ಮಡಿಕೇರಿಯಲ್ಲಿ ಭೀಕರ ಅಪಘಾತ, ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಬಲಿ

Published : Jul 25, 2025, 03:08 PM IST
four youths killed Kodagu road accident

ಸಾರಾಂಶ

ಕೊಡಗು ಜಿಲ್ಲೆಯ ದೇವರಕೊಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಸಮೀಪದ ಕೊಯಿನಾಡು ಎಂಬಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈ ದುರ್ಘಟನೆ ಮಡಿಕೇರಿ–ಮಂಗಳೂರು ರಾಷ್ಟ್ರೀಯ ಹೆದ್ದಾರಿ 275 ರ ದೇವರಕೊಲ್ಲಿ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಲಾರಿ ಹಾಗೂ ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮಿಕ್ಕ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣಬಿಟ್ಟಿದ್ದಾರೆ.

ಮೃತಪಟ್ಟವರನ್ನು ನಿಹಾದ್, ರಿಷಾನ್, ರಷಿಬ್ ಹಾಗೂ ಇನ್ನೊಬ್ಬ ಯುವಕನ ಗುರುತು ಪತ್ತೆಯಾಗಿಲ್ಲ.  ಮೃತರೆಲ್ಲರೂ  ಕೊಡಗು ಜಿಲ್ಲೆಯ ಗೋಣಿಕೊಪ್ಪ ಮೂಲದವರಾಗಿದ್ದಾರೆ. ಅಪಘಾತದ ವೇಳೆ ಕಾರು  ಮಂಗಳೂರಿನಿಂದ  ಮಡಿಕೇರಿ ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿದ್ದ ನಾಲ್ಕು ಮಂದಿ ಗುರುವಾರ ಉಳ್ಳಾಲಕ್ಕೆ ಹೋಗಿ ಹಿಂತಿರುಗುವಾಗ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ತೆರವಿನ ಕಾರ್ಯ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಡುಪಿ: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿಯರಿಗೆ ಆಶ್ರಯ; ಪ್ರಕರಣ ದಾಖಲು!
ಕೆಲಸದಾಳು ಜೊತೆಗೇ ಯಜಮಾನಿಯ ಕುಚ್​ ಕುಚ್! ಅಮ್ಮನ ಕಳ್ಳಾಟ ಕಣ್ಣಾರೆ ಕಂಡ ಮಗ, 6 ತಿಂಗಳ ಕೊಲೆ ಕೇಸ್ ಈಗ ಬಯಲಾಗಿದ್ದೇ ರೋಚಕ!​​