ಮಂಗಳೂರು: ಆತ್ಮಹತ್ಯೆಗೆ ಶರಣಾದ ಮೂಡುಬಿದರೆ ಕಾಲೇಜಿನ ಪ್ರೇಮಿಗಳು

Published : Oct 13, 2019, 10:34 PM IST
ಮಂಗಳೂರು: ಆತ್ಮಹತ್ಯೆಗೆ ಶರಣಾದ ಮೂಡುಬಿದರೆ ಕಾಲೇಜಿನ ಪ್ರೇಮಿಗಳು

ಸಾರಾಂಶ

ಮನೆಯವರ ವಿರೋಧಕ್ಕೆ ಹೆದರಿ ಪ್ರೇಮಿಗಳ ಆತ್ಮಹತ್ಯೆ/ ಮಂಗಳೂರಿನ ವಸತಿಗೃಹದಲ್ಲಿ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ/ ವಿಷ ಕುಡಿದ ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು 

ಮಂಗಳೂರು[ಅ. 13] ಇತ್ತಿಚೇಗೆ ಪ್ರೇಮಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕ ಮೂಡಿಸಿದೆ. ಮನೆಯವರ ವಿರೋಧಕ್ಕೆ ಹೆದರಿ ಮಂಗಳೂರಿನಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರೀತಿಗೆ ಮನೆಯವರ ವಿರೋಧವಿದ್ದ ಕಾರಣ ಯುವಜೋಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರಿನ ವಸತಿಗೃಹದಲ್ಲಿ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇರಳ ಮೂಲದ ಗ್ರೀಷ್ಮಾ(21) ಹಾಗೂ ವಿಷ್ಣು(22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರೂ ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರದ್ದೂ ಜಾತಿ ಬೇರೆಯಾಗಿದ್ದರಿಂದ, ಪ್ರೀತಿಗೆ ಮನೆಯವರ ವಿರೋಧವಿತ್ತು ಎನ್ನಲಾಗಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಉಪ್ಪಿನಂಗಡಿ ಪಂಚಾಯಿತಿಯಲ್ಲಿ ‘ಚಪ್ಪಲಿ’ ವಿವಾದ: ಇದು PDO ಅಧಿಕಾರಿಯ ಮದ ಎಂದು ಖಂಡನೆ
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಲಿದ ಅವಳಿ ಚಿನ್ನದ ಗರಿ, ಗಮನಾರ್ಹ ಸಾಧನೆ