ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

By Govindaraj S  |  First Published Jun 23, 2023, 10:58 AM IST

ಸಿಲಿಕಾನ್ ಸಿಟಿಯಲ್ಲಿ ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನಪ್ಪಿದ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ. ಲಖ್ನೋ ಮೂಲದ ಅಮೃತಾ ಶರ್ಮ (27) ಸಾವನ್ನಪ್ಪಿದ ಮಹಿಳೆ. 
 


ಬೆಂಗಳೂರು (ಜೂ.23): ಸಿಲಿಕಾನ್ ಸಿಟಿಯಲ್ಲಿ ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನಪ್ಪಿದ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ. ಲಖ್ನೋ ಮೂಲದ ಅಮೃತಾ ಶರ್ಮ (27) ಸಾವನ್ನಪ್ಪಿದ ಮಹಿಳೆ. ಕುಟುಂಬದ ಜೊತೆ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಕಿಚನ್‌ಗೆ ಅಟ್ಯಾಚ್ ಆದ ಬಾಲ್ಕನಿಯ ಹತ್ತನೇ ಮಹಡಿಯಿಂದ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯರು ಮಹಿಳೆಯನ್ನು ಅಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮಹಿಳೆ ಅಮೃತಾ ಶರ್ಮ ಸಾವನ್ನಪ್ಪಿದ್ದಾರೆ. 

ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ಅಂಬೇಡ್ಕರ್ ಅಸ್ಪತ್ರೆಗೆ ರವಾನಿಸಲಾಗಿದೆ. ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಮಹಿಳೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದರು. ಇತ್ತೀಚೆಗೆ ಮಹಿಳೆಯು ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದರು. ಸದ್ಯ ಲಖನೌನಿಂದ ಮೃತಳ ತಾಯಿ ಆಗಮಿಸುತಿದ್ದು, ಯಲಹಂಕ ನ್ಯೂಟೌನ್ ಪೊಲೀಸರಿಂದ ತನಿಖೆ ಮುಂದುವರಿದಿದೆ.

Tap to resize

Latest Videos

ಅಕ್ಕಿ ಸಿಗದ ಕಾರಣ ಜುಲೈನಿಂದ ಅನ್ನಭಾಗ್ಯ ಜಾರಿ ಇಲ್ಲ, ಆಗಸ್ಟ್‌ಗೆ ನೀಡಲು ಯತ್ನ: ಸಚಿವ ಮುನಿಯಪ್ಪ

ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತಪಟ್ಟಿದ್ದ ಮಹಿಳೆಯ ಮಗು ಸಾವು: ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ.20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀರಾ ರಕ್ತಸ್ರಾವದಿಂದ ಮೃತಪಟ್ಟಬೆನ್ನಲ್ಲೇ ಅವರ ಹಸುಗೂಸು ಗುರುವಾರ ಮುಂಜಾನೆ ಅಸುನೀಗಿದೆ. ಭವ್ಯ ಅವರು 3ನೇ ಹೆರಿಗೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವೇಳೆ ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದರು. ನವಜಾತ ಶಿಶುವನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತರೆ ದೇಶವನ್ನೇ ಕಳೆದುಕೊಳ್ಳಲಿದೆ: ಸಿ.ಟಿ.ರವಿ

ಜಿಲ್ಲಾಧಿಕಾರಿಗೆ ದೂರು: ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಲಿಖಿತ ದೂರು ಸಲ್ಲಿಸಿರುವ ಮೃತ ಮಹಿಳೆಯ ಗಂಡ ಬಾಲಕೃಷ್ಣ ಗೌಡ, ತನ್ನ ಪತ್ನಿ ಮಂಗಳವಾರ ಸಾಯಂಕಾಲ 6.30ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡು ನೋವಿನಿಂದ ಒದ್ದಾಡುತ್ತಿದ್ದರೂ 8.30ರ ಸುಮಾರಿಗೆ ಬಲವಂತಿಕೆಯ ಹೆರಿಗೆಯಾಗುವಂತೆ ಮಾಡಿದ್ದರಿಂದಲೇ ತನ್ನ ಪತ್ನಿ ಹಾಗೂ ಮಗು ಮೃತಪಡಲು ಕಾರಣವೆಂದು ಆರೋಪಿಸಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ದೂರು ಸ್ವೀಕರಿಸಿರುವ ಜಿಲ್ಲಾಧಿಕಾರಿಯವರು ಭರವಸೆ ನೀಡಿದ್ದಾರೆ.

click me!