
ಬೆಂಗಳೂರು(ಮಾ.24): ವೈಯಕ್ತಿಕ ವಿಚಾರವಾಗಿ ಮಹಿಳಾ ಕೂಲಿ ಕಾರ್ಮಿಕರೊಬ್ಬರನ್ನು ಸ್ನೇಹಿತ ಕಟ್ಟಿಗೆಯಿಂದ ಹೊಡೆದು ಹತ್ಯೆಗೈದು ಪರಾರಿಯಾಗಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಾಂತಿಪುರ ಸಮೀಪದ ನಾಯ್ಡು ಲೇಔಟ್ ನಿವಾಸಿ ಫಿರ್ಮಾ (38) ಹತ್ಯೆಯಾದ ದುರ್ದೈವಿ. ಈ ಕೃತ್ಯ ಎಸಗಿ ಪರಾರಿಯಾಗಿರುವ ಮೆಹಬೂಬ್ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಫಿರ್ಮಾ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು; ಗಂಡನ ಕೊಲೆಗೆ ಪತ್ನಿ-ಪುತ್ರನೇ ಸುಪಾರಿ ಕೊಟ್ಟರು..
ಯಾದಗಿರಿ ಜಿಲ್ಲೆಯ ಫಿರ್ಮಾ, ತಮ್ಮ ಮಕ್ಕಳ ಜತೆ ನಾಯ್ಡು ಲೇಔಟ್ ನೆಲೆಸಿದ್ದರು. ಕೂಲಿ ಕೆಲಸ ಮಾಡುತ್ತಿದ್ದ ಆಕೆಗೆ ಹಲವು ವರ್ಷಗಳಿಂದ ಮೆಹಬೂಬ್ ಜತೆ ಸ್ನೇಹವಿತ್ತು. ಈ ಗೆಳೆತನದಲ್ಲೇ ಆಗಾಗ್ಗೆ ಅವರ ಮನೆಗೆ ಬಂದು ಆತ ಹೋಗುತ್ತಿದ್ದ. ಅಂತೆಯೇ ಶನಿವಾರ ರಾತ್ರಿ ಯಾದಗಿರಿಯಿಂದ ಬಂದಿದ್ದ ಮೆಹಬೂಬ್, ಗೆಳತಿಯ ಮನೆಯಲ್ಲಿ ತಂಗಿದ್ದ. ಕ್ಷುಲ್ಲಕ ವಿಚಾರವಾಗಿ ಭಾನುವಾರ ಬೆಳಗ್ಗೆ ಆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕಟ್ಟಿಗೆಯಿಂದ ಮನಬಂದಂತೆ ಬಡಿದು ಆಕೆಯನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ