* ಬೆಳಗಾವಿ ಜಿಲ್ಲೆ ಗೋಕಾಕ್ ನಗರದಲ್ಲಿ ನಡೆದ ಘಟನೆ
* ಯುವಕನನ್ನ ಹತ್ಯೆಗೈದು ಪರಾರಿಯಾಗಿದ ದುಷ್ಕರ್ಮಿಗಳು
* ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ
ಬೆಳಗಾವಿ(ಜು.18): ಮಾರಕಾಸ್ತ್ರದಿಂದ ಕೊಚ್ಚಿ ಯುವಕನನೊಬ್ಬನ್ನ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಗರದ ಹೊರವಲಯ ಮಹಾಂತೇಶ ನಗರದಲ್ಲಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ. ಮಂಜು ಶಂಕರ್ ಮುರಕಿಭಾವಿ(22) ಕೊಲೆಯಾದ ಯುವಕನಾಗಿದ್ದಾನೆ.
ನಿನ್ನೆ ತಡರಾತ್ರಿ ಯುವಕನನ್ನ ಹತ್ಯೆಗೈದು ಪರಾರಿಯಾಗಿದ್ದಾರೆ. ಕೊಲೆಯಾದ ಶಂಕರ್ ಮುರಕಿಭಾವಿ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.
ಹರಪನಹಳ್ಳಿ: ರಾಡ್‌ನಿಂದ ತಲೆಗೆ ಹೊಡೆದು ಆರ್‌ಟಿಐ ಕಾರ್ಯಕರ್ತನ ಹತ್ಯೆ
ಯುವಕನ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರ ತನಿಖೆಯಿಂದಷ್ಟೇ ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.