ಮನಸ್ಸು ಸರಿಯಾಗಿಲ್ಲವೆಂದು 10 ತಿಂಗಳ ಮಗುವನ್ನು ಬಿಟ್ಟು ನೇಣಿಗೆ ಶರಣಾದ ತಾಯಿ

Published : Sep 13, 2023, 06:36 PM ISTUpdated : Sep 13, 2023, 06:43 PM IST
ಮನಸ್ಸು ಸರಿಯಾಗಿಲ್ಲವೆಂದು 10 ತಿಂಗಳ ಮಗುವನ್ನು ಬಿಟ್ಟು ನೇಣಿಗೆ ಶರಣಾದ ತಾಯಿ

ಸಾರಾಂಶ

ಯಾಕೋ ನನ್ನ ಮನಸ್ಸು ಸರಿಯಾಗಿಲ್ಲವೆಂದು 10 ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟುಬಂದ ಮಹಿಳೆ ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಯಾದಗಿರಿ (ಸೆ.13): ಹಲವು ದಿನಗಳಿಂದ ನನಗೆ ಮನಸ್ಸು ಸರಿಯಾಗಿಲ್ಲವೆಂದು ಬಳಲುತ್ತಿದ್ದ ಗೃಹಿಣಿಯೊಬ್ಬಳು, ತನ್ನ 10 ತಿಂಗಳ ಮಗುವನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲವೆಂದು ತವರು ಮನೆಯಲ್ಲಿ ಬಿಟ್ಟು ಬಂದಿದ್ದಳು. ಗಂಡನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸೌಂದರ್ಯ ಮಠಪತಿ (25) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮನೆಯವರು ಮಾಹಿತಿ ನೀಡಿದ್ದಾರೆ. ಈಕೆ ಹೆರಿಗೆಯಾದ ನಂತರ ತನ್ನ 6 ತಿಂಗಳವರೆಗೆ ಚೆನ್ನಾಗಿಯೇ ಇದ್ದಳು. ಆದರೆ, ಹೆರಿಗೆಯ ಬಾಣಂತನವನ್ನು ಮುಗಿಸಿಕೊಂಡು ಗಂಡನ ಮನೆಗೆ ಬಂದಿದ್ದ ಮೃತೆ ಸೌಂದರ್ಯ ತನ್ನ ಮನಸ್ಸು ಸರಿಯಾಗಿಲ್ಲವೆಂದು ಇತ್ತೀಚೆಗೆ ತನ್ನ 10 ತಿಂಗಳ ಮಗುವನ್ನು ಕೊಂಕಲ್ ಗ್ರಾಮದ ತವರು ಮನೆಯಲ್ಲಿ ಬಿಟ್ಟು ಬಂದಿದ್ದಳು.

ಪೊಲೀಸರಿಗೆ ದೂರು ಕೊಟ್ಟಳೆಂದು ಸ್ವಂತ ಅಜ್ಜಿಯನ್ನೇ ಕಾರು ಗುದ್ದಿಸಿ ಕೊಲೆಗೈದ ಮೊಮ್ಮಗ

ಕೊಂಗಂಡಿ ಗ್ರಾಮದ ಗಂಡನ ಮನೆಯಲ್ಲಿ ಮಾವ, ಗಂಡನೊಂದಿಗೆ ವಾಸವಾಗಿದ್ದ ಸೌಂದರ್ಯ ಎಂದಿನಂತೆ ಸಹಜವಾಗಿ ಇರಲಿಲ್ಲ, ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಆದರೆ, ಸದ್ಯಕ್ಕೆ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಬಗ್ಗೆ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಪೊಲೀಸರ ತನಿಖೆಯ ನಂತರ ಸಾವಿಗೆ ಕಾರಣ ಬಹಿರಂಗ ಆಗಬಹುದು.

ಬಳ್ಳಾರಿ (ಸೆ.10): ಸಂಸಾರದ ಬಂಡಿ ಸಾಗಲು ಗಂಡ ಹೆಂಡತಿ ಜೋಡೆತ್ತುಗಳಾಗಿ ಸಮಾನವಾಗಿ ಹೋಗಬೇಕು. ಇಲ್ಲವಾದಲ್ಲಿ ಜೀವನದ ಬಂಡಿ ಯಾವುದಾದರೂ ಅಪಘಾತಕ್ಕೆ ಸಿಲುಕಿ ಅರ್ಧದಲ್ಲಿಯೇ ಜೀವನ ಮೂರಾಬಟ್ಟೆ ಆಗುತ್ತದೆ ಎಂಬುದಕ್ಕೆ ಬಳ್ಳಾರಿಯಲ್ಲಿ ನಡೆದ ಈ ದುರ್ಘಟನೆಯೇ ಸಾಕ್ಷಿಯಾಗಿದೆ. ಗಂಡ ಕುಡಿಯುವ ಚಟಕ್ಕೆ ದಾಸನಾಗಿ ಮೈತುಂಬಾ ಸಾಲ ಮಾಡಿಕೊಂಡಿದ್ದಾನೆ. ಗಂಡ ಪದೇ ಪದೆ ಹಣಕ್ಕಾಗಿ ಪೀಡಿಸುತ್ತಿದ್ದಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆಗೆ ಶರಣಾಗಿದ್ದು, ಬಳಿಕ ಗಂಡನೂ ಸಾವಿನ ಹಾದಿ ಹಿಡಿದಿದ್ದಾನೆ. ಈ ದಂಪತಿಯ 16 ತಿಂಗಳ ಮಗು ಅನಾಥವಾಗಿದೆ.

ಸಾಲ ಬಾಧೆಗೆ ಬೇಸತ್ತು ಕಾರ್ಮಿಕ ದಂಪತಿ ಆತ್ಮಹತ್ಯೆ: ಅನಾಥವಾದ 16 ತಿಂಗಳ ಕೂಸು

ಸಾಲದ ಕಾಟಕ್ಕೆ ಪತಿ ಪತ್ನಿ ಇಬ್ಬರು ನೇಣಿಗೆ‌ ಶರಣಾಗಿದ್ದಾರೆ. ಹದಿನಾರು ತಿಂಗಳ ಮಗು‌ಬಿಟ್ಟು ದಂಪತಿಗಳ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಣಿ ನಾಡು ಬಳ್ಳಾರಿಯಲ್ಲಿ ಹೃದಯ ವಿದ್ರಾವವಕ ಘಟನೆ ನಡೆದಿದೆ. ಬಳ್ಳಾರಿಯ ನಗರದ ಬಂಡಿಹಟ್ಟಿ‌ ಯಲ್ಲಿ ಘಟನೆ ನಡೆದಿದ್ದು, ಈರಣ್ಣ(28) ಪತ್ನಿ ದುರ್ಗಮ್ಮ(25)  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದಾರೆ. ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎನ್ನುವ ಹಾಗೆ, ಗಂಡ ಹೆಂಡತಿ ಸಾವಿನ ನಂತರ 16 ತಿಂಗಳ ಕೂಸು ಇದೀಗ ಅನಾಥವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!