ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದಕ್ಕೆ ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತುಮಕೂರು ನಗರದ ದೇವರಾಯಪಟ್ಟಣ ನಿವಾಸಿ ಕಮಲೇಶ್ (36) ಮೃತ ದುರ್ದೈವಿ.
ತುಮಕೂರು (ನ.22): ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದಕ್ಕೆ ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತುಮಕೂರು ನಗರದ ದೇವರಾಯಪಟ್ಟಣ ನಿವಾಸಿ ಕಮಲೇಶ್ (36) ಮೃತ ದುರ್ದೈವಿ. ಮೃತ ಕಮಲೇಶ್’ಗೆ ಕಳೆದ ಮೂರು ತಿಂಗಳ ಹಿಂದಷ್ಟೇ ಬೆಂಗಳೂರು ಮೂಲದ ಯುವತಿ ಜೊತೆಗೆ ವಿವಾಹ ನಿಶ್ಚಯವಾಗಿತ್ತು.
ಕಳೆದ ಕೆಲ ದಿನಗಳ ಹಿಂದೆ ಸ್ನಾನ ಮಾಡುವಾಗ ಕಮಲೇಶ್ ಕೈಯಲ್ಲಿದ್ದ ಉಂಗುರ ಕಳೆದು ಹೋಗಿತ್ತು. ಈ ವಿಚಾರವನ್ನು ಮನೆಯವರಿಗೆ ಹೇಳಲು ಹೆದರಿದ ಕಮಲೇಶ್ ನವೆಂಬರ್ 17ರಂದು
ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದನು. ವಿಷ ಸೇವನೆ ಮಾಡಿದ್ದ ಕಮಲೇಶ್ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ. ಚಿಕಿತ್ಸೆ ಫಲಕಾರಿಯಾಗದೆ ಕಮಲೇಶ್ ಕೊನೆಯುಸಿರೆಳೆದಿದ್ದಾನೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಎಚ್‌ಡಿಕೆ ಹೇಳಿದಂತೆ ಕೀಳುಮಟ್ಟಕ್ಕೆ ಇಳಿದಿದ್ರೆ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್
ಉದ್ಯೋಗ ಸಿಗದೇ ಯುವಕ ಆತ್ಮಹತ್ಯೆ ಆಘಾತಕಾರಿ: ಅಡಕನಹಳ್ಳಿ ಗ್ರಾಮದ ಸಿದ್ದರಾಜು ಎಂಬ ಯುವಕ ಪಾರ್ಲೆ ಆಗ್ರೋ ಕಂಪನಿ ಸ್ಥಾಪನೆಗೆ ಭೂಮಿ ಕೊಟ್ಟು ಅದೇ ಕಂಪನಿಯಲ್ಲಿ ಕೆಲಸಕ್ಕಾಗಿ ಹೋರಾಟ ನಡೆಸಿ ಅಧಿಕಾರಿಗಳ ಕಚೇರಿಗಳಿಗೆ ಅಲೆದಲೆದು ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ನೋವಿನ ಮತ್ತು ಆಘಾತಕಾರಿ ಸಂಗತಿ ಎಂದು ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಎಸ್. ಸುಮಾ ಕಳವಳ ವ್ಯಕ್ತಪಡಿಸಿದ್ದಾರೆ.
ಅಡಕನಹಳ್ಳಿಯ ಸುತ್ತಮುತ್ತ ಕಂಪನಿ ಸ್ಥಾಪನೆಗೆಂದು ನೂರಾರು ರೈತರಿಂದ ಭೂಮಿಯನ್ನು ಪಡೆದುಕೊಳ್ಳಲಾಗಿದೆ. ಕಾನೂನಿನ ಪ್ರಕಾರ ಭೂಮಿ ಕೊಟ್ಟ ಕುಟುಂಬದ ಒಬ್ಬರಿಗೆ ಆ ಭೂಮಿಯಲ್ಲಿ ಸ್ಥಾಪನೆ ಆಗುವ ಕಂಪನಿಯಲ್ಲಿ ಉದ್ಯೋಗ ನೀಡಬೇಕು. ಇದರ ಪ್ರಕಾರ ಅಲ್ಲಿಯ ರೈತರು ಸತತ 4 ವರ್ಷಗಳಿಂದ ಹೋರಾಟ ನಡೆಸುತ್ತಲೇ ಇದ್ದಾರೆ. ಆದರೆ ಅವರಿಗೆ ಇನ್ನು ನ್ಯಾಯ ಸಿಕ್ಕಿಲ್ಲ. ಬದಲಿಗೆ ಹೋರಾಡುತ್ತಿರುವ ರೈತರಿಗೆ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡಲಾಗುತ್ತಿದೆ. ಇಷ್ಟಾದರೂ ಅವರ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ.
ಹೋಗು ಅಂದರೆ ಹೋಗೋಕೆ ತಾಳಿ ಕಟ್ಟಿದ ಹೆಂಡತಿ ನಾನಲ್ಲ: ಸಿ.ಎಂ.ಇಬ್ರಾಹಿಂ
ಒಬ್ಬ ಯುವಕ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಕಿರುಕುಳ ನೀಡಿದ ಕಂಪನಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಶಿಕ್ಷೆ ನೀಡಬೇಕು. ಸಿದ್ದರಾಜು ಕುಟುಂಬಕ್ಕೆ ಕೆಐಎಡಿಬಿಯು ಸರಿಯಾದ ಪರಿಹಾರ ನೀಡಬೇಕು. ಉದ್ಯೋಗಕ್ಕಾಗಿ ಅಲೆಯುತ್ತಿರುವ ಉಳಿದವರು ಕೂಡ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸರ್ಕಾರ ಎಚ್ಚೆತ್ತು ಅವರಿಗೆ ಕೆಲಸ ಕೊಡಿಸುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಎಂಥದ್ದೇ ಸಮಸ್ಯೆ ಎದುರಾದರೂ ಆತ್ಮಹತ್ಯೆ ಪರಿಹಾರ ಅಲ್ಲ. ನಿರಂತರವಾದ ಒಗ್ಗಟ್ಟಿನ ಹೋರಾಟದಲ್ಲಿ ನಂಬಿಕೆ ಇಡೋಣ. ಭೂಮಿ ಕಳೆದುಕೊಂಡು ಉದ್ಯೋಗಕ್ಕಾಗಿ ಹೋರಾಡುತ್ತಿರುವ ಉಳಿದ ರೈತರೊಂದಿಗೆ ನಾವಿದ್ದೇವೆ ಎಂದು ಅವರು ತಿಳಿಸಿದ್ದಾರೆ.