
ಉಜ್ಜಯಿನಿ (ಮ.ಪ್ರ): ಚಿಂದಿ ಆಯುವ ಯುವತಿಗೆ ಮದ್ಯ ಕುಡಿಸಿ ಫಟ್‌ಪಾತ್‌ನಲ್ಲೇ ರೇಪ್ ಯುವಕನೊಬ್ಬ ಅತ್ಯಾಚಾರ ಎಸಗಿದ ಭೀಕರ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.
ಈ ಘಟನೆಯನ್ನು ಕೆಲವು ದಾರಿಹೋಕರು, ಕೃತ್ಯ ತಡೆಯುವ ಬದಲು ಅದನ್ನು ಚಿತ್ರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಈಗ ಸಂತ್ರಸ್ತೆ ದೂರಿನ ನಂತರ ಅತ್ಯಾಚಾರಿ ಲೋಕೇಶ್ ಎಂಬಾತನನ್ನು ಬಂಧಿಸಿದ್ದಾರೆ.
ರೋಗಿಯ ಹೊರಗೆಸೆದು ಆತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಆಂಬುಲೆನ್ಸ್ ಚಾಲಕ: ರೋಗಿ ಸಾವು
ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ವ್ಯಕ್ತಿ ಮಹಿಳೆಗೆ ಮದ್ಯ ಕುಡಿಸಿ ನಂತರ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಮಾತನಾಡದಂತೆ ಆಕೆಗೆ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದ. ಮದ್ಯದ ಪರಿಣಾಮ ಕಡಿಮೆಯಾದಾಗ ಮಹಿಳೆ ದೂರು ನೀಡಿದ ನಂತರ, ಲೋಕೇಶ್‌ನನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಕೃತ್ಯವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ