರವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಜೆ.ಪಿ.ನಗರದ ರಸ್ತೆ ಬದಿಯಲ್ಲಿ ಚಂದ್ರಕಲಾ ಮೇಲೆ ಬುಧವಾರ ರಾತ್ರಿ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ಗಾಯಾಳು ರಕ್ಷಣೆಗೆ ಧಾವಿಸಿದ ಸ್ಥಳೀಯರು, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಚಂದ್ರಕಲಾ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೀಮಾತೀರದ ರೌಡಿ ಹತ್ಯೆ; ಜೊತೆಗಿದ್ದವರೇ ದುಶ್ಮನ್‌ಗಳಾದ್ರಾ?
ತಲಘಟ್ಟಪುರದಲ್ಲಿ ನೆಲೆಸಿದ್ದ ಚಂದ್ರಕಲಾ, ಮನೆಗೆಲಸ ಮಾಡುತ್ತ ಜೀವನ ಸಾಗಿಸುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿದ್ದು, ಆಗಾಗ್ಗೆ ಜಗಳವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಚಂದ್ರಕಲಾ ಮೇಲೆ ಹಲ್ಲೆ ನಡೆಸಿ ಮೃತಳ ಪತಿ ಕೊಂದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ