
ತುಮಕೂರು (ಸೆ.10): ಗಣಪತಿ ಪೆಂಡಾಲಿನಲ್ಲಿ ಹಾಡು ಹಾಕುವ ವಿಚಾರಕ್ಕೆ ಗಲಾಟೆಯಾಗಿ ಬಿಹಾರ ಮೂಲದ ಯುವಕನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ನಗರದ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಚೋಟನ್ ಕುಮಾರ್(19) ಕೊಲೆಯಾದ ಯುವಕ, ಬಿಹಾರದ ರಾಂಬಾಬು, ಮೌಂಟು ಕುಮಾರ್, ಸಂಜೀವ್ ಕುಮಾರ್, ಕೊಲೆ ಮಾಡಿದ ಆರೋಪಿಗಳು.
ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆ ಮಾಡದೆ ಅದೇ ಹಣದಿಂದ ರಸ್ತೆ ರಿಪೇರಿ ಕಿನ್ನಾಳ ಗ್ರಾಮಸ್ಥರು!
ಸೆ.7ರಂದು ಗಣಪತಿ ಪ್ರತಿಷ್ಠಾಪನೆ ನಂತರ ಹಾಡು ಹಾಕಲಾಗಿತ್ತು. ಹಾಡು ಬದಲಾಯಿಸುವ ವಿಚಾರಕ್ಕೆ ಯುವಕ ಹಾಗೂ ಆರೋಪಿಗಳ ನಡುವೆ ಜಗಳ ನಡೆದಿತ್ತು. ಈವೇಳೆ ಚೋಟನ್ ಕುಮಾರ ಕುತ್ತಿಗೆ, ಬೆನ್ನುಗೆ ಚಾಕು ಇರಿದಿದ್ದ ಆರೋಪಿಗಳು ಇದರಿಂದ ಗಂಭೀರ ಗಾಯಗೊಂಡಿದ್ದ ಮೃತ ಯುವಕ. ಕೂಡಲೇ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಯುವಕ. ಹತ್ಯೆ ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ