Numerology Today: ಇಂದು ಭೂಮಿ ಖರೀದಿಸಿದರೆ ಈ ಸಂಖ್ಯೆಯಿಂದ ಕಂಟಕ..!

By Chirag Daruwalla  |  First Published Jul 31, 2023, 9:53 AM IST

ಸಂಖ್ಯಾ ಶಾಸ್ತ್ರದ ಪ್ರಕಾರ ನಿಮ್ಮ ಈ ದಿನದ ಭವಿಷ್ಯವೇನು ಎಂಬುದನ್ನು ತಿಳಿಯಿರಿ. ನಿಮ್ಮ ಸಂಖ್ಯೆ ಯಾವುದೆಂಬುದನ್ನು ಕಂಡುಕೊಳ್ಳಲು, ನಿಮ್ಮ ಜನ್ಮ ದಿನಾಂಕದ ಅಂಕಿಗಳನ್ನು ಸೇರಿಸಿ. ಉದಾಹರಣೆಗೆ ನಿಮ್ಮ ಜನ್ಮ ದಿನಾಂಕ 23 ಆಗಿದ್ದರೆ 2 + 3 = 5. 5 ನಿಮ್ಮ ಸಂಖ್ಯೆಯಾಗಿರುತ್ತದೆ. ಈಗ ನೀವು ಸಂಖ್ಯೆ 5ರ ಮೇಲೆ ನಿಮ್ಮ ಸಂಖ್ಯಾಶಾಸ್ತ್ರ(Numerology)ದ ಮುನ್ಸೂಚನೆಯನ್ನು ಪರಿಶೀಲಿಸಬೇಕು.


ಸಂಖ್ಯೆ 1 (ಯಾವುದೇ ತಿಂಗಳ 1, 10, 19 ಮತ್ತು 28 ರಂದು ಜನಿಸಿದ ಜನರು)

ಇಂದು ಯಾವುದೇ ಅಪೂರ್ಣ ಕೆಲಸವನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ನೀವು ಜನರಲ್ಲಿ ಪ್ರಶಂಸೆಗೆ ಪಾತ್ರರಾಗುತ್ತೀರಿ. ಮಕ್ಕಳ ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿಮ್ಮ ಕೊಡುಗೆ ಅಗತ್ಯ.

Tap to resize

Latest Videos

undefined

ಸಂಖ್ಯೆ 2 (ಯಾವುದೇ ತಿಂಗಳ 2, 11, 20 ಅಥವಾ 29 ರಂದು ಜನಿಸಿದ ಜನರು)

ಇಂದು ನೀವು ನಿಮ್ಮ ಆತ್ಮೀಯ ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕಾಗಬಹುದು. ಕುಟುಂಬ ಸದಸ್ಯರೊಂದಿಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಸಮಯ ಕಳೆಯುವಿರಿ. ಆರೋಗ್ಯ ಚೆನ್ನಾಗಿರುತ್ತದೆ.

ಸಂಖ್ಯೆ 3 (ಯಾವುದೇ ತಿಂಗಳ 3, 12, 21, 30 ರಂದು ಜನಿಸಿದ ಜನರು)

ಇಂದು ನಿಮ್ಮ ಗಮನವು ನಿರ್ದಿಷ್ಟ ವಿಷಯದ ಮೇಲೆ ಕೇಂದ್ರೀಕೃತವಾಗಿರುತ್ತದೆ. ಇತರ ಜನರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬೇಡಿ. ಭೂಮಿಯ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ಯಾವುದೇ ಯೋಜನೆಯನ್ನು ಇಂದು ತಪ್ಪಿಸಬೇಕು.

ಸಂಖ್ಯೆ 4 (ಯಾವುದೇ ತಿಂಗಳ 4, 13, 22 ಅಥವಾ 31 ರಂದು ಜನಿಸಿದ ಜನರು)

ಇಂದು ನಿಮ್ಮ ಆಸಕ್ತಿಯ ಚಟುವಟಿಕೆಗಳಿಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳಿ. ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಗೆ ಇಂದು ಪರಿಹಾರ ಸಿಗಲಿದೆ. ಸಾರ್ವಜನಿಕ ವ್ಯವಹಾರ ಮತ್ತು ವ್ಯಾಪಾರೋದ್ಯಮದಲ್ಲಿ ಯಶಸ್ಸು ಇರುತ್ತದೆ.

ಬಂದೇ ಬಿಡ್ತು ಗಣೇಶನ ಹಬ್ಬ; ಈ ವರ್ಷ ಚತುರ್ಥಿ ಯಾವಾಗ?, ಪೂಜಾ ವಿಧಾನ ತಿಳಿಯಿರಿ..!

 

ಸಂಖ್ಯೆ 5 (ಯಾವುದೇ ತಿಂಗಳ 5, 14, 23 ರಂದು ಜನಿಸಿದ ಜನರು)

ಇತರರ ಸಲಹೆಗಿಂತ ನಿಮ್ಮ ಸ್ವಂತ ನಿರ್ಧಾರಕ್ಕೆ ಆದ್ಯತೆ ನೀಡುವುದು ಉತ್ತಮ. ಸಮಯಕ್ಕೆ ತಕ್ಕಂತೆ ನಿಮ್ಮ ಜೀವನ ಶೈಲಿಯನ್ನು ಬದಲಾಯಿಸುವುದು ಅವಶ್ಯಕ.  ಹೆಚ್ಚಿನ ಒತ್ತಡ ಮತ್ತು ಕೆಲಸದ ಕಾರಣದಿಂದಾಗಿ ತಲೆನೋವು ಸಂಭವಿಸಬಹುದು.

ಸಂಖ್ಯೆ 6 (ಯಾವುದೇ ತಿಂಗಳ 6, 15 ಅಥವಾ 24 ರಂದು ಜನಿಸಿದ ಜನರು)

ಮನೆಯಲ್ಲಿ ಸಂಬಂಧಿಕರು ಅಥವಾ ಆಪ್ತ ಸ್ನೇಹಿತರ ಉಪಸ್ಥಿತಿಯು ಸಂತೋಷವನ್ನು ಉಂಟುಮಾಡುತ್ತದೆ. ಇಂದು ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಬೇಡಿ. ವೈವಾಹಿಕ ಜೀವನದಲ್ಲಿ ಸರಿಯಾದ ಸಾಮರಸ್ಯ ಇರಲಿದೆ.

ಸಂಖ್ಯೆ 7 (ಯಾವುದೇ ತಿಂಗಳ 7, 16 ಮತ್ತು 25 ರಂದು ಜನಿಸಿದ ಜನರು)

ಇಂದು ಮನೆ ನಿರ್ವಹಣೆ ಕಾರ್ಯಗಳಲ್ಲಿ ಸುಧಾರಣೆಗಳನ್ನು ಮಾಡಬಹುದು. ತಾಂತ್ರಿಕ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕ ವಾತಾವರಣ ಸಂತೋಷವಾಗಿರಬಹುದು. ಕೀಲು ನೋವು ಇರಬಹುದು.

ಸಂಖ್ಯೆ 8 (ಯಾವುದೇ ತಿಂಗಳ 8, 17 ಮತ್ತು 26 ರಂದು ಜನಿಸಿದ ಜನರು)

ಕುಟುಂಬದ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಬರಬಹುದು.‌ ಧಾರ್ಮಿಕ ಅಥವಾ ಆಧ್ಯಾತ್ಮಿಕ ಸ್ಥಳಕ್ಕೆ ಹೋಗುವುದರಿಂದ, ಮನಸ್ಸಿಗೆ ವಿಶ್ರಾಂತಿ ಮತ್ತು ಶಾಂತಿ ಸಿಗಲಿದೆ. ವ್ಯವಹಾರಕ್ಕೆ ಸಂಬಂಧಿಸಿದ ಸಣ್ಣ ವಿಷಯಕ್ಕೂ ಗಮನ ಹರಿಸುವುದು ಅವಶ್ಯಕ.

ಶುಕ್ರನ ಹಿಮ್ಮುಖ ಚಲನೆ; ನಿಮ್ಮಿಂದ 'ಭಾಗ್ಯಲಕ್ಷ್ಮಿ' ದೂರ..!

 

ಸಂಖ್ಯೆ 9 (ಯಾವುದೇ ತಿಂಗಳ 9, 18 ಮತ್ತು 27 ರಂದು ಜನಿಸಿದ ಜನರು)

ನಿಮ್ಮ ಮಾತು ಮತ್ತು ನಟನೆಯ ಶೈಲಿಯಿಂದ ಜನರು ಪ್ರಭಾವಿತರಾಗುತ್ತಾರೆ. ಸಮಯದ ಮೌಲ್ಯವನ್ನು ಗುರುತಿಸಿ. ವ್ಯವಹಾರದಲ್ಲಿ ತಾಳ್ಮೆ ಮತ್ತು ಸೌಮ್ಯತೆ ಅತ್ಯಗತ್ಯ.
ಹಳೆಯ ಆಸ್ತಿಗಳಿಗೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರ ಸಿಗಲಿದೆ.

click me!