
ಕೊಡಗು (ಸೆ.15): ಚಿನ್ನ ಖರೀದಿಸುವ ನೆಪದಲ್ಲಿ ಜ್ಯುವೆಲರಿ ಶಾಪ್‌ಗೆ ಬಂದಿದ್ದ ಖತರ್ನಾಕ್ ಮಹಿಳೆಯರು ಚಿನ್ನದ ಸರವನ್ನು ನೋಡುವ ರೀತಿ ನಟಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಈ ಘಟನೆ ನಿನ್ನೆ (ಸೆಪ್ಟೆಂಬರ್ 14, 2025) ನಡೆದಿದ್ದು, ಕಳ್ಳತನ ಮಾಡುವ ದೃಶ್ಯ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಹಿಳೆಯರನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಶಂಕಿತ ಮಹಿಳೆಯರ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇದು ಹಬ್ಬಗಳ ಸೀಸನ್ ಎಚ್ಚರ:
ದಸರಾ ದೀಪಾವಳಿ ಹಬ್ಬಗಳ ಸೀಸನ್‌ನಲ್ಲಿ ಚಿನ್ನದ ಆಭರಣಗಳ ಖರೀದಿಗೆ ಜನಸಂದಣಿ ಹೆಚ್ಚಾಗುತ್ತದೆ, ಆದರೆ ಈ ಸಮಯದಲ್ಲಿ ಚಿನ್ನದ ಅಂಗಡಿಗಳಲ್ಲಿ ಕಳ್ಳತನದ ಪ್ರಕರಣಗಳೂ ಹೆಚ್ಚುತ್ತವೆ. ಚಿನ್ನ ಖರೀದಿಸುವ ನೆಪದಲ್ಲಿ ಬಂದು, ಸರಗಳನ್ನು ನೋಡುವ ರೀತಿಯಲ್ಲಿ ನಟಿಸಿ ಕಳವು ಮಾಡುವ ಘಟನೆಗಳು ಹೆಚ್ಚಾಗಿವೆ. ಆದ್ದರಿಂದ, ಜ್ಯೂವೆಲ್ಲರಿ ಶಾಪ್ ಮಾಲೀಕರು ಹಾಗೂ ಗ್ರಾಹಕರು ಎಚ್ಚರಿಕೆಯಿಂದ ಇರಬೇಕು, ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ಸಮರ್ಪಕವಾಗಿ ಬಳಸಿಕೊಂಡು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವುದರಿಂದ ಕಳ್ಳತನಕ್ಕೆ ಕಡಿವಾಣ ಹಾಕಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ