ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ್ ಮಾಫಿ ಸಾಕ್ಷಿಯಾಗಲು ಹೈಕೋರ್ಟ್ ಒಪ್ಪಿಗೆ ನೀಡಿದೆ. ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.
ಬೆಂಗಳೂರು (ಏ.5): ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ್ ಮಾಫಿ ಸಾಕ್ಷಿಯಾಗಲು ಹೈಕೋರ್ಟ್ ಒಪ್ಪಿಗೆ ನೀಡಿದೆ. ಮಾಫಿ ಸಾಕ್ಷಿಯಾಗಲು ಅನುಮತಿ ನಿರಾಕರಿಸಿದ್ದ ಸೆಷನ್ಸ್ ಕೋರ್ಟ್ ಕ್ರಮ ಪ್ರಶ್ನಿಸಿ ವಿಜಯಪುರದ ಬಿರಾದಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಈ ಆದೇಶ ಮಾಡಿದೆ.
ಪ್ರಕರಣದ ಅರೋಪಿಯಾಗಿರುವ ಬಿರಾದಾರ್, ಕೊಲೆ ಮಾಡಿದ ಆರೋಪಿಗೆ ಪಿಸ್ತೂಲ್ ನೀಡಿದ್ದ ಎಂದು ಆರೋಪಿಸಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಬಹುತೇಕ ಸಾಂದರ್ಭಿಕ ಸಾಕ್ಷಿಗಳಿರುವ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯಾಗಿಸಿದರೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಅನುಕೂಲವಾಗಲಿದೆ. ಹಾಗಾಗಿ ತಮಗೆ ಅಪ್ರೂವರ್ ಆಗಲು (ಮಾಫಿ ಸಾಕ್ಷಿ) ಅನುಮತಿ ನೀಡಬೇಕೆಂದು ಬಿರಾದಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು 2022ರ ಜು.14ರಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಇದೀಗ ನ್ಯಾಯಾಲಯ ಒಪ್ಪಿಗೆ ಸೂಚಿಸಿದ್ದು, ಸಿಆರ್ ಪಿಸಿ 306 ರಡಿ ಹೇಳಿಕೆ ದಾಖಲಿಸಲು ಸೂಚನೆ ನೀಡಿದೆ. ನ್ಯಾ. ಕೆ. ನಟರಾಜನ್ ರಿದ್ದ ಹೈಕೋರ್ಟ್ ಪೀಠದಿಂದ ಈ ಆದೇಶ ಹೊರ ಬಿದ್ದಿದೆ. ಕೊಲೆ ಮಾಡಿದ ಆರೋಪಿಗೆ ಎ17 ಶಿವಾನಂದ ಪಿಸ್ತೂಲ್ ನೀಡಿದ್ದ. ಮಾಜಿ ಸಚಿವ ವಿನಯ್ ಕುಲಕರ್ಣಿ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ. ಸದ್ಯ ಅವರಿಗೆ ಧಾರವಾಡ ಪ್ರವೇಶ ಅನುಮತಿಸದಂತೆ ಸುಪ್ರೀಂ ಕೋರ್ಟ್ ಆದೇಶವಿದೆ.
ಗೋ ಸಾಗಾಟಗಾರನ ಕೊಲೆ ಆರೋಪ, ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಮತ್ತು
ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಸುಪ್ರೀಂ ನಿರಾಕರಣೆ
ರಾಜ್ಯ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅನುಮತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಕಳೆದ ತಿಂಗಳಯ ವಜಾಗೊಳಿಸಿತ್ತು. ನ್ಯಾ.ಅಜಯ್ ರಸ್ತೊಗಿ ಹಾಗೂ ನ್ಯಾ. ಬೇಲಾ ಎಂ.ತ್ರಿವೇದಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.
ಕೋಳಿ ಸಾರು ಖಾಲಿಯಾಗಿದ್ದಕ್ಕೆ ಜಗಳ, ಮಗನನ್ನೇ ಕೊಲೆಗೈದ ತಂದೆ!
ಈ ಮಧ್ಯೆ, ವಾರಕ್ಕೆ ಎರಡು ಬಾರಿ ಬದಲಾಗಿ ಪ್ರತಿ ತಿಂಗಳ ಮೊದಲ ಶನಿವಾರ ಸಿಬಿಐ ಕಚೇರಿಗೆ ಹಾಜರಾಗಿ ಸಹಿ ಹಾಕಲು ಅವರಿಗೆ ಅವಕಾಶ ಮಾಡಿಕೊಟ್ಟಿತು. ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್. ವಿ.ರಾಜು ವಾದ ಮಂಡಿಸಿದರು. ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿದ್ದಾರ್ಥ್ ಭಟ್ನಾಗರ್ ವಾದ ಮಂಡಿಸಿದರು. ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಮಧ್ಯೆ, ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೋರಿ ಮಾ.29ರಂದು ಅವರು ಅರ್ಜಿ ಸಲ್ಲಿಸಿದ್ದರು.