
ಬೆಂಗಳೂರು(ಫೆ.03): ರೈಲಿಗೆ(Train) ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ನಗರದ ಯಶವಂತಪುರ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಇರುವ ರೈಲ್ವೇ ಟ್ರ್ಯಾಕ್‌ನಲ್ಲಿ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ. ಮೃತನನ್ನ ಯಾದಗಿರಿ(Yadgir) ಮೂಲದ ಹನುಮಂತು(23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಶರಣಾದ ಹನುಮಂತು ಯಾದಗಿರಿ ಮೂಲದವನು ಎಂದು ತಿಳಿದು ಬಂದಿದೆ. ಅನಾರೋಗ್ಯದ(Illness) ಹಿನ್ನೆಲೆಯಲ್ಲಿ ರೈಲಿಗೆ ತಲೆಕೊಟ್ಟು ಹನುಮಂತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಿಡ್ನಿ ಫೆಲ್ಯೂರ್ ಆಗಿದ್ದರಿಂದ ಹನುಮಂತು ತೀವ್ರವಾಗಿ ಮನನೊಂದಿದ್ದನು. ಯುವಕನ ತಂದೆ ತಾಯಿ ಬಿಬಿಎಂಪಿಯಲ್ಲಿ(BBMP) ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಹನುಮಂತನಿಗೆ ಚಿಕಿತ್ಸೆ ಕೊಡಿಸಿದ್ರು ಪ್ರಯೋಜನವಾಗಿರಲಿಲ್ಲ. ಹೀಗಾಗಿ ಹನುಮಂತು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು(Railway Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Woman Suicide : ವಸತಿ ಗೃಹದಲ್ಲೇ ಕಾನ್ಸ್ಟೇಬಲ್ ಪತ್ನಿ ಸುಸೈಡ್, ಕಾರಣ ನಿಗೂಢ!
ಮಗುವಿನೊಂದಿಗೆ ಸೇರಿ ತಾಯಿ ಆತ್ಮಹತ್ಯೆ
ಸಿರವಾರ(Sirwar): ಬೆಂಕಿ ಹಚ್ಚಿಕೊಂಡು ಮಗುವಿನೊಂದಿಗೆ(Child) ತಾಯಿ(Mother) ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸೋಮವಾರ ಜರುಗಿದೆ.
ಪಟ್ಟಣದ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಶಿರಿಷಾ(35) ಎಂಬುವವರು ಯಾವುದೋ ಕಾರಣಕ್ಕೆ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ಈ ವೇಳೆ 6 ವರ್ಷದ ಪುತ್ರಿ ಭುವನಳಿಗು ಬೆಂಕಿ ತಗುಲಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವ ಉದ್ಯಮಿ ಆತ್ಮಹತ್ಯೆ
ಉಡುಪಿ(Udupi): ಇಲ್ಲಿನ ಅಂಬಲಪಾಡಿ ಗ್ರಾಮದ ಮಜ್ಜಿಗೆಪಾದೆಯ ನಿವಾಸಿ, ಯುವ ಉದ್ಯಮಿ ಕಾರ್ತಿಕ್ ಪೈ (31) ಬುಧವಾರ ಮುಂಜಾನೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ತನ್ನ ಹೆಂಡತಿಯೊಂದಿಗೆ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದ ಕಾರ್ತಿಕ್ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು. ಬುಧವಾರ ಬೆಳಗ್ಗೆ 8:15 ಗಂಟೆಯ ಹೊತ್ತಿಗೆ ಸ್ನಾನಗೃಹದ ಕಿಟಕಿಯ ಗ್ರಿಲ್‌ಗೆ ಬಾತ್‌ಟವಲ್ ಕಟ್ಟಿಕುತ್ತಿಗೆಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ(Case) ದಾಖಲಾಗಿದೆ.
ಮನೆಯಲ್ಲಿ ಬಾಲಕಿ ನೇಣಿಗೆ ಶರಣು
ಬೆಂಗಳೂರು(Bengaluru): ಹದಿನೈದು ವರ್ಷದ ಬಾಲಕಿಯೊಬ್ಬಳು ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ತಾಯಿ ಜತೆ ಕಾಮಾಕ್ಷಿಪಾಳ್ಯದಲ್ಲಿ ನೆಲೆಸಿದ್ದಳು. ಬೆಳಗ್ಗೆ 9ರ ಸುಮಾರಿಗೆ ಆನ್‌ಲೈನ್ ಕ್ಲಾಸ್ ಎಂದು ತಾಯಿಗೆ ಹೇಳಿ ರೂಮ್‌ಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾಳೆ. ಕೆಲವು ಹೊತ್ತಿನ ಬಳಿಕ ತಾಯಿ ತಿಂಡಿಗೆ ಕರೆದರೂ ಬಾಲಕಿ ಹೊರಗೆ ಬಂದಿಲ್ಲ. ಹೀಗಾಗಿ ಅನುಮಾನಗೊಂಡು ಕಿಟಕಿಯಲ್ಲಿ ಇಣುಕಿ ನೋಡಿದಾಗ ಬಾಲಕಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ತಂದೆ ಇಲ್ಲ. ತಾಯಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣ ಪತ್ರವೂ ಸಿಕ್ಕಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದೆ ಎಂದು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ
ಹೊಸದುರ್ಗ(Hosadurga): ಕೆಲಸದಿಂದ ತೆಗೆದಿದ್ದರಿಂದ ಮನನೊಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕನೋರ್ವ ಪುರಸಭೆ ಕಚೇರಿಯಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ಮಂಜುನಾಥ್ (35) ಆತ್ಮಹತ್ಯಗೆ ಯತ್ನಿಸಿದ ಪೌರ ಕಾರ್ಮಿಕ(Civil Labor).
Shivamogga: ಮಾನಸಿಕ ಖಿನ್ನತೆಯಿಂದ FDA ಆತ್ಮಹತ್ಯೆಗೆ ಶರಣು
ಘಟನೆ ಹಿನ್ನಲೆ:
ನಾಲ್ಕು ವರ್ಷಗಳ ಹಿಂದೆ ಈತನನ್ನು ಗುತ್ತಿಗೆ ಆಧಾರದ ಮೇಲೆ ಪೌರ ಕಾರ್ಮಿಕನನ್ನಾಗಿ ನೇಮಿಸಿಕೊಳ್ಳಲಾಗಿತ್ತು. ಕಳೆದ 6 ತಿಂಗಳಿಂದ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಈತನನ್ನು ಕೆಲಸದಿಂದ ತೆಗೆಯಲಾಗಿತ್ತು. ಈ ಹಿಂದೆಯೂ ಸರಿಯಾಗಿ ಕೆಲಸ ನಿರ್ವಹಿಸಿದ ಹಿನ್ನೆಲೆಯಲ್ಲಿ ಹಲವಾರು ಬಾರಿ ನೋಟಿಸ್ ನೀಡಿದಾಗ 6 ತಿಂಗಳ ಹಿಂದೆ ಇಲಿ ಪಾಷಣ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದ ಎನ್ನಲಾಗಿದೆ.ಮದ್ಯ ವ್ಯಸನಿಯಾಗಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಲ್ಲದೆ ಅನಾರೋಗ್ಯದಿಂದಲೂ ನರಳುತ್ತಿದ್ದ ಎಂದು ಹೇಳಲಾಗುತ್ತಿದೆ.
ಬೆಳಿಗ್ಗೆ ಮದ್ಯ(Alcohol) ಸೇವಿಸಿ ಕಚೇರಿಗೆ ಬಂದ ಈತ ಕೈಯಲ್ಲಿ ಪೆಟ್ರೋಲ್ ತುಂಬಿದ ಬಾಟಲಿ ಹಿಡಿದು ನನ್ನನ್ನು ಕೆಲಸಕ್ಕೆ ಸೇರಿಸಿಕೊಳ್ಳಿ ಇಲ್ಲವಾದರೆ ಇಲ್ಲಿಯೇ ಬೆಂಕಿ ಹಚ್ಚಿಕೊಂಡು ಸಾಯುತ್ತೇನೆ ಎಂದು ಹೇಳುತ್ತಲೆ ಏಕಾಏಕಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಚೇರಿಯಲ್ಲಿದ್ದ ಪುರಸಭೆ ಅಧ್ಯಕ್ಷ ಶ್ರೀನಿವಾಸ್ ಹಾಗೂ ಅಧಿಕಾರಿಗಳು ತಕ್ಷಣವೇ ಬೆಂಕಿಯನ್ನು ಆರಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ