
ಕಾರವಾರ (ಜು.10): ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯ ಟೋಲ್‌ನಾಕಾದಲ್ಲಿ ನಡೆದಿದೆ. ಜಿತೆಂದ್ರ ಜಗದೀಶ ಪಡ್ತಿ (20), ಆತ್ಮಹತ್ಯೆ ಮಾಡಿಕೊಂಡ ಯುವಕ.
ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದ ಯುವಕ ಜಿತೇಂದ್ರ, ಮನೆಯಲ್ಲಿದ್ದವರು ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ, ಮನೆಯ ಎರಡೂ ಬದಿಯಲ್ಲಿ ಬಾಗಿಲು ಹಾಕಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆಗೆ ಯತ್ನಿಸಿದ್ದಾನೆ. ಮನೆಯಿಂದ ಬೆಂಕಿಯ ಹೊಗೆ ಬರುತ್ತಿರೋದು ಗಮನಿಸಿದ ಯುವಕನ ಪೋಷಕರು ಕೂಡಲೇ ಓಡಿ ಹೋಗಿ, ಬೆಂಕಿಯಿಂದ ಅರೆಬರೆ ಸುಟ್ಟ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜಿತೇಂದ್ರ ಸಾವನಪ್ಪಿದ್ದು, ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಗಾರದ ಮೋಸಕ್ಕೆ ಮೂವರ ಆತ್ಮ*ಹತ್ಯೆ: ಗೋಲ್ಡ್ ಚೀಟಿ (ಚಿಟ್ ಫಂಡ್ ಮಾದರಿಯಲ್ಲಿ) ಮಾಡುತ್ತಿದ್ದವರಿಗೆ ಚಿನ್ನದ ವ್ಯಾಪಾರಿಯೊಬ್ಬ ಮೋಸ ಮಾಡಿದನೆಂದು ಮನನೊಂದ ಒಂದೇ ಕುಟುಂಬದ ನಾಲ್ವರು ಡೆಟ್‌ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿ, ಮೂವರು ಮೃತಪಟ್ಟಿರುವ ಮನಕಲಕುವ ಘಟನೆ ಬೆಳಗಾವಿಯ ಖಾಸಭಾಗದ ಜೋಶಿ ಮಾಳದಲ್ಲಿ ನಡೆದಿದೆ. ಖಾಸಭಾಗದ ಜೋಶಿ ಮಾಳದ ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ ಕುರಡೇಕರ್ (44), ಪುತ್ರಿ ಸುವರ್ಣ ಕುರಡೇಕರ್(42) ಮೃತಪಟ್ಟವರು.
ಇನ್ನೋರ್ವ ಪುತ್ರಿ ಸುನಂದಾ ಕುರಡೇಕರ್ (20) ಅವರೂ ವಿಷ ಸೇವಿಸಿದ್ದು ಅವರ ಸ್ಥಿತಿ ಚಿಂತಾ ಜನಕವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಕೂಡಿಕೊಂಡು ಬೆಳಗ್ಗೆ 9 ಗಂಟೆ ಸುಮಾರಿಗೆ ವಿಷ ಸೇವಿಸಿದ್ದಾರೆ. ಮೂವರೂ ಮಕ್ಕಳ ಮದುವೆ ಆಗಿರಲಿಲ್ಲ. ಕಳೆದ ಹಲವಾರು ವರ್ಷಗಳಿಂದ ಜೋಶಿ ಮಾಳದಲ್ಲಿ ತಾಯಿ ಜೊತೆಗೆ ಎಲ್ಲರೂ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಏನಿದು ಘಟನೆ?: ಸಂತೋಷ ಕುರಡೇಕರ್ ಚಿನ್ನದ ಚೀಟಿ ಮಾಡುತ್ತಿದ್ದರು. ಆದರೆ, ಚಿನ್ನದ ವ್ಯಾಪಾರಿ ಇವರಿಗೆ ಮೋಸ ಮಾಡಿದ್ದರಿಂದ ಚೀಟಿ ಹಾಕಿದವರು ನಿತ್ಯ ಕಿರುಕುಳ ನೀಡಲು ಆರಂಭಿಸಿದ್ದರು. ಇದರಿಂದ ಇಡೀ ಕುಟುಂಬ ಈ ಘಟನೆಗೆ ಕಾರಣವಾಗಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಸಂತೋಷ ಅವರು ಮೊದಲು ವಿಷ ಕುಡಿಯೋಣ ಎಂದು ಎಲ್ಲರಿಗೂ ಮನವರಿಕೆ ಮಾಡಿದ್ದಾರೆ. ಅದರಂತೆಯೇ ಮೂವರು ವಿಷ ಸೇವಿಸಿದ್ದಾರೆ. ಆದರೆ, ಸುನಂದಾ ವಿಷ ಸೇವಿಸಲು ಹಿಂಜರಿದಿದ್ದಾರೆ. ನಂತರ ವಿಷ ಸೇವಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ವೇಳೆ ಸುನಂದಾ ಗೋಳಾಡುವುದನ್ನು ಕೇಳಿಸಿಕೊಂಡ ಅಕ್ಕಪಕ್ಕದವರು ಮನೆಗೆ ಬಂದಾಗ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದರು. ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ ಭೇಟಿ ನೀಡಿ, ಘಟನೆಯ ಕುರಿತು ಮಾಹಿತಿ ಪಡೆದರು. ಈ ಕುರಿತು ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ