2023ರ ಅಂತ್ಯಕ್ಕೆ ಪ್ರತಿ ಮನೆಗೆ ನಳ್ಳಿ ನೀರು: ಡಾ. ಕುಮಾರ್‌

By Anusha KbFirst Published Apr 10, 2022, 4:11 AM IST
Highlights
  • ತಾಂತ್ರಿಕ ಸಿಬ್ಬಂದಿಗಳಿಗೆ ಎರಡು ದಿನದ ಕಾರ್ಯಾಗಾರ
  • ಜಲಜೀವನ್‌ ಮಿಷನ್‌ ಯೋಜನೆಯ ಅನುಷ್ಠಾನಕ್ಕೆ ತರಬೇತಿ
  • 2023ರ ಅಂತ್ಯಕ್ಕೆ ಪ್ರತಿ ಮನೆಗೆ ನಳ್ಳಿ ನೀರು

ಮಂಗಳೂರು(ಏ.10): ಜಲಜೀವನ್‌ ಮಿಷನ್‌ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023ರ ಅಂತ್ಯದೊಳಗೆ ಪ್ರತಿ ಮನೆಗೆ ನಳ್ಳಿ ನೀರು ಸಂಪರ್ಕವನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ದಕ್ಷಿಣ ಕನ್ನಡ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್‌ (Dr. Kumar) ಹೇಳಿದ್ದಾರೆ. ಜಿಲ್ಲಾ ಪಂಚಾಯ್ತಿ (ZP) ಮತ್ತು ಗ್ರಾಮೀಣ ಕುಡಿಯುವ ನೀರು (Rural Drinking water) ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಎಂಜಿನಿಯರ್‌ಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ಹಾಗೂ ಒಂದು ದಿನದ ಕ್ಷೇತ್ರ ಭೇಟಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜಲಜೀವನ್‌ ಮಿಷನ್‌ (Jala Jeevan Mission) ಯೋಜನೆಯಡಿ ಒಟ್ಟು 3 ಹಂತಗಳಲ್ಲಿ 700 ಕಾಮಗಾರಿಗಳನ್ನು 516 ಕೋಟಿ ರು. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಒಟ್ಟು 468 ಕಾಮಗಾರಿಗಳನ್ನು 179 ಕೋಟಿ ರು. ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದು, ಈವರೆಗೆ 239 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ, ಸುಮಾರು 29 ಸಾವಿರ ವೈಯುಕ್ತಿಕ ನಳ್ಳಿ ನೀರು ಸಂಪರ್ಕಕ್ಕೆ ಫಲಾನುಭವಿಗಳನ್ನು ಗುರುತಿಸಲಾಗಿದೆ. 2ನೇ ಹಂತದಲ್ಲಿ ಒಟ್ಟು 124 ಕಾಮಗಾರಿಗಳನ್ನು 210 ಕೋಟಿ ರು. ವೆಚ್ಚದಲ್ಲಿ ಯೋಜಿಸಲಾಗಿದ್ದು, ಪ್ರಸ್ತುತ ಟೆಂಡರ್‌, ಕಾರ್ಯಾದೇಶ ಹಾಗೂ ಕಾಮಗಾರಿ ಪ್ರಾರಂಭ ಹಂತದಲ್ಲಿದೆ. 3ನೇ ಹಂತದಲ್ಲಿ ಒಟ್ಟು 108 ಕಾಮಗಾರಿಗಳನ್ನು 127 ಕೋಟಿ ರು. ಅಂದಾಜು ವೆಚ್ಚದಲ್ಲಿ ಯೋಜಿಸಲಾಗಿದ್ದು, ಡಿಪಿಆರ್‌ (DPR)ತಯಾರಿಕ ಹಂತದಲ್ಲಿದೆ ಎಂದು ತಿಳಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣ..!

ಜಿಲ್ಲೆಯಲ್ಲಿ ಸುಸ್ಥಿರ ಜಲಮೂಲವನ್ನು ಆಧಾರಿಸಿ ಒಟ್ಟು 7 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು 487 ಕೋಟಿ ರು. ಅಂದಾಜು ವೆಚ್ಚದಲ್ಲಿ ಯೋಜಿಸಲಾಗಿದ್ದು, 2 ಕಾಮಗಾರಿಗಳು ಟೆಂಡರ್‌ (Tender)  ಅನುಮೋದನೆ ಹಂತದಲ್ಲಿವೆ. ಉಳಿದ 5 ಕಾಮಗಾರಿಗಳ ಪ್ರಾಥಮಿಕ ಯೋಜನಾ ವರದಿಯು ತಯಾರಿಕೆಯಲ್ಲಿದೆ. ಈ ಎಲ್ಲ ಯೋಜನೆಗಳನ್ನು 2023ರ ಅಂತ್ಯದೊಳಗೆ ಪೂರ್ಣಗೊಳಿಸಿ ಜಿಲ್ಲೆಯ ಎಲ್ಲ ಕುಟುಂಬಗಳಿಗೆ ವೈಯುಕ್ತಿಕ ನಳ ನೀರು (Tap Water) ಸಂಪರ್ಕವನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರತಿಯೊಂದು ವ್ಯಕ್ತಿಗೆ ಜೀವಿಸುವ ಹಕ್ಕು ಹೇಗೆ ಇದೆಯೋ ಅದೇ ರೀತಿ ಶುದ್ಧ ಕುಡಿಯುವ ನೀರನ್ನು ಪಡೆಯುವ ಹಕ್ಕು ಇದೆ. ಇದರ ಜತೆಗೆ ಜಲ ಸಂರಕ್ಷಣೆ, ನೀರಿನ ಮಿತಬಳಕೆ ಹಾಗೂ ಶುದ್ಧ ಕುಡಿಯುವ ನೀರಿನ ಮಹತ್ವವನ್ನು ಎಲ್ಲರೂ ತಿಳಿದುಕೊಳ್ಳುವುದು ಅಗತ್ಯ ಎಂದು ಹೇಳಿದರು. ಜಲಜೀವನ್‌ ಮಿಷನ್‌ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಯೋಜಿಸಲಾಗಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲಾ (District) ಹಾಗೂ ತಾಲೂಕು  (Taluk) ಮಟ್ಟದಲ್ಲಿರುವ ಎಂಜಿನಿಯರ್‌ಗಳು ಪರಿಮಾಣಕಾರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಯೋಜನೆಯನ್ನು ಪೂರ್ಣಗೊಳಿಸಬಹುದು ಎಂದು ಡಾ.ಕುಮಾರ್‌ ಸಲಹೆ ನೀಡಿದರು.

ಬಜರಂಗದಳ ಮುಖಂಡನಿಂದ ಕೊಲೆ: ಮೃತನ ಕುಟುಂಬಕ್ಕೆ 1 ಲಕ್ಷ ಪರಿಹಾರ ಕೊಟ್ಟ ಸಿದ್ದರಾಮಯ್ಯ

ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಮತ್ತು ನೈರ್ಮಲ್ಯದ ಮೈಸೂರು ವೃತ್ತದ ಅಧೀಕ್ಷಕ ಎಂಜಿನಿಯರ್‌ ಕೆ.ಎನ್‌. ಕೃಷ್ಣಮೂರ್ತಿ (Krishnamurthy) , ಬೆಂಗಳೂರು (Banglore) ಕೇಂದ್ರ ಕಚೇರಿಯ ಅಧೀಕ್ಷಕ ಎಂಜಿನಿಯರ್‌ ನರಸಿಂಹರಾಜು (Narasimharaju) ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಶೇಖರ ಮಸಗುಪ್ಪಿ (Chandrasekhar Masaguppi) ಹಾಗೂ ಎಂ.ಆರ್‍. ರಾಮಚಂದ್ರಯ್ಯ (Ramachandraiah) ಇದ್ದರು. ಮಂಗಳೂರಿನ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ. ನರೇಂದ್ರ ಬಾಬು (Narendra Babu) ಸ್ವಾಗತಿಸಿದರು.
 

click me!