ಮಂಗಳೂರು ಪಾಲಿಕೆ ಚುನಾವಣೆ: 3 ವಾರ್ಡ್‌ಗಳಲ್ಲಿ BJP ಗೆಲುವು

By Web DeskFirst Published Nov 14, 2019, 8:53 AM IST
Highlights

ಮಹಾನಗರ ಪಾಲಿಕೆಯ ಒಟ್ಟು 60 ವಾಡ್ ಗರ್ಳಲ್ಲಿ ಕಣಕ್ಕಿಳಿದ 180 ಮಂದಿ ಸ್ಪರ್ಧಿಗಳ ಭವಿಷ್ಯ ನ.14ರಂದು ತೀರ್ಮಾನವಾಗಲಿದೆ. 21 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ನಡೆದಿದ್ದು, 24 ವಾರ್ಡ್‌ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮಂಗಳೂರು ಮಹಾನಗರ ಪಾಲಿಕೆ ಮತ ಎಣಿಕೆ ಪ್ರಾರಂಭವಾಗಿದ್ದು, ಮೂರು ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಮಂಗಳೂರು(ನ.14): ಮಹಾನಗರ ಪಾಲಿಕೆಯ ಒಟ್ಟು 60 ವಾಡ್ ಗರ್ಳಲ್ಲಿ ಕಣಕ್ಕಿಳಿದ 180 ಮಂದಿ ಸ್ಪರ್ಧಿಗಳ ಭವಿಷ್ಯ ನ.14ರಂದು ತೀರ್ಮಾನವಾಗಲಿದೆ. 21 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ನಡೆದಿದ್ದು, 24 ವಾರ್ಡ್‌ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 9 ವಾರ್ಡ್ ಗಳಲ್ಲಿ ತಲಾ 4 ಅಭ್ಯರ್ಥಿಗಳಿದ್ದರೆ, 6 ವಾರ್ಡ್‌ಗಳಲ್ಲಿ ಗರಿಷ್ಠ ತಲಾ 5 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಿರ್ಧಾರವಾಗಲಿದೆ.

ಮಂಗಳೂರು ಮಹಾನಗರ ಪಾಲಿಕೆ ಮತ ಎಣಿಕೆ ಪ್ರಾರಂಭವಾಗಿದ್ದು, ಮೂರು ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸೆಂಟ್ರಲ್ ‌ಮಾರ್ಕೆಟ್ ವಾರ್ಡ್ ಪೂರ್ಣಿಮಾ, ಸುರತ್ಕಲ್ ಪಶ್ಚಿಮ ವಾರ್ಡ್ ಶೋಭಾ ರಾಜೇಶ್, ಮಂಗಳಾದೇವಿ ವಾರ್ಡ್ ಪ್ರೇಮಾನಂದ ಶೆಟ್ಟಿ ಗೆಲುವಿನ ನಗು ಬೀರಿದ್ದಾರೆ.

ಮಂಗಳೂರು ಪಾಲಿಕೆ ಚುನಾವಣೆ: ಮತ ಎಣಿಕೆ, ನಿಷೇಧಾಜ್ಞೆ

ಮಂಗಳೂರು ಮಹಾನಗರ ಪಾಲಿಕೆಗೆ ಮಂಗಳವಾರ ನಡೆದ ಚುನಾವಣೆಯ ಮತ ಎಣಿಕೆ ನ.14ರಂದು ನಗರದ ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧು ರೂರೇಶ್ ಬುಧವಾರ ಅಂತಿಮ ಸಿದ್ಧತೆಯ ಪರಿಶೀಲನೆ ನಡೆಸಿದ್ದಾರೆ. ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಸಿಆರ್‌ಪಿಸಿ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ : ಮತ ಎಣಿಕೆ ಆರಂಭ

click me!