ಕರೆದಲ್ಲಿ ಬಾರದ ಯುವತಿಯ ಅಶ್ಲೀಲ ಚಿತ್ರ ಪೋಸ್ಟ್‌ ಮಾಡಿದ ಯುವಕ..!

Published : Feb 11, 2021, 02:16 PM IST
ಕರೆದಲ್ಲಿ ಬಾರದ ಯುವತಿಯ ಅಶ್ಲೀಲ ಚಿತ್ರ ಪೋಸ್ಟ್‌ ಮಾಡಿದ ಯುವಕ..!

ಸಾರಾಂಶ

ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣ ಹಾಗೂ ಫ್ರೆಂಡ್ಸ್‌ ಗ್ರೂಪ್‌ಗೆ ಹರಿಬಿಟ್ಟ ಯುವಕ| ಹುಬ್ಬಳ್ಳಿ ನಗರದಲ್ಲಿ ನಡೆದ ಘಟನೆ| ಆತನೊಂದಿಗೆ ವಿಡಿಯೋ ಕಾಲ್‌ನಲ್ಲಿ ಖಾಸಗಿ ಚಿತ್ರಗಳನ್ನು ಹಂಚಿಕೊಂಡಿದ್ದ  ಯುವತಿ| 

ಹುಬ್ಬಳ್ಳಿ(ಫೆ.11): ಯುವತಿಯ ಜತೆ ಸಲುಗೆಯಿಂದ ಇದ್ದುಕೊಂಡೇ ಆಕೆಯ ಅಶ್ಲೀಲ ಚಿತ್ರ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ಹು-ಧಾ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಕಲಬುರ್ಗಿ ಜಿಲ್ಲೆಯ ಸಚಿನ್‌ ಕಾರಣಿಕ (26) ಬಂಧಿತ ಆರೋಪಿ. ಸಚಿನ್‌ ಈ ಮೊದಲು ಹುಬ್ಬಳ್ಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಈ ವೇಳೆ ಅದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವತಿ ಪರಿಚಯವಾಗಿದ್ದಳು. ಅಲ್ಲದೇ, ಆಕೆಯನ್ನು ಪ್ರೀತಿಸುತ್ತಿದ್ದನು. ಇದೇ ಸಲುಗೆಯಿಂದ ಮುಂದುವರಿದ ಯುವತಿ ಆತನೊಂದಿಗೆ ವಿಡಿಯೋ ಕಾಲ್‌ನಲ್ಲಿ ಖಾಸಗಿ ಚಿತ್ರಗಳನ್ನು ಹಂಚಿಕೊಂಡಿದ್ದಳು.

ಅಶ್ಲೀಲ ವೆಬ್‌ಸೈಟ್‌ಗಳಿಗೆ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್‌: ಇಬ್ಬರ ಬಂಧನ

ಯುವತಿ ತಾನು ಕರೆದಲ್ಲಿ ಬರುತ್ತಿಲ್ಲ ಎಂಬ ಕಾರಣಕ್ಕೆ ಆಕೆಯ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣ ಹಾಗೂ ಫ್ರೆಂಡ್ಸ್‌ ಗ್ರೂಪ್‌ಗೆ ಹರಿಬಿಟ್ಟಿದ್ದಾನೆ. ಈ ಬಗ್ಗೆ ಯುವತಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಇದನ್ನು ಗಂಭೀರವಾಗಿ ಪರಿಗಣಿಸಿದ ಸೈಬರ್‌ ಕ್ರೈಂ ಠಾಣೆ ಪಿಐ ಎಸ್‌.ಬಿ. ಮಾಳಗೊಂಡ ನೇತೃತ್ವದ ತಂಡ ಆತನನ್ನು ಬೆಂಗಳೂರಿನಲ್ಲಿ ಬಂಧಿಸಿ ಕರೆತಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!