ಮಾಜಿ ಸಚಿವ MB Patil ಮನೆಯಲ್ಲಿ ವಾಚ್‌, ವಿದೇಶಿ ಕರೆನ್ಸಿ ಕದ್ದ ಕೆಲಸಗಾರ!

Published : Aug 02, 2022, 10:01 AM IST
 ಮಾಜಿ ಸಚಿವ MB Patil ಮನೆಯಲ್ಲಿ  ವಾಚ್‌, ವಿದೇಶಿ ಕರೆನ್ಸಿ ಕದ್ದ ಕೆಲಸಗಾರ!

ಸಾರಾಂಶ

ಮಾಜಿ ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ವಾಚ್‌, ವಿದೇಶಿ ಕರೆನ್ಸಿ  ಕದ್ದು  ಕೆಲಸಗಾರ ಒಡಿಶಾಗೆ ಪಲಾಯನಗೈದಿರುವ ಘಟನೆ ನಡೆದಿದ್ದು, ಸದಾಶಿವ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿದ್ದಾರೆ.

ಬೆಂಗಳೂರು (ಆ.2): ಇತ್ತೀಚೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್‌ ಅವರ ಮನೆಯಲ್ಲಿ ಬೆಲೆ ಬಾಳುವ ಕೈ ಗಡಿಯಾರಗಳು ಹಾಗೂ ವಿದೇಶಿ ಕರೆನ್ಸಿ ಕದ್ದು ಪರಾರಿಯಾಗಿದ್ದ ಮನೆ ಕೆಲಸಗಾರನನ್ನು ಸದಾಶಿವ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಜಯಂತ್‌ ದಾಸ್‌ ಬಂಧಿತನಾಗಿದ್ದು, ಆರೋಪಿಯಿಂದ .1.30 ಲಕ್ಷ ಮೌಲ್ಯದ ಐದು ಕೈಗಡಿಯಾರಗಳು, .10 ಸಾವಿರ ಬೆಲೆಯ ಮೊಬೈಲ್‌ ಹಾಗೂ ವಿದೇಶಿ ಕರೆನ್ಸಿ ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಪಾಟೀಲ್‌ ಅವರ ಕುಟುಂಬಕ್ಕೆ ತಿಳಿಯದಂತೆ ಕಳ್ಳತನ ಮಾಡಿ ಆರೋಪಿ, ತನ್ನೂರಿಗೆ ಪರಾರಿಯಾಗಿದ್ದ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿ ಕರೆ ತಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದಾಶಿವ ನಗರ 18ನೇ ಕ್ರಾಸ್‌ನಲ್ಲಿ ನೆಲೆಸಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಅವರ ಮನೆಯಲ್ಲಿ ದಾಸ್‌ ಸೇರಿದಂತೆ ಐವರು ಕೆಲಸ ಮಾಡುತ್ತಿದ್ದರು. ಆ ಮನೆಯ ಹೊರ ಆವರಣದಲ್ಲೇ ಕೆಲಸಗಾರರಿಗೆ ವಸತಿ ಕಲ್ಪಿಸಲಾಗಿತ್ತು.

ಐದು ವರ್ಷದಿಂದ ಅವರ ಮನೆಯಲ್ಲಿ ದಾಸ್‌ ಕೆಲಸ ಮಾಡುತ್ತಿದ್ದು, ಒಂದೂವರೆ ತಿಂಗಳ ಹಿಂದೆ ಆತ ಕೆಲಸ ತೊರೆದಿದ್ದ. ಪಾಟೀಲ್‌ ಅವರಿಗೆ ತಿಳಿಯದಂತೆ ಅವರ ಸಂಗ್ರಹದಲ್ಲಿದ್ದ ವಿದೇಶಿ ಕರೆನ್ಸಿ ಹಾಗೂ ಕೈ ಗಡಿಯಾರಗಳನ್ನು ಆತ ಕಳವು ಮಾಡಿದ್ದ. ಇತ್ತೀಚೆಗೆ ತಮ್ಮ ಸಂಗ್ರಹದಲ್ಲಿದ್ದ ವಿದೇಶಿ ಕರೆನ್ಸಿ ಹಾಗೂ ಕೈ ಗಡಿಯಾರಗಳು ಕಾಣದೆ ಹೋದಾಗ ಅನುಮಾನಗೊಂಡ ಮಾಜಿ ಸಚಿವರು, ಕೆಲಸಗಾರರನ್ನು ವಿಚಾರಿಸಿದಾಗ ದಾಸ್‌ ಮೇಲೆ ಶಂಕೆ ಮೂಡಿತು. ಈ ಬಗ್ಗೆ ಸದಾಶಿವ ನಗರ ಠಾಣೆಯಲ್ಲಿ ಅವರ ಆಪ್ತ ಸಹಾಯಕ ದೂರು ದಾಖಲಿಸಿದ್ದರು. ಅಂತೆಯೇ ತನಿಖೆ ನಡೆಸಿ ಆರೋಪಿ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ: ಗೆಳೆಯನನ್ನೇ ಹೊಡೆದು ಹತ್ಯೆ
ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಮೇರೆಗೆ ಗೆಳೆಯನನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಕಾಟನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಕ್ಷಿ ಗಾರ್ಡನ್‌ ನಿವಾಸಿ ಶ್ರೀನಿವಾಸ್‌ ಅಲಿಯಾಸ್‌ ಸೀನಾ (32) ಮೃತ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಗೆಳೆಯ ಸಂತೋಷ್‌ ಅಲಿಯಾಸ್‌ ಚುಂಟಿ ಎಂಬಾತನನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ಈ ಗೆಳೆಯರ ಮಧ್ಯೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಈ ಹಂತದಲ್ಲಿ ಶ್ರೀನಿವಾಸ್‌ ತಲೆಗೆ ಆರೋಪಿ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದ. ಹಲ್ಲೆಗೊಳಗಾದ ಶ್ರೀನಿವಾಸ್‌ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಭಕ್ಷಿ ಗಾರ್ಡನ್‌ನಲ್ಲೇ ಶ್ರೀನಿವಾಸ್‌ ಮತ್ತು ಸಂತೋಷ್‌ ನೆಲೆಸಿದ್ದು, ಹಲವು ವರ್ಷಗಳಿಂದ ಇಬ್ಬರ ನಡುವೆ ಸ್ನೇಹವಿತ್ತು. ಇತ್ತೀಚೆಗೆ ತನ್ನ ಪತ್ನಿ ಜತೆ ಶ್ರೀನಿವಾಸ್‌ ಒಡನಾಟ ಹೊಂದಿದ್ದಾನೆ ಎಂದು ಶಂಕೆಗೊಂಡು ಸಂತೋಷ್‌, ಪತ್ನಿ ಸಂಗ ಬಿಡುವಂತೆ ಗೆಳೆಯನಿಗೆ ತಾಕೀತು ಮಾಡಿದ್ದ. ಈ ಎಚ್ಚರಿಕೆ ಬಳಿಕವೂ ಸ್ನೇಹ ಮುಂದುವರೆದಿತ್ತು. ಅಂತೆಯೇ ಭಾನುವಾರ ರಸ್ತೆ ಬದಿ ಟೀ ಕುಡಿಯುತ್ತಿದ್ದ ಶ್ರೀನಿವಾಸ್‌ ಮೇಲೆ ಏಕಾಏಕಿ ಸಂತೋಷ್‌ ಗಲಾಟೆ ಶುರು ಮಾಡಿದ್ದಾನೆ. ಈ ಹಂತದಲ್ಲಿ ಇಬ್ಬರ ನಡುವೆ ಮಾತಿನ ಸಮರ ನಡೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?