Suicide Cases: ತಡರಾತ್ರಿ ಮೇಲ್ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

By Kannadaprabha News  |  First Published Dec 30, 2021, 6:04 AM IST

*   ಎಲೆಕ್ಟ್ರಾನಿಕ್‌ ಸಿಟಿ ಮೇಲ್ಸೇತುವೆಯಲ್ಲಿ ನಡೆದ ಘಟನೆ
*   ಸೇಲ್ಸ್‌ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಮಾಡುತ್ತಿದ್ದ ಮೃತ ಯುವಕ
*   ಶಿಂಷಾ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ


ಬೆಂಗಳೂರು(ಡಿ.30): ಎಲೆಕ್ಟ್ರಾನಿಕ್‌ ಸಿಟಿ ಮೇಲ್ಸೇತುವೆಯಲ್ಲಿ(Flyover) ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಕೆಳಗೆ ಜಿಗಿದು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಜೆ.ಪಿ.ನಗರದ ನಿವಾಸಿ ವೆಂಕಟೇಶ್‌(28) ಆತ್ಮಹತ್ಯೆಗೆ ಶರಣಾದ ಯುವಕ. ಈತ ಬಿಟಿಎಂ ಲೇಔಟ್‌ನ ಶೋ ರೂಮ್‌ವೊಂದರಲ್ಲಿ ಸೇಲ್ಸ್‌ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಮಾಡುತ್ತಿದ್ದ. ಮಂಗಳವಾರ ರಾತ್ರಿ 11.45ಕ್ಕೆ ದ್ವಿಚಕ್ರ ವಾಹನದಲ್ಲಿ ಎಲೆಕ್ಟ್ರಾನಿಕ್‌ ಸಿಟಿ ಮೇಲ್ಸೇತುವೆಗೆ(Electronic City Flyover) ಬಂದಿದ್ದು, ಬಳಿಕ ಲೇ ಬೈ ಬಳಿ ದ್ವಿಚಕ್ರವಾಹನ ನಿಲುಗಡೆ ಮಾಡಿದ್ದಾನೆ. ಬಳಿಕ ಮೇಲ್ಸೇತುವೆ ತಡೆಗೋಡೆ ಮೇಲೆ ಕುಳಿತು ಸುಮಾರು 20 ನಿಮಿಷಗಳ ಕಾಲ ಮೊಬೈಲ್‌ನಲ್ಲಿ(Mobile) ಯಾರೊಂದಿಗೋ ಮಾತನಾಡಿದ್ದಾನೆ. ಬಳಿಕ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾದ ಪರಿಣಾಮ ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ(Death) ಎಂದು ಪೊಲೀಸರು(Police) ತಿಳಿಸಿದ್ದಾರೆ.

Latest Videos

undefined

Suicide Due To Harassment: ಪುಂಡರ ಕಿರುಕುಳದಿಂದ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು!

ವೆಂಕಟೇಶ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತ ಮೇಲ್ಸೇತುವೆಯಲ್ಲಿ ಸುಮಾರು 20 ನಿಮಿಷಗಳ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ(CC Camera) ಸೆರೆಯಾಗಿದೆ. ಹೆಚ್ಚಿನ ತನಿಖೆಯಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ(Case) ದಾಖಲಾಗಿದೆ.

ಶಿಂಷಾ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಮದ್ದೂರು(Madduru): ಮಾನಸಿಕ ಖಿನ್ನತೆಗೆ ಒಳಗಾದ ವೃದ್ಧೆ ಶಿಂಷಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಮಂಡ್ಯ(Mandya) ತಾಲೂಕಿನ ಸಿದ್ದೇಗೌಡದೊಡ್ಡಿ ಗ್ರಾಮದ ಕೆಂಪಹೆಗಡೆ ಪತ್ನಿ ಕೆಂಪಮ್ಮ (70) ಆತ್ಮಹತ್ಯೆಗೆ ಶರಣಾದ ವೃದ್ಧೆ. ಡಿ.27ರಂದು ಮನೆ ತೊರೆದಿದ್ದ ಕೆಂಪಮ್ಮ, ಶಿಂಷಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡಿ.28ರಂದು ಬೆಳಗ್ಗೆ ನದಿಯಲ್ಲಿ ಶವ ತೇಲುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಕೆಂಪಮ್ಮಳ ಶವವನ್ನು ಹೊರತೆಗೆದು(Deadbody) ಆಸ್ಪತ್ರೆಗೆ ಸಾಗಿಸಿದ ನಂತರ ಸಂಬಂಧಿಸಿದವರಿಗೆ ಮಾಹಿತಿ ನೀಡಿದ್ದಾರೆ. 

ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾವಂಜೆ: ಯುವಕ ಆತ್ಮಹತ್ಯೆ

ಬ್ರಹ್ಮಾವರ: ಇಲ್ಲಿನ ಹಾವಂಜೆ ಗ್ರಾಮದ ಕಂಬಳಿಬೆಟ್ಟು ಎಂಬಲ್ಲಿನ ನಿವಾಸಿ ಶರತ್‌ (29) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಮದ್ಯಪಾನ ಮಾಡುತಿದ್ದ ಅವರು ಮಂಗಳವಾರ ಮಧ್ಯಾಹ್ನ 3.30ರಿಂದ ಸಂಜೆ 6.00 ಗಂಟೆಯ ಮಧ್ಯೆ ಚಿತ್ತಾರಿ ಎಂಬಲ್ಲಿನ ಸರ್ಕಾರಿ ಹಾಡಿಯಲ್ಲಿ ಮಾವಿನ ಮರಕ್ಕೆ ನೈಲಾನ್‌ ಹಗ್ಗ ಕಟ್ಟಿನೇಣು ಬಿಗಿದು ಮೃತಪಟ್ಟಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru Crime News : ಠಾಣೆಯಿಂದ ಎಸ್ಕೇಪ್‌ ಆಗಿ ಆರೋಪಿ ಆತ್ಮಹತ್ಯೆ

ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

ಬ್ಯಾಡಗಿ(Byadagi): ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬಳು(Woman) ಚಿಕಿತ್ಸೆ ಫಲಕಾರಿಯಾಗದೆ ಮೃತ​ಪ​ಟ್ಟಿ​ರುವ ಘಟನೆ ಬ್ಯಾಡಗಿ ತಾಲೂಕಿನ ಬೀರನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಬೀರನಕೊಪ್ಪ ಗ್ರಾಮದ ನಿವಾಸಿ ಶಾಂತವ್ವ ಹಿರೇಮಠ (66) ಮೃತ ಮಹಿಳೆ. ಶಾಂತಮ್ಮ ಕಳೆದ ಕೆಲ ದಿನಗಳ ಹಿಂದೆ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿರುವ ಮಗಳ ಮನೆಗೆ ಜಾತ್ರೆಗೆಂದು ಹೋಗಿದ್ದು, ರಾತ್ರಿ ಮಲಗಿರುವ ಸಮಯದಲ್ಲಿ ಬೆಲ್ಲದ ಪೆಂಟಿ ಅಕಸ್ಮಾತಾಗಿ ತಲೆಯ ಮೇಲೆ ಬಿದ್ದು, ತಲೆಗೆ ಬಲವಾದ ಗಾಯವಾಗಿದೆ. ಗಾಯಗೊಂಡ ಅವರನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಹಲವು ದಿನಗಳ ಚಿಕಿತ್ಸೆ ನಂತರ ಗುಣಮುಖಳಾದರೂ ಶಾಂತಮ್ಮ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದ್ದು, ಕಳೆದ ಡಿ. 25ರಂದು ಮುಂಜಾನೆ ಮನೆಯಲ್ಲಿಯೇ ವಿಷ ಸೇವಿಸಿದ್ದಾಳೆ.

ಕೂಡಲೇ ಶಾಂತಮ್ಮಳನ್ನು ಹಾವೇರಿ(Haveri) ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಡಿ. 28ರಂದು ಬೆಳಗಿನಜಾವ 3 ಗಂಟೆಗೆ ಶಾಂತಮ್ಮ ಮೃತ​ಪ​ಟ್ಟಿ​ದ್ದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ. ಘಟನೆ ಕುರಿತಂತೆ ಕಾಗಿನೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

click me!