ನಿರ್ಜನ ಪ್ರದೇಶದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶುಕ್ರವಾರ ನಗರದಲ್ಲಿ ನಡೆದಿದ್ದು, ಈ ಘಟನೆಯಿಂದ ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ.
ಬೆಳಗಾವಿ (ಜು.15) : ನಿರ್ಜನ ಪ್ರದೇಶದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶುಕ್ರವಾರ ನಗರದಲ್ಲಿ ನಡೆದಿದ್ದು, ಈ ಘಟನೆಯಿಂದ ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ.
ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ನಿವಾಸಿ ಅರ್ಬಾಜ್ ರಫೀಕ್ ಮುಲ್ಲಾ (26) ಕೊಲೆಯಾದ ದುರ್ದೈವಿ. ಇಲ್ಲಿನ ಜೈನ್ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದಲ್ಲಿರುವ ನಿರ್ಜನ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾಗಿದೆ. ಶುಕ್ರವಾರ ಬೆಳಿಗ್ಗೆ ಅರ್ಬಾಜ್‌ನ ಮೃತದೇಹವನ್ನು ನೋಡಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಾಂಜಾ ಅಥವಾ ಮದ್ಯದ ಅಮಲಿನಲ್ಲಿ ಹತ್ಯೆ ಮಾಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಹಿತಿ ಲಭ್ಯವಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶೇಖರ್.ಎಚ್.ಟಿ., ಎಸಿಪಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಅಲ್ಲದೇ ಶ್ವಾನ ದಳ, ಬೆರಳಚ್ಚು ವಿಭಾಗದ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
Jain monk murder case: ಹಂತಕನ ಮನೆಯ ಪಶುಗಳ ಪೋಷಿಸುತ್ತಿರುವ ಪೊಲೀಸರು!
ಈ ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿಳುವ ಜತೆಗೆ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಹತ್ಯೆಗೀಡಾದ ಅರ್ಬಾಜ್ ಮುಲ್ಲಾ ಕುಟುಂಬಸ್ಥರು ಆಗಮಿಸಿ ಆಕ್ರಂದನ ವ್ಯಕ್ತಪಡಿಸಿದ್ದಾರೆ. ಬಳಿಕ ಬೆಳಗಾವಿ ಬಿಮ್ಸ್‌ಗೆ ಅರ್ಬಾಜ… ಮುಲ್ಲಾ ಮೃತದೇಹ ತೆಗೆದುಕೊಂಡು ಹೋಗಿ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.