* ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದ ಘಟನೆ
* ದಾವಣಗೆರೆಯಲ್ಲಿ ಎಂಎಸ್ಸಿ ಪದವಿ ಮುಗಿಸಿದ್ದ ಮೃತ ಪೂಜಾ
* ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕೊಟ್ಟೂರು(ಸೆ.02): ಪಿಎಚ್ಡಿ ತರಗತಿ ಪ್ರವೇಶಕ್ಕೆ ಪೋಷಕರು ಹಣಕಾಸಿನ ಕಾರಣದಿಂದ ನಿರಾಕರಿಸಿದ್ದರಿಂದ ಎಂಎಸ್ಸಿ ಪದವೀಧರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಉಜ್ಜಯಿನಿ ಗ್ರಾಮದ ಪೂಜಾ (24) ದಾವಣಗೆರೆಯಲ್ಲಿ ಎಂಎಸ್ಸಿ ಪದವಿ ಮುಗಿಸಿದ್ದರು. ನಂತರ ಮಾಡಬೇಕೆಂಬ ಅಭಿಲಾಷೆ ಪೋಷಕರಲ್ಲಿ ವ್ಯಕ್ತಪಡಿಸಿ ಅನುಮತಿಗಾಗಿ ಒತ್ತಾಯಿಸುತ್ತಿದ್ದರು.
undefined
ಕೊಪ್ಪಳ: ಶಾಲಾ ಆವರಣದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು
ಪೋಷಕರು ಹಣಕಾಸಿನ ಸಮಸ್ಯೆಯಿಂದಾಗಿ ಮುಂದಿನ ವರ್ಷದಲ್ಲಿ ಪಿಎಚ್ಡಿ ಮಾಡುವಂತೆ ಸೂಚಿಸಿದ್ದರು ಎಂದು ಹೇಳಲಾಗಿದೆ. ಇದರಿಂದ ಬೇಸತ್ತ ಪೂಜಾ ಗ್ರಾಮದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಈ ಸಂಬಂಧ ಕೊಟ್ಟೂರು ಠಾಣೆಯಲ್ಲಿ ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ವಡಕಪ್ಪ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.