ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣದ ದಾಖಲಿಸಿಕೊಂಡು ವೀವರ್ಸ್ ಕಾಲೋನಿ ನಿವಾಸಿಗಳಾದ ನವೀನ್ ಕುಮಾರ್, ದಿನಕರ್, ಸತ್ಯ ವೇಲು, ಕಾರ್ತಿಕ್, ಸತೀಶ್ ಹಾಗೂ ಸಂತೋಷ್ ಕುಮಾರ್ ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಬೆಂಗಳೂರು(ನ.05): ದೀಪಾವಳಿ ಹಬ್ಬದ ಪ್ರಯುಕ್ತ ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೊಬ್ಬ ಮೃತಪಟ್ಟಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೊಟ್ಟಿಗೆರೆ ಸಮೀಪದ ವೀವರ್ಸ್ ಕಾಲೋನಿ ನಿವಾಸಿ ಶಬರಿ(32) ಮೃತ ದುರ್ದೈವಿ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣದ ದಾಖಲಿಸಿಕೊಂಡು ವೀವರ್ಸ್ ಕಾಲೋನಿ ನಿವಾಸಿಗಳಾದ ನವೀನ್ ಕುಮಾರ್, ದಿನಕರ್, ಸತ್ಯ ವೇಲು, ಕಾರ್ತಿಕ್, ಸತೀಶ್ ಹಾಗೂ ಸಂತೋಷ್ ಕುಮಾರ್ ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗ್ಳೂರಿಗೆ ಬಂದು ಕಾರು ಕಳ್ಳತನ: ಹೈಟೆಕ್ ಕಳ್ಳ ಅರೆಸ್ಟ್
ಏನಿದು ಘಟನೆ?:
ಮೃತ ಶಬರಿ ಮತ್ತು ಬಂಧಿತ ಆರೋಪಿಗಳು ಸ್ನೇಹಿತರಾಗಿದ್ದು, ವೀವರ್ಸ್ ಕಾಲೋ ನಿಯ ನಿವಾಸಿಗಳಾಗಿದ್ದಾರೆ. ಗಾರೆ ಕೆಲಸ ಸೇರಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದರು. ಅ.31ರ ರಾತ್ರಿ ಸುಮಾರು 9 ಗಂಟೆಗೆ ಪಾನಮತ್ತ ಶಬರಿ ವೀವರ್ಸ್ ಕಾಲೋನಿಯ 3ನೇ ಅಡ್ಡರಸ್ತೆಯ ಅಂಥೋನಿ ಎಂಬು ವವರ ಅಂಗಡಿ ಬಳಿ ಹೋಗಿದ್ದಾನೆ. ಈ ವೇಳೆ ಆರೋ ಪಿಗಳು ದೀಪಾವಳಿ ಪ್ರಯುಕ್ತ ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಸ್ನೇಹಿತರು ಪಟಾಕಿ ಸಿಡಿಸುತ್ತಿರುವ ಸ್ಥಳಕ್ಕೆ ಶಬರಿ ತೆರಳಿದ್ದಾನೆ.
ಆಟೋ ಕೊಡಿಸುವ ಆಮಿಷ:
ಈ ವೇಳೆ ಆರೋಪಿ ಗಳು ನಾವು ಡಬ್ಬದ ಕೆಳಗೆ ಪಟಾಕಿ ಹಚ್ಚುತ್ತೇವೆ. ನೀನು ಈ ಡಬ್ಬದ ಮೇಲೆ ಕುಳಿತರೇ ನಿನಗೆ ಆಟೋ ಕೊಡಿ ಸುತ್ತೇವೆ ಎಂದು ಪಾನಮತ್ತ ಶಬರಿಗೆ ಆಮಿಷವೊಡ್ಡಿದ್ದಾರೆ. ಆಮಲಲ್ಲಿದ್ದ ಶಬರಿ ಇದಕ್ಕೆ ಒಪ್ಪಿದ್ದಾನೆ. ಬಳಿಕ ಆರೋಪಿಗಳು ಭಾರೀ ಸೋಟದ ಪಟಾಕಿ ಗಳನ್ನು ರಸ್ತೆಗೆ ಇರಿಸಿ, ಬಳಿಕ ಅದರಮೇಲೆ ತಲೆಕೆಳಗಾಗಿ ಡಬ್ಬವನ್ನು ಮುಚ್ಚಿ ಅದರ ಮೇಲೆ ಶಬರಿಯನ್ನು ಕೂರಿಸಿದ್ದಾರೆ.
ಖಾಸಗಿ ಭಾಗಗಳಿಗೆ ಗಂಭೀರ ಗಾಯ:
ಬಳಿಕ ಆರೋಪಿಗಳು ಬತ್ತಿಗೆ ಬೆಂಕಿ ಹಚ್ಚಿ ದೂರಕ್ಕೆ ಓಡಿದ್ದಾರೆ. ಧೈರ್ಯದಿಂದ ಶಬರಿ ಡಬ್ಬದ ಮೇಲೆ ಕುಳಿತಿರುವಾಗ ಡಬ್ಬದ ಒಳಗೆ ಪಟಾಕಿಗಳು ಸಿಡಿದಿವೆ. ಪಟಾಕಿಗಳ ಸ್ಫೋಟಕ್ಕೆ ಶಬರಿಯ ತೊಡೆ, ಖಾಸಗಿ ಅಂಗಾಂಗಗಳು ಹಾಗೂ ವೃಷಣಗಳಿಗೆ ಗಂಭೀರ ಗಾಯವಾಗಿದೆ. ತಕ್ಷಣ ಗಾಯಾಳು ಶಬರಿಯನ್ನು ಸ್ಥಳೀಯರು ಆ್ಯಂಬುಲೆನ್ಸ್‌ನಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಆದರೆ, ಪಟಾಕಿ ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಶಬರಿ ಚಿಕಿತ್ಸೆ ಫಲಿಸದೆ ನ.2ರ ಸಂಜೆ 5.30ಕ್ಕೆ ಮೃತಪಟ್ಟಿದ್ದಾನೆ.
ಪ್ರತಿ ದಿನ ಕುಡಿದು ಬರ್ತಿದ್ದ ಗಂಡನ ಮರ್ಮಾಂಗವನ್ನೇ ಕತ್ತರಿಸಿ ಹಾಕಿದ ಪತ್ನಿ!
ಆರೋಪಿಗಳ ವಿಚಾರಣೆ
ಈ ಸಂಬಂಧ ಮೃತ ಶಬರಿ ತಾಯಿ ವಿಜಯಾ ಅವರು ನೀಡಿದ ದೂರಿನ ಮೇರೆಗೆ ಕೋಣನಕುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ನವೀನ್ ಕುಮಾರ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀತ್ ಹಾಗೂ ಸಂತೋಷ್ ಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಿದ್ದು ಏನು?
* ಸ್ನೇಹಿತರು ಪಟಾಕಿ ಸಿಡಿಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಗಾರೆ ಕೆಲಸಗಾರ ಶಬರಿ
* ಡಬ್ಬದ ಮೇಲೆ ಕೂತರೆ ಆಟೋ ಕೊಡಿಸುವುದಾಗಿ ಆಮಿಷ
* ಮೊದಲೇ ಪಾನಮತ್ತನಾಗಿದ್ದ ಶಬರಿ, ಧೈರ್ಯದಿಂದ ಕೂತ
* ಪಟಾಕಿ ಸಿಡಿದು ಶಬರಿಯ ಖಾಸಗಿ ಅಂಗಕ್ಕೆ ಗಂಭೀರ ಗಾಯ
* ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಶಬರಿ ಸಾವು
* ಗೆಳೆಯರ ವಿರುದ್ಧ ಶಬರಿ ತಾಯಿ ದೂರು: 6 ಮಂದಿ ಬಂಧನ