ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ| ವಿಜಯಪುರ ನಗರದ ಖಾಸಗಿ ಲಾಡ್ಜ್‌ನಲ್ಲಿ ನಡೆದ ಘಟನೆ| ಹಣಕಾಸಿನ ವ್ಯವಹಾರದ ಸಮಸ್ಯೆಯಿಂದ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ|
ವಿಜಯಪುರ(ಸೆ.21): ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಿನ್ನೆ(ಭಾನುವಾರ) ನಡೆದಿದೆ. ಮೃತನನ್ನ ರುದ್ರೇಶ ಶಿವಪ್ಪ ಕಲಗುಡಿ (33) ಎಂದು ಗುರುತಿಸಲಾಗಿದೆ.
ನಗರದ ಖಾಸಗಿ ಲಾಡ್ಜ್‌ವೊಂದರಲ್ಲಿ ರುದ್ರೇಶ ಶಿವಪ್ಪ ಕಲಗುಡಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ವಿಜಯಪುರ: ನೇಣು ಬಿಗಿದುಕೊಂಡು ಮಹಿಳಾ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ಯುವಕನು ಜಿಲ್ಲೆಯ ನಿಡಗುಂದಿ ನಿವಾಸಿ ಎಂದು ಎಂದು ತಿಳಿದು ಬಂದಿದೆ. ಹಣಕಾಸಿನ ವ್ಯವಹಾರದ ಸಮಸ್ಯೆಯಿಂದ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಈ ಕುರಿತು ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.