Suicide Cases: ಗೋಕರ್ಣದಲ್ಲಿ ಕ್ರಿಮಿನಾಶಕ ಸೇವಿಸಿ ಯುವತಿ ಆತ್ಮಹತ್ಯೆ

By Kannadaprabha News  |  First Published Jan 9, 2022, 11:02 AM IST

*  ಈ ಹಿಂದೆ ಸಹ ಆತ್ಮಹತ್ಯೆಗೆ ಯತ್ನಿಸಿ ಬದುಕಿದ್ದ ಯುವತಿ
*  7 ತಿಂಗಳ ಹಿಂದೆ ಸಮುದ್ರದಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದ ಪ್ರೀತಿಸುತ್ತಿದ್ದ ಹುಡುಗ 
*  ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಸಾವು
 


ಗೋಕರ್ಣ(ಜ.09): ವಿಷ(Poison) ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ರುದ್ರಪಾದದ ಯುವತಿ ಕವಿತಾ ದೇವು ಗೌಡ (20) ಮೃತಪಟ್ಟ(Death) ಯುವತಿ. 

ಶನಿವಾರ ಮಧ್ಯಾಹ್ನ ಕ್ರಿಮಿನಾಶ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದು, ಆನಂತರ ಹೆಚ್ಚಿನ ಚಿಕಿತ್ಸೆಗೆ ಕುಮಟಾಕ್ಕೆ ಕಳುಹಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸ ಫಲಕಾರಿಯಾಗಿಲ್ಲ. ಕುಮಟಾ(Kumta) ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು, ಪಿ.ಐ. ವಸಂತ ಆಚಾರ್ಯ, ಪಿಎಸ್‌ಐ ಸುಧಾ ಅಘನಾಶಿನಿ ಕುಮಟಾಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಯುವತಿ ಈ ಹಿಂದೆ ಸಹ ಆತ್ಮಹತ್ಯೆಗೆ ಯತ್ನಿಸಿ ಬದುಕಿದ್ದರು. ಅವರು ಪ್ರೀತಿಸುತ್ತಿದ್ದ ಹುಡುಗ ಏಳು ತಿಂಗಳ ಹಿಂದೆ ಸಮುದ್ರದಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

Latest Videos

undefined

Woman Suicide : ಮದುವೆಗೂ ಮುನ್ನವೇ ಒಂದಾಗಿದ್ದ ಜೋಡಿ, ಸಾನಿಟೈಸರ್ ಕುಡಿದು ಗರ್ಭಿಣಿ ಸುಸೈಡ್!

ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಸಾವು

ದಾಬಸ್‌ಪೇಟೆ(Dabaspet): ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಂಪುರ ಹೋಬಳಿ ಕಂಬಾಳು ಗ್ರಾಮದ ಯತೀಶ್‌(32) ಆತ್ಮಹತ್ಯೆಗೊಳಗಾದ ದುರ್ದೈವಿಯಾಗಿದ್ದು, 9 ತಿಂಗಳುಗಳ ಹಿಂದೆ ವಿವಾಹವಾಗಿತ್ತು(Marriage) ಎನ್ನಲಾಗಿದೆ.

ಮೃತಪಟ್ಟ ಯತೀಶ್‌ ವಯಸ್ಸಿನಲ್ಲಿ ಕಿರಿಯರಾಗಿದ್ದರೂ ಬಹಳ ದಿನಗಳಿಂದ ಅನಾರೋಗ್ಯಕ್ಕಿಡಾಗಿದ್ದರು(Illness) ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಕಡಿಮೆಯಾಗದ ಕಾರಣ ಮಾನಸಿಕವಾಗಿ ನೊಂದು ಜ.7ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು(Police) ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಬ್ಯಾಡಗಿ(Byadagi): ಕಳೆದ ಎರಡು ದಿನಗಳ ಹಿಂದೆಯಷ್ಟೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಶುಕ್ರವಾರ ತಡರಾತ್ರಿ ಮೃತಪಟ್ಟ ಘಟನೆ ವರದಿಯಾಗಿದೆ.

ಪಟ್ಟಣದ ಸುನಿಲ್‌ ಶೇಖರ್‌ ಶೆಟ್ಟಿ(30) ಮೃತಪಟ್ಟ ವ್ಯಕ್ತಿ. ಪಟ್ಟಣದ ಹೋಟೆಲ್‌ವೊಂದರಲ್ಲಿ ಕ್ಲೀನರ್‌ ಕೆಲಸ ಮಾಡಿ ಕೊಂಡಿದ್ದ ಸುನೀಲ್‌ ತನ್ನ ತಾಯಿಯ ನಿಧನದಿಂದಾಗಿ ಕಳೆದ ವರ್ಷದಿಂದ ಮದ್ಯವ್ಯಸನ(Alcohol) ದಾಸನಾಗಿದ್ದ. ಮಾನಸಿಕವಾಗಿ ನೊಂದಿದ್ದ ಸುನೀಲ್‌ ಕಳೆದ ಜ.5ರಂದು ಪಟ್ಟಣದ ಬಾರ್‌ವೊಂದರ ಸಮೀಪ ವಿಷ ಸೇವಿಸಿದ್ದ ಎನ್ನಲಾಗಿದೆ. ಬಳಿಕ ಆತನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌(KIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಜೀವನ್ಮರಣದ ಹೋರಾಟದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Suicide Case: ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾದ ಅನ್ನದಾತ

ಹೊಟ್ಟೆ ನೋವು ತಾಳಲಾರದೇ ವ್ಯಕ್ತಿ ನೇಣಿಗೆ ಶರಣು

ದಾಬಸ್‌ಪೇಟೆ: ಹೊಟ್ಟೆ ನೋವು(Stomach Pain) ತಾಳಲಾರದೆ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂಲತಃ ಆಂಧ್ರಪ್ರದೇಶದ(Andhra Pradesh) ಕೊತ್ತೂರು ಗ್ರಾಮದ ನಿವಾಸಿ ರಾಮಕೃಷ್ಣ ಮೃತ ವ್ಯಕ್ತಿ. ಎರಡು ವರ್ಷಗಳಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಮೃತಪಟ್ಟ ರಾಮಕೃಷ್ಣ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದು, ಒಂದು ವರ್ಷದಿಂದ ಹೊಟ್ಟೆನೋವು ಬರುತ್ತಿತ್ತು ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಕಡಿಮೆಯಾಗದ ಕಾರಣ ಮಾನಸಿಕವಾಗಿ ನೊಂದು ಜ.7ರಂದು ಮಧ್ಯಾಹ್ನ 2.30 ಗಂಟೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

click me!