ಸೆಖೆಯಿಂದ ಬೆವರುತ್ತಲೇ ಇರುವ ಕರಾವಳಿಗೆ ಎರಡು ದಿನ ಬಿಸಿ ಗಾಳಿ ಭೀತಿ: ಹವಾಮಾನ ಇಲಾಖೆ

Published : Feb 27, 2025, 08:57 AM ISTUpdated : Feb 27, 2025, 10:49 AM IST
ಸೆಖೆಯಿಂದ ಬೆವರುತ್ತಲೇ ಇರುವ ಕರಾವಳಿಗೆ ಎರಡು ದಿನ ಬಿಸಿ ಗಾಳಿ ಭೀತಿ: ಹವಾಮಾನ ಇಲಾಖೆ

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ. ಫೆಬ್ರವರಿ ತಿಂಗಳಲ್ಲೇ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸೂಚಿಸಲಾಗಿದೆ.

 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ಇದೀಗ ಕರಾವಳಿ ಪ್ರದೇಶಗಳಲ್ಲಿ ಫೆ.26 ಮತ್ತು 27ರಂದು ಉಷ್ಣ ಅಲೆ (ಹೀಟ್‌ ವೇವ್‌) ಎಚ್ಚರಿಕೆ ಘೋಷಿಸಲಾಗಿದೆ. 

ಹಳದಿ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಇರುವುದು, ನೇರ ಬಿಸಿಲು/ ಬಿಸಿ ಗಾಳಿಗೆ ಮೈ ಒಡ್ಡದಿರುವುದು ಸೇರಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸೂಚನೆ ನೀಡಲಾಗಿದೆ.

ಉಷ್ಣ ಅಲೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನ ಬುಧವಾರ ಭಾರೀ ಏರಿಕೆ ಕಂಡಿದೆ. ಫೆಬ್ರವರಿ ತಿಂಗಳಲ್ಲೇ ಅತ್ಯಂತ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದರೆ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿತ್ತು. ಸಾಮಾನ್ಯವಾಗಿ ಏಪ್ರಿಲ್‌, ಮೇ ತಿಂಗಳಲ್ಲಿ ಕಂಡುಬರುವ ಉಷ್ಣಾಂಶ ಈಗಲೇ ದಾಖಲಾಗಿರುವುದು ಆತಂಕ ಹೆಚ್ಚಿಸಿದೆ. ಅಕಾಲಿಕ ಮಳೆ ಸಾಧ್ಯತೆ ಇರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

PREV
Read more Articles on
click me!

Recommended Stories

ಪುತ್ತೂರು ಬಿಜೆಪಿ ನಾಯಕನ ಪುತ್ರನಿಂದ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ: ಆತ್ಮ*ಹತ್ಯೆಗೆ ಯತ್ನಿಸಿದ ಮಗುವಿನ ತಾಯಿ
ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಶವ ಪತ್ತೆ; ಅಪಘಾತದಲ್ಲಿ ಬೈಕ್ ಸವಾರ ಸಾವು