ಸಿಎಂ ಆಗಲು ಸಿದ್ದು ತಿರುಕನ ಕನಸು: ಸಚಿವ ಈಶ್ವರಪ್ಪ ಲೇವಡಿ

By Kannadaprabha NewsFirst Published Nov 9, 2019, 10:18 AM IST
Highlights

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ತಿರಾಜ್‌ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಮಂಗಳೂರು(ನ.09): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ತಿರಾಜ್‌ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಬಲಿಗರು ಡಿ.ಕೆ. ಶಿವಕುಮಾರ್‌ ಪರವಾಗಿ ಮೆರವಣಿಗೆ ನಡೆಸಿದ್ದಾರೆ.

ಡಿಕೆಶಿ ಇಡಿ ಕೇಸ್‌ನಿಂದ ಹೊರ ಬಂದಿದ್ದಾರೆಯೇ..?

ಡಿಕೆಶಿ ತಾವೇ ಮುಂದಿನ ಮುಖ್ಯಮಂತ್ರಿ ಎಂಬ ಭ್ರಮೆಯಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಛಿದ್ರವಾಗಿದ್ದರೂ ಅದರ ಮುಖಂಡರು ಭಂಡತನ ಬಿಟ್ಟಿಲ್ಲ. ಡಿಕೆಶಿ ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡುತ್ತಿದ್ದಾರೆ. ಅವರಿಗೆ ಜನತೆ ಉಗಿಯುತ್ತಿದ್ದಾರೆ. ಮೈಸೂರಿನಲ್ಲಿ ಮೆರವಣಿಗೆ ನಡೆಸಲು ಡಿಕೆಶಿ ಏನು ಇಡಿ ಕೇಸಿನಿಂದ ಹೊರಬಂದಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸಿದ್ದ​ರಾ​ಮಯ್ಯ ಹಗಲು ಕನಸು ಈಡೇ​ರ​ದು: ಮಟ್ಟಾ​ರು

ಈಗಾಗಲೇ ಕಾಂಗ್ರೆಸ್‌ ಶಾಸಕರು ರಾಜಿನಾಮೆ ನೀಡಿ ಹೊರಬಂದಿದ್ದಾರೆ. ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್‌ ಶೀಘ್ರವೇ ತೀರ್ಪು ಪ್ರಕಟಿಸಲಿದೆ. ಏನು ತೀರ್ಪು ಬರುತ್ತದೋ ಆ ಪ್ರಕಾರ ನಡೆದುಕೊಳ್ಳುತ್ತೇವೆ. ಅನರ್ಹ ಶಾಸಕರ ರಾಜಿನಾಮೆಯಿಂದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಸತ್ಯ. ಯಾವುದೇ ಕಾರಣಕ್ಕೂ ಅವರಿಗೆ ಅನ್ಯಾಯ ಮಾಡಲ್ಲ ಎಂದು ಅವರು ಹೇಳಿದ್ದಾರೆ.

ಉಪ ಚುನಾವಣೆ: ಬಿಜೆಪಿಯಿಂದ ತೆರೆಮರೆಯ ಸಿದ್ಧತೆ

click me!