
ಅಂಕೋಲಾ(ಫೆ.08): ಗಂಡನ ತಮ್ಮನೆ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಮಾನಭಂಗ ನಡೆಸಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಟ್ಟಣದ ಕಾಕರಮಠದ ಮಹಿಳೆಯೊಬ್ಬಳು ಈ ಬಗ್ಗೆ ಪೊಲೀಸ್ ದೂರು ನೀಡಿ ಫೆ. 4ರಂದು ಸಂಜೆ 4.50ರಿಂದ 5.15ರ ಅವಧಿಯಲ್ಲಿ ನಾನು ಅಂಗಡಿಯಿಂದ ಮನೆಗೆ ಬಂದಾಗ ಗಂಡನ ತಮ್ಮ ಉಮರ ಅಹ್ಮದ್ ಶೇಖ ಅವಾಚ್ಯವಾಗಿ ಬೈದು, ನಿನ್ನ ಗಂಡ ಎಲ್ಲಿ ಹೋಗಿದ್ದಾನೆ. ಈಗ ಎಲ್ಲಿದ್ದಾನೆ. ಆತನ ಮೇಲೆ ನಾವು ಪೊಲೀಸ್ ಠಾಣೆಯಲ್ಲಿ ಕೇಸ್ ಕೊಟ್ಟಿದ್ದೇವೆ. ಆತನಿಗೆ ಜೈಲಿಗೆ ಕಳುಹಿಸುತ್ತೇನೆ ಎಂದು ಹೇಳುತ್ತಲೆ. ನನ್ನ ಹಿಂಬಾಲಿಸಿ ಕೈ ಹಿಡಿದು ಎಳೆದು, ಹೊಡೆದಿದ್ದಾನೆ. ಜತೆಗೆ ಬಟ್ಟೆ ಹರಿದು ಹಾಕಿ, ಮಾನಕ್ಕೆ ಕುದುಂಟು ಮಾಡಿದ್ದಾನೆ. ಆಗ ನಾನು ಜೋರಾಗಿ ಕೂಗಿದಾಗ ಬೆಡ್ ರೂಮ್‌ನಿಂದ ಹೊರ ಬಂದು, ಮತ್ತೆ ಅವಾಚ್ಯವಾಗಿ ನಿಂದಿಸಿ ನಿನಗೆ ಹಾಗೂ ನಿನ್ನ ಗಂಡನನ್ನು ನಾನು ಸುಮ್ಮನೆ ಬಿಡುವುದಿಲ್ಲ. ಇಬ್ಬರನ್ನು ಕೊಂದು ಹಾಕುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಇಬ್ಬರು ಕಾಮುಕರಿಗೆ 20 ವರ್ಷ ಜೈಲು ಶಿಕ್ಷೆ
ಆರೋಪಿ ಉಮರ್ ಅಹ್ಮದ ಶೇಖ ವಿರುದ್ದ ಪಿಎಸೈ ಉದ್ದಪ್ಪ ಧರೆಪ್ಪನವರ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿಯ ಮೇಲೆ ಐಪಿಸಿ 506,504,323,354 ಕಲಂಅಡಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ