ವಿಜಯಪುರ: ನಂಬಿಸಿ ವಂಚನೆ, ಗೆಳತಿಯ ನಗ್ನ ಚಿತ್ರ ಹರಿಬಿಟ್ಟ ಯುವಕ

Kannadaprabha News   | Asianet News
Published : Apr 09, 2021, 03:32 PM IST
ವಿಜಯಪುರ: ನಂಬಿಸಿ ವಂಚನೆ, ಗೆಳತಿಯ ನಗ್ನ ಚಿತ್ರ ಹರಿಬಿಟ್ಟ ಯುವಕ

ಸಾರಾಂಶ

ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ| ಯುವತಿಯನ್ನು ನಂಬಿಸಿ, ಪ್ರೀತಿಸುವಂತೆ ನಟಿಸಿ ವಂಚಿಸಿದ ಯುವಕ| ಸಾಮಾಜಿಕ ಜಾಲತಾಣದಲ್ಲಿ ಯುವತಿಯ ನಗ್ನ ಫೋಟೋ ಹರಿಬಿಟ್ಟಿದ್ದ ಯುವಕ| ಈ ಕುರಿತು ಜಿಲ್ಲಾ ಸೈಬರ್‌ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು|   

ವಿಜಯಪುರ(ಏ.09): ನಗರದ ಯುವತಿಯೊಬ್ಬಳನ್ನು ಪ್ರೀತಿಸಿ ನಂತರ ಆಕೆಯ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಅಂತಾರಾಜ್ಯಕ್ಕೆ (ಉತ್ತರಪ್ರದೇಶದಲ್ಲಿ) ತೆರಳಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉತ್ತರ ಪ್ರದೇಶದ ರಾಜೇಂದ್ರಸಿಂಗ್‌ ಜೀವನ್‌ ಸಿಂಗ್‌ ಬಿಷತ್‌ (21) ಬಂಧಿತ ಆರೋಪಿ. ಈಗಾಗಲೇ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆರೋಪಿಯು ಯುವತಿಯನ್ನು ನಂಬಿಸಿ, ಪ್ರೀತಿಸುವಂತೆ ನಟಿಸಿ ಯುವತಿಯಿಂದ ನಗ್ನ ಫೋಟೋಗಳನ್ನು ಪಡೆದುಕೊಂಡು ಹಾಗೂ ಜಿ-ಮೇಲ್‌ ಅಕೌಂಟ್‌ ಪಡೆದು ಜಿಮೇಲ್‌ನಲ್ಲಿರುವ ಸ್ಥಳೀಯರ ಫೋನ್‌ ನಂಬರಗಳಿಗೆ ವಿವಿಧ ಗ್ರೂಪ್‌ಗಳಿಗೆ, ಸಾಮಾಜಿಕ ಜಾಲತಾಣದಲ್ಲಿ ಯುವತಿಯ ನಗ್ನ ಫೋಟೋಗಳನ್ನು ಹರಿಬಿಟ್ಟಿದ್ದ. 

ಹುಬ್ಬಳ್ಳಿ: ಮನೆ ಪರಿಹಾರಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಈ ಕುರಿತು ಜಿಲ್ಲಾ ಸೈಬರ್‌ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಬಂಧನಕ್ಕೆ ಜಾಲ ಬೀಸಿದ್ದರು. ಎಎಸ್‌ಪಿ ಮಾರ್ಗದರ್ಶನದಲ್ಲಿ ರಚಿಸಿದ ಸೈಬರ್‌ ಕ್ರೈಂ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ