ಕೆಲಸ ಕಾಯಂ ಆಮಿಷ: ಅತಿಥಿ ಉಪನ್ಯಾಸಕಿ ಮೇಲೆ ಅತ್ಯಾಚಾರ

By Kannadaprabha News  |  First Published Nov 14, 2019, 10:51 AM IST

ಶಾಲಾ ಅತಿಥಿ ಶಿಕ್ಷಕಿಯಾಗಿದ್ದ ವೇಳೆ ಕೆಲಸವನ್ನು ಕಾಯಂಗೊಳಿಸುವ ಆಮಿಷವೊಡ್ಡಿ ೨೮ರ ಹರೆಯದ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಪದ್ಮುಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ (41) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಮಂಗಳೂರು(ನ.14): ಶಾಲಾ ಅತಿಥಿ ಶಿಕ್ಷಕಿಯಾಗಿದ್ದ ವೇಳೆ ಕೆಲಸವನ್ನು ಕಾಯಂಗೊಳಿಸುವ ಆಮಿಷವೊಡ್ಡಿ ೨೮ರ ಹರೆಯದ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಪದ್ಮುಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ (41) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್, ಶಾಲೆಯ ಅತಿಥಿ ಶಿಕ್ಷಕಿಯಾಗಿದ್ದ ತನ್ನ ಕೆಲಸವನ್ನು ಕಾಯಂಗೊಳಿಸುವ ಆಸೆಯೊಡ್ಡಿ ತನ್ನ ಮೇಲೆ ಕಳೆದ ಏ.14ರಂದು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ನ.10ರಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಂದು ನಡೆದ ಘಟನೆಯಿಂದ ಮಾನಸಿಕವಾಗಿ ನೊಂದ ತಾನು ಹೆದರಿಕೆಯಿಂದ ತಕ್ಷಣವೇ ಪೊಲೀಸರಿಗೆ ದೂರು ನೀಡಿಲ್ಲ ಎಂದು ಸಂತ್ರಸ್ತ ಶಿಕ್ಷಕಿ ದೂರಿನಲ್ಲಿ ತಿಳಿಸಿದ್ದಾರೆ.

Tap to resize

Latest Videos

undefined

ವೋಡ್ಕಾ ಕುಡಿಸಿ ಕಾರಿನಲ್ಲೇ ಅತ್ಯಾಚಾರ ಮಾಡಿದ ವೈದ್ಯ..!

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ಮಂಜುನಾಥ್‌ನನ್ನು ಮಂಗಳವಾರ ಉಪ್ಪಿನಂಗಡಿಯಲ್ಲಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಮಧ್ಯೆ ಆರೋಪಿ ಮುಖ್ಯ ಶಿಕ್ಷಕ ಮಂಜುನಾಥ್ ದೈಹಿಕವಾಗಿ ಅಸ್ವಸ್ಥನಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುರಸಭೆ ಚುನಾವಣೆ ಫಲಿತಾಂಶ: ಮದುವೆಯ ದಿನವೇ ಮದುಮಗನಿಗೆ ಸೋಲು

click me!