ಬೆಳಗಾವಿಯ ಮಾರ್ಕಂಡೇಯ ನಗರದ ತಮ್ಮ ಸಂಬಂಧಿಕರೊಬ್ಬರ ಮನೆಯಲ್ಲಿ ವಾಸವಾಗಿದ್ದ ಮೃತ ವಿದ್ಯಾರ್ಥಿ| ಸ್ಥಳೀಯ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ| ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯಾಸ ಮಾಡುತ್ತಿದ್ದರೂ ಅದು ತಲೆಗೆ ಹತ್ತುತ್ತಿಲ್ಲ ಎಂಬ ಕಾರಣಕ್ಕೆ ಆತ ಆತ್ಮಹತ್ಯೆಗೆ ಶರಣು: ಪೊಲೀಸರು|
ಬೆಳಗಾವಿ(ಜೂ.18): ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಾರ್ಕಂಡೇಯ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಬೆಳಗುಂದಿ ಗ್ರಾಮದ ಯುವರಾಜ ಶಿವಾಜಿ ಬಾಗಿಲೇಕರ (16) ಆತ್ಮಹತ್ಯೆಗೀಡಾದ ವಿದ್ಯಾರ್ಥಿ. ಈತ ಬೆಳಗಾವಿಯ ಮಾರ್ಕಂಡೇಯ ನಗರದ ತಮ್ಮ ಸಂಬಂಧಿಕರೊಬ್ಬರ ಮನೆಯಲ್ಲಿ ವಾಸವಾಗಿದ್ದ. ಸ್ಥಳೀಯ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಪರೀಕ್ಷೆ ಕೆಲವೇ ದಿನಗಳಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯಾಸ ಮಾಡುತ್ತಿದ್ದರೂ ಅದು ತಲೆಗೆ ಹತ್ತುತ್ತಿಲ್ಲ ಎಂಬ ಕಾರಣಕ್ಕೆ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.